Railway Recruitment: SSLC ಪಾಸ್ ಆಗಿದ್ದರೆ ಇಂದೇ ಅರ್ಜಿ ಸಲ್ಲಿಸಿ, ರೈಲ್ವೆ ಇಲಾಖೆಯಲ್ಲಿ 3000 ಹುದ್ದೆಗಳಿಗೆ ಅರ್ಜಿ ಆಹ್ವಾನ

SSLC ಪಾಸ್ ಆದವರಿಗೆ ರೈಲ್ವೆ ಇಲಾಖೆಯಲ್ಲಿ ನೇಮಕಾತಿ

RRC Northern Railway Recruitment 2023: ರೈಲ್ವೆ ಇಲಾಖೆಯಲ್ಲಿ (Railway Department) ಉದ್ಯೋಗ ಮಾಡಬೇಕು ಎಂಬ ಆಸೆ ಇರುವವರಿಗೆ ಇಲ್ಲಿದೆ ಒಂದು ಉತ್ತಮ ಅವಕಾಶ. ಉತ್ತರ ರೈಲ್ವೆಯ ಹುದ್ದೆಗಳ ನೇಮಕಾತಿ ಬಗ್ಗೆ ಮಾಹಿತಿ ಹೊರಬಿದ್ದಿದು, ಸಾವಿರಾರು ಹುದ್ದೆಗಳು ಖಾಲಿ ಇದ್ದು,

ಈ ಹುದ್ದೆಗಳನ್ನು ಭರ್ತಿಮಾಡಲು ಅರ್ಜಿ ಆಹ್ವಾನ ಆಗಿದೆ, ಹಾಗಾಗಿ ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ . ಉತ್ತರ ರೈಲ್ವೆಯ ರೈಲ್ವೆ ನೇಮಕಾತಿ ಕೋಶವು ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿ ಈ ಕೆಳಗಿನಂತಿವೆ.

RRC Northern Railway Recruitment 2023
Image Credit: The Times Of India

ಆರ್‌ಆರ್ಸಿ ಉತ್ತರ ರೈಲ್ವೆ ಹುದ್ದೆ ನೇಮಕಾತಿ ವಿವರ  

ಉತ್ತರ ರೈಲ್ವೆ ಇಲಾಖೆ 3093 ಹುದ್ದೆಗಳನ್ನು ಭರ್ತಿಮಾಡಲು ಈ ನೇಮಕಾತಿ ಡ್ರೈವ್ ನಡೆಸಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಜನವರಿ 11, 2024 ಕ್ಕೆ ಅನ್ವಯವಾಗುವಂತೆ 15 ರಿಂದ 24 ವರ್ಷಗಳ ನಡುವೆ ಇರಬೇಕು.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್ಸಿ/ಮೆಟ್ರಿಕ್ಯುಲೇಷನ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇ.50ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಎನ್ವಿಸಿಟಿ / ಎಸ್ಸಿವಿಟಿ ಹೊರಡಿಸಿದ ಸಂಬಂಧಿತ ಟ್ರೇಡ್ನಲ್ಲಿ ಐಟಿಐ ಉತ್ತೀರ್ಣರಾಗಿರಬೇಕು.

ಆರ್‌ಆರ್ಸಿ ಉತ್ತರ ರೈಲ್ವೆ ನೇಮಕಾತಿ 2023 ರ ಅರ್ಜಿ ಶುಲ್ಕ ಬಗ್ಗೆ ವಿವರ

Join Nadunudi News WhatsApp Group

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಎಸ್ಸಿ/ಎಸ್ಟಿ, ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.

Railway Recruitment 2023
Image Credit: Studycafe

ಆರ್‌ಆರ್ಸಿ ಉತ್ತರ ರೈಲ್ವೆ ನೇಮಕಾತಿ 2023 ಆಯ್ಕೆ ಪ್ರಕ್ರಿಯೆ

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಕ್ರೀನಿಂಗ್ ಮತ್ತು ಪರಿಶೀಲನೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ., ವೈವಾ ಲಿಖಿತ ಪರೀಕ್ಷೆ ಇರುವುದಿಲ್ಲ

ಆರ್‌ಆರ್ಸಿ ಉತ್ತರ ರೈಲ್ವೆ ನೇಮಕಾತಿಗೆ ಅರ್ಜಿ ಸಲ್ಲಿಸುವ ಕ್ರಮ

ಆರ್‌ಆರ್ಸಿ ಉತ್ತರ ರೈಲ್ವೆ ಹುದ್ದೆಗಳಿಗೆ ನೇಮಕಾತಿ ಮಾಡಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ www.rrcnr.org ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಡಿಸೆಂಬರ್ 11 ರಿಂದ ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಜನವರಿ 11 ಕೊನೆಯ ದಿನವಾಗಿದೆ. ಅದೇ ಸಮಯದಲ್ಲಿ ಮೆರಿಟ್ ಪಟ್ಟಿಯನ್ನು ಫೆಬ್ರವರಿ 12 ರಂದು ಬಿಡುಗಡೆ ಮಾಡುವ ನಿರೀಕ್ಷೆಯಿದೆ.

Join Nadunudi News WhatsApp Group