Govt Property Rule: ಸರ್ಕಾರೀ ಜಾಗವನ್ನು ಒತ್ತುವರಿ ಮಾಡಿಕೊಂಡವರಿಗೆ ಶಾಕಿಂಗ್ ಸುದ್ದಿ, ಹೊಸ ನಿಯಮ ಜಾರಿ.

ಸರ್ಕಾರೀ ಜಾಗವನ್ನು ಒತ್ತುವರಿ ಮಾಡಿಕೊಂಡವರಿಗೆ ಶಾಕಿಂಗ್ ಸುದ್ದಿ

New Rule For Government Property: ರಾಜ್ಯ ಸರ್ಕಾರ ಇತ್ತೀಚಿಗೆ ಆಸ್ತಿಗೆ ಸಂಬಂಧಿಸಿದಂತೆ ಅನೇಕ ಹೊಸ ಹೊಸ ನಿಯಮವನ್ನು ಪರಿಚಯಿಸುತ್ತಿದೆ. ಈಗಾಗಲೇ ಆಸ್ತಿ ನೋಂದಣಿಗೆ ಸಂಬಂಧಪಟ್ಟಂತೆ ಅನೇಕ ಹೊಸ ನಿಯಮಗಳು ಜಾರಿಯಲ್ಲಿವೆ. ಸದ್ಯ ರಾಜ್ಯ ಸರ್ಕಾರ ಸರ್ಕಾರೀ ಆಸ್ತಿಯನ್ನು ಒತ್ತುವರಿ ಮಾಡಿಕೊಂಡವರಿಗೆ ಬಿಗ್ ಶಾಕ್ ನೀಡಿದೆ.

ಸರ್ಕಾರೀ ಆಸ್ತಿಯ ಒತ್ತುವರಿ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಹೊಸ ನಿಯಮವನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ. ಸರ್ಕಾರೀ ಜಮೀನನ್ನು ಒತ್ತುವರಿ ಮಾಡಿಕೊಂಡವರು ಈ ಲೇಖನವನ್ನು ಓದಿ. ಈ ಹೊಸ ನಿಯಮವು ಆಸ್ತಿ ಒತ್ತುವರಿ ಮಹತ್ವದ ಬದಲಾವಣೆಯನ್ನು ತರಲಿದೆ.

New Rule For Government Property
Image Credit: Legalkart

ಸರ್ಕಾರೀ ಜಾಗವನ್ನು ಒತ್ತುವರಿ ಮಾಡಿಕೊಂಡವರಿಗೆ ಶಾಕಿಂಗ್ ಸುದ್ದಿ
ಸರ್ಕಾರಿ ಆಸ್ತಿ ಒತ್ತುವರಿ ಮಾಡಿಕೊಂಡಿರುವವರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಸರ್ಕಾರಿ ಜಮೀನುಗಳ ರಕ್ಷಣೆಗೆ ಕಂದಾಯ ಇಲಾಖೆ ಲ್ಯಾಂಡ್ ಬೀಟ್ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಕುರಿತು ಮಾಹಿತಿ ನೀಡಿದ ಕೃಷ್ಣಬೈರೇಗೌಡ ಅವರು, ಸರಕಾರಿ ಜಮೀನುಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ನಮ್ಮ ಇಲಾಖೆ ಮಹತ್ವದ ‘ಲ್ಯಾಂಡ್ ಬೀಟ್ ಕಾರ್ಯಕ್ರಮ’ ಹಮ್ಮಿಕೊಂಡಿದೆ. ಕಂದಾಯ ಇಲಾಖೆಯ 14 ಲಕ್ಷ ಸರ್ಕಾರಿ ಆಸ್ತಿಗಳ ಡಿಜಿಟಲ್ ದಾಖಲೆಗಳನ್ನು (ಸರ್ವೇ ಸಂಖ್ಯೆ, ಭೌಗೋಳಿಕ ಗಡಿ ಸೇರಿದಂತೆ) ಒಳಗೊಂಡಿರುವ ಆ್ಯಪ್ ಅಭಿವೃದ್ಧಿಪಡಿಸಿದ್ದೇವೆ. ಪ್ರತಿ ಆಸ್ತಿಯನ್ನು ಜಿಪಿಎಸ್ ಬಳಸಿ ಅಪ್ಲಿಕೇಶನ್‌ ನಲ್ಲಿ ಮ್ಯಾಪ್ ಮಾಡಲಾಗಿದೆ. ನಮ್ಮ ಅಧಿಕಾರಿಗಳು ಪ್ರತಿ ಸ್ಥಳಕ್ಕೆ ಭೇಟಿ ನೀಡಿ ಒತ್ತುವರಿ ಪರಿಶೀಲಿಸುತ್ತಿದ್ದಾರೆ.

ರಾಜ್ಯ ಸರ್ಕಾರದ ಹೊಸ ನಿಯಮ ಜಾರಿ
ಯಾವುದೇ ಸಮಸ್ಯೆಗಳನ್ನು ಅಪ್ಲಿಕೇಶನ್ ಮೂಲಕ ನೇರವಾಗಿ ವರದಿ ಮಾಡಲಾಗುತ್ತದೆ. ನಂತರ ಅತಿಕ್ರಮಣ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಇದುವರೆಗೆ ಗ್ರಾ.ಪಂ.ಅಧಿಕಾರಿಗಳು 5,90,000 ಕ್ಕೂ ಹೆಚ್ಚು ಆಸ್ತಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಂದೆ ಒತ್ತುವರಿ ತೆರವಿಗೆ ಕಾರ್ಯಾಚರಣೆ ನಡೆಸಲಾಗುವುದು. ಗ್ರಾಮಾಡಳಿತ ಅಧಿಕಾರಿಗಳು ಮತ್ತು ಇಲಾಖಾ ಅಧಿಕಾರಿಗಳ ಶ್ರಮದಿಂದಾಗಿ ಪ್ರತಿ ಗ್ರಾಮದ ಸರ್ಕಾರಿ ಆಸ್ತಿಗಳ ವಿವರವಾದ ಡಿಜಿಟಲ್ ದಾಖಲೆಗಳನ್ನು ಹೊಂದಿದ್ದೇವೆ. ಈ ಆಸ್ತಿಗಳನ್ನು ಸುರಕ್ಷಿತವಾಗಿರಿಸಲು ಆಗಾಗ್ಗೆ ಸ್ಪಾಟ್ ಚೆಕ್ ಗಳನ್ನೂ ಮಾಡಲಾಗುತ್ತದೆ. ಈ ಕಾರ್ಯಕ್ರಮದಿಂದ ಸರಕಾರಿ ಭೂಮಿ ಒತ್ತುವರಿ ಸಮಸ್ಯೆಗೆ ವ್ಯವಸ್ಥಿತ ಹಾಗೂ ವಿಶ್ವಾಸಾರ್ಹ ಪರಿಹಾರ ದೊರೆಯಲಿದೆ ಎಂದಿದ್ದಾರೆ.

New Rules for Property Registration
Image Credit: Squareyards

Join Nadunudi News WhatsApp Group

Join Nadunudi News WhatsApp Group