Merit-Cum-Means: ಈ ವಿದ್ಯಾರ್ಥಿಗಳಿಗೆ ಸರ್ಕಾರದಿಂದ 25000 ರೂ ಸ್ಕಾಲರ್ ಶಿಪ್ ಬಿಡುಗಡೆ, ಈ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಿ

ವಿದ್ಯಾರ್ಥಿಗಳಿಗೆ ಸರ್ಕಾರದಿಂದ 25000 ರೂ ಸಿಗುವ ಸ್ಕಾಲರ್ ಶಿಪ್ ಬಿಡುಗಡೆ

Merit- Cum-Means Scholarship Update: ಇಂದಿನ ಕಾಲದಲ್ಲಿ ಶಿಕ್ಷಣ ಎಷ್ಟು ಮುಖ್ಯ ಎನ್ನುವುದು ಎಲ್ಲರಿಗು ತಿಳಿದೇ ಇದೆ. ಹೀಗಾಗಿ ಪೋಷಕರು ತಮ್ಮ ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸವನ್ನು ನೀಡಲು ಮುಂದಾಗುತ್ತಾರೆ. ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಆರ್ಥಿಕ ಕೊರತೆ ಇದ್ದರು ಕೂಡ ಮಕ್ಕಳಿಗೆ ಶಿಕ್ಷಣ ಕೊಡಿಸುವ ಆಸೆಯನ್ನು ಹೊಂದಿರುತ್ತಾರೆ.

ಇನ್ನು ದೇಶದಲ್ಲಿ ಬಡತನ ಇಂದಿಗೂ ಕಡಿಮೆ ಆಗಿಲ್ಲ.ಬಡತನದ ಕಾರಣ ಸಾಕಷ್ಟು ಮಕ್ಕಳು ಉತ್ತಮ ವಿದ್ಯಾಭ್ಯಾಸವನ್ನು ಪಡೆಯಲು ಆಗುತ್ತಿಲ್ಲ. ಸದ್ಯ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಹೊಸ ಹೊಸ ನಿರ್ಧಾರವನ್ನು ಕೈಗೊಳ್ಳುತ್ತಿದೆ. ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಉತ್ತೇಜನ ನೀಡಲು ರಾಜ್ಯ ಮತ್ತು ಕೇಂದ್ರ ಸರ್ಕಾರ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ. ಸದ್ಯ ರಾಜ್ಯ ಸರ್ಕಾರ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗಾಗಿ ವಿಶೇಷ ವಿದ್ಯಾರ್ಥಿ ವೇತನ ನೀಡಲು ಮುಂದಾಗಿದೆ. 

Scholarship Update
Image Credit: Original Source

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
ಬಡ ಮತ್ತು ಹಿಂದುಳಿದ ವರ್ಗದ ಮಕ್ಕಳಿಗೆ ಶಿಕ್ಷಣ ನೀಡುವುದು ಬಹಳ ಕಷ್ಟವಾಗುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ವಿದ್ಯಾಭ್ಯಾಸವನ್ನು ಉತ್ತೇಜಿಸುವ ಕಾರಣ ಶಾಲಾ ಕಾಲೇಜುಗಳಿಗೆ ಹೆಚ್ಚಿನ ಸೌಲಭ್ಯವನ್ನು ಒದಗಿಸುತ್ತಿದೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯವನ್ನು ಒದಗಿಸುವುದರ ಜೊತೆಗೆ ವಿದ್ಯಾರ್ಥಿಗಳ ವಿದ್ಯಾಭಾಸಕ್ಕೆ ಸಹಾಯವಾಗಲು ವಿವಿಧ ರೀತಿಯ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.

ದೇಶದಲ್ಲಿ ಸರ್ಕಾರ ನೀಡುತ್ತಿರುವ ವಿದ್ಯಾರ್ಥಿ ವೇತನದ ಮೂಲಕವೇ ತಮ್ಮ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿಕೊಂಡಿರುವ ಸಾಕಷ್ಟು ವಿದ್ಯಾರ್ಥಿಗಳಿದ್ದಾರೆ. ಇದೀಗ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು Merti-cum-means ವಿದ್ಯಾರ್ಥಿವೇತನ ನೀಡಲು ನಿರ್ಧರಿಸಿದೆ.

Scholarship Update 2024
Image Credit: Krishijagran

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಿಗಲಿದೆ 25 ಸಾವಿರ ವಿದ್ಯಾರ್ಥಿವೇತನ
ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅಭಿವೃದ್ಧಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಮೆರಿಟ್ -ಕಮ್ – ಮೀನ್ಸ್ ವಿದ್ಯಾರ್ಥಿವೇತನ ವಿವಿಧ ತಾಂತ್ರಿಕ ಹಾಗೂ ವೃತ್ತಿಪರ ಪದವಿ, ಸ್ನಾತಕೋತ್ತರ ಪದವಿ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಗರಿಷ್ಟ ರೂ. 25 ಸಾವಿರದವರೆಗೆ ಪಡೆಯುವ ಅವಕಶವಿದೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳು ತಮ್ಮ ಮುಂದಿನ ವಿದ್ಯಾಭ್ಯಾಸಕ್ಕಾಗಿ ಸಹಾಯಧನವನ್ನು ಪಡೆದುಕೊಳ್ಳಬಹುದು.

Join Nadunudi News WhatsApp Group

Join Nadunudi News WhatsApp Group