Satish Jarkiholi: ಕಾಂಗ್ರೆಸ್ ನ 5 ಗ್ಯಾರೆಂಟಿಗಳಿಗೆ ಮಾನದಂಡ ಕಡ್ಡಾಯ, ಸ್ಪಷ್ಟನೆ ನೀಡಿದ ಸತೀಶ್ ಜಾರಕಿಹೊಳಿ.
ಕಾಂಗ್ರೆಸ್ ನೀಡಿದ ಗ್ಯಾರೆಂಟಿಗಳ ಬಗ್ಗೆ ಸತೀಶ್ ಜಾರಕಿಹೊಳಿ ಅವರು ಸ್ಪಷ್ಟನೆಯನ್ನ ನೀಡಿದ್ದಾರೆ.
Satish Jarkiholi About Congress Offers: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Assembly Election) ಮುಗಿದಿದ್ದು ಇದೀಗ ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಿದೆ. ಕಾಂಗ್ರೆಸ್ (Congress) ಪಕ್ಷ ಬರೋಬ್ಬರಿ 135 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರವನ್ನು ತನ್ನದಾಗಿಸಿಕೊಂಡಿದೆ. ಇನ್ನು ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮೇ 20 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಕಾಂಗ್ರೆಸ್ ಗ್ಯಾರೆಂಟಿ ಗಳ ಬಗ್ಗೆ ಎಲ್ಲರೂ ಪ್ರಶ್ನೆ ಮಾಡುತ್ತಿದ್ದಾರೆ. ಈ ನಡುವೆ ಕಾಂಗ್ರೆಸ್ ನಾಯಕರಾದ ಸತೀಶ್ ಜಾರಕಿಹೋಳಿ (Satish Jarkiholi) ಕಾಂಗ್ರೆಸ್ ನ ಐದು ಗ್ಯಾರೆಂಟಿ ಬಗ್ಗೆ ಮಾತನಾಡಿದ್ದಾರೆ.
ಕಾಂಗ್ರೆಸ್ ನ ಐದು ಗ್ಯಾರೆಂಟಿ ಬಗ್ಗೆ ಮಾತನಾಡಿದ ಸತೀಶ್ ಜಾರಕಿಹೋಳಿ
ಸತೀಶ್ ಜಾರಕಿಹೊಳಿ ಅವರಿಗೆ ಐದು ಗ್ಯಾರೆಂಟಿಗಳ ಬಗ್ಗೆ ಪ್ರಶ್ನೆ ಕೇಳಲಾಗಿದೆ. ಬಿಜೆಪಿ ಅವರು ಐದು ಗ್ಯಾರೆಂಟಿ ಗಳ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ, ಇದಕ್ಕೆ ನೀವೇನು ಹೇಳುತ್ತೀರಿ ಎಂದು ಕೇಳಿದಾಗ ಸತೀಶ್ ಜಾರಕಿಹೋಳಿ ಬಿಜೆಪಿ ಅವರು ಸರ್ಕಾರ ರಚನೆಗಾಗಿ 11 ದಿನ ತೆಗೆದುಕೊಂಡಿದ್ದಾರೆ, ಆದರೆ ನಮ್ಮ ಪಕ್ಷದವರಿಗೆ ಸರ್ಕಾರ ರಚನೆ 5 ದಿನಗಳಲ್ಲಿಯೇ ಮುಗಿಯುತ್ತಿದೆ.
ಐದು ಗ್ಯಾರೆಂಟಿಗಳ ಪ್ರಯೋಜನ ಶ್ರೀಮಂತರಿಗೆ ಇಲ್ಲ ಎಂದ ಸತೀಶ್ ಜಾರಕಿಹೊಳಿ
ಇನ್ನು ಈ ಐದು ಗ್ಯಾರೆಂಟಿಗಳ ಬಗ್ಗೆ ಫಸ್ಟ್ ಕ್ಯಾಬಿನೆಟ್ ನಲ್ಲಿಯೇ ನಿರ್ಧಾರ ತೆಗೆದುಕೊಳ್ಳುತ್ತೇವೆ. ಇನ್ನು ಶ್ರೀಮಂತರು ಐದು ಗ್ಯಾರೆಂಟಿ ಗಳ ಪ್ರಯೋಜನ ತೆಗೆದುಕೊಳ್ಳಲು ಆಗುವುದಿಲ್ಲ, ಅವರಿಗೆ ಮಾನದಂಡ ಹಾಕುತ್ತೇವೆ. ಆದರೆ ಇದು ಬಡವರಿಗೆ ಅನ್ವಯಿಸಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.