CBSC Scholarship: 10 ನೇ ತರಗತಿ ಮುಗಿಸಿದವರಿಗೆ ಸಿಗಲಿದೆ 6 ಸಾವಿರ ವಿದ್ಯಾರ್ಥಿ ವೇತನ, ಈ ರೀತಿಯಲ್ಲಿ ಅರ್ಜಿ ಸಲ್ಲಿಸಿ.
10 ನೇ ತರಗತಿಯಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಈ Scholarship ಪಡೆಯಲು ಅರ್ಹರಾಗಿರುತ್ತಾರೆ.
Scholarship For 10th Students: ಸದ್ಯ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ವಿದ್ಯಾಭ್ಯಾಸವನ್ನು ಉತ್ತೇಜಿಸುವ ಕಾರಣ ಶಾಲಾ ಕಾಲೇಜುಗಳಿಗೆ ಹೆಚ್ಚಿನ ಸೌಲಭ್ಯವನ್ನು ಒದಗಿಸುತ್ತಿದೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯವನ್ನು ಒದಗಿಸುವುದರ ಜೊತೆಗೆ ವಿದ್ಯಾರ್ಥಿಗಳ ವಿದ್ಯಾಭಾಸಕ್ಕೆ ಸಹಾಯವಾಗಲು ವಿವಿಧ ರೀತಿಯ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.
ಸಾಕಷ್ಟು ವಿದ್ಯಾರ್ಥಿಗಳು ಆರ್ಥಿಕವಾಗಿ ಕಷ್ಟದಲ್ಲಿದ್ದಾಗ ಅವರ ಮುಂದಿನ ವಿದ್ಯಬ್ಯಾಸ್ಯಕ್ಕೆ ಅಡೆತಡೆಯಾಗುತ್ತದೆ. ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನವು ಸಾಕಷ್ಟು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತದೆ ಎಂದರೆ ತಪ್ಪಾಗಲಾರದು. ಅದೆಷ್ಟೋ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನದ ಮೂಲಕವೇ ತಮ್ಮ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿಕೊಳ್ಳುತ್ತಾರೆ.
10 ನೇ ತರಗತಿ ಮುಗಿಸಿದವರಿಗೆ ಸಿಗಲಿದೆ 6 ಸಾವಿರ ವಿದ್ಯಾರ್ಥಿ ವೇತನ
ಇನ್ನು ಡಾಕ್ಟರ್, ಎಂಜಿನಿಯರ್, ಲಾಯರ್ ಆಗಬೇಕೆಂದು ಸಾಕಷ್ಟು ವಿದ್ಯಾರ್ಥಿಗಳು ಆಸೆ ಪಡುತ್ತಾರೆ. ಆದರೆ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಹಣ ಬೇಕಾಗುತ್ತದೆ. ಆರ್ಥಿಕ ಸಮಸ್ಯೆಯ ಕಾರಣ ಪ್ರತಿಭಾನ್ವಿತ ಸಾಕಷ್ಟು ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸಿರುವ ಉದಾಹರಣೆಗಳು ಸಾಕಷ್ಟಿವೆ. ಸದ್ಯ 10 ನೇ ತರಗತಿ ಮುಗಿಸು 11 ನೇ ತರಗತಿಗೆ ಸೇರಿಕೊಳ್ಳುತ್ತಿರುವವರಿಗೆ ವಿದ್ಯಾರ್ಥಿ ವೇತನವೊಂದು ಕಾಯುತ್ತಿದೆ. ವಾರ್ಷಿಕವಾಗಿ ವಿದ್ಯಾರ್ಥಿಗಳು 6,000 ಹಣವನ್ನು ಈ ವಿದ್ಯಾರ್ಥಿ ವೇತನದ ಮೂಲಕ ಪಡೆದುಕೊಳ್ಳಬಹುದುದಾಗಿದೆ.
CBSC Scholarship
10 ನೇ ತರಗತಿಯಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿನಿಯರು ಈ CBSC Scholarship ಅನ್ನು ಪಡೆಯಬಹುದಾಗಿದೆ. ವರ್ಷಕ್ಕೆ ಆರು ಸಾವಿರದಂತೆ ಎರಡು ವರ್ಷದಲ್ಲಿ 12 ಸಾವಿರ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು. ಕನಿಷ್ಠ ಐದು ವಿಷಯಗಳಲ್ಲಿ 60 ಕ್ಕಿಂತ ಹೆಚ್ಚಿನ ಅಂಕ ಗಳಿಸಿರುವವರು ಈ Scholarship ಪಡೆಯಲು ಅರ್ಹರಾಗಿರುತ್ತಾರೆ. ಇನ್ನು ಅರ್ಜಿದಾರರ ಬೋಧನಾ ಶುಲ್ಕ ತಿಂಗಳಿಗೆ 6000 ರೂ. ಗಿಂತ ಮೀರಿರಬಾರದು.
ಅರ್ಜಿ ಸಲ್ಲಿಸುವ ವಿಧಾನ ಹೇಗೆ..?
ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ಕಡಿಮೆ ಇದ್ದು, ಆರ್ಥಿಕವಾಗಿ ಹಿಂದುಳಿದವರು ಮಾತ್ರ ವಿದ್ಯಾರ್ಥಿ ವೇತನವನ್ನು ಪಡೆಯಲು ಸಾಧ್ಯವಾಗುತ್ತದೆ. ಇನ್ನು Septembar 19 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, October 18 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಲಾಗುತ್ತದೆ. ಅರ್ಹ ವಿದ್ಯಾರ್ಥಿನಿಯರು https://www.cbse.gov.in/cbsenew/scholar.html ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಹತ್ತನೇ ತರಗತಿಯ ಮಾರ್ಕ್ಸ್ ಕಾರ್ಡ್ ಹಾಗೂ ಇತರ ದಾಖಲೆಗಳನ್ನು ಅಪ್ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು.