Aadhaar Card Enrollment: ಶಾಲೆಗೆ ಸೇರುವ ಎಲ್ಲಾ ಮಕ್ಕಳಿಗೆ ಹೊಸ ನಿಯಮ, ಆಧಾರ್ ಕಾರ್ಡ್ ನೋಂದಣಿ ಕಡ್ಡಾಯ.

ಶಾಲೆಗೆ ಸೇರುವ ಮಕ್ಕಳಿಗೆ ಆಧಾರ್ ಕಾರ್ಡ್ ನೋಂದಣಿ ಕಡ್ಡಾಯ

School Admission New Rule: ಇತ್ತೀಚಿನ ದಿನಗಳಲ್ಲಿ ಶಾಲಾ ಶೈಕ್ಷಣಿಕ ವಿಚಾರವಾಗಿ ಸಾಕಷ್ಟು ಸುದ್ದಿಗಳು ವೈರಲ್ ಆಗುತ್ತವೆ. ಈ ಸಾಲಿನ ಶೈಕ್ಷಣಿಕ ವರ್ಷ ಸಾಕಷ್ಟು ರೀತಿಯ ಬದಲಾವಣೆಯನ್ನು ತಂದಿದೆ. ಇನ್ನು ಶಾಲಾ ಮಕ್ಕಳು ಇದೀಗ ಬೇಸಿಗೆ ರಜೆಯನ್ನು ಪಡೆದಿದ್ದಾರೆ. ಮೇ 29 ರಿಂದ ಶಾಲೆಗಳು ಪುನಃ ಆರಂಭಗೊಳ್ಳಲಿದೆ. ಇದೀಗ ಮಕ್ಕಳ ಶಾಲಾ ದಾಖಲಾತಿಯಲ್ಲಿ (School Admission)  ಹೊಸ ನಿಯಮವನ್ನು ತರಲಾಗಿದೆ. ಈ ಹೊಸ ನಿಯಮದ ಬಗ್ಗೆ ಮಾಹಿತಿ ತಿಳಿಯೋಣ.

School Admission New Rule
Image Credit: indiatimes

ಶಾಲೆಗೆ ಸೇರಲು ಮಕ್ಕಳಿಗೆ ಆಧಾರ್ ಕಾರ್ಡ್ ನೋಂದಣಿ ಕಡ್ಡಾಯ
2023 -24 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಸಾಕಷ್ಟು ನಿಯಮಗಳನ್ನು ಶಿಕ್ಷಣ ಇಲಾಖೆ ಹೊರಡಿಸಿದೆ. ಇನ್ನು ಶಾಲೆಗೆ ಸೇರುವ ಮಕ್ಕಳ ವಯಸ್ಸಿನ ಬಗ್ಗೆ ಕೂಡ ಈಗಾಗಲೇ ಸಾಕಷ್ಟು ಸುದ್ದಿಗಳು ಹರಡಿವೆ. ಇದೀಗ ಶಿಕ್ಷಣ ಇಲಾಖೆ ಶಾಲಾ ಮಕ್ಕಳ ನೇಮಕಾತಿಗೆ ಆಧಾರ್ ನೋಂದಣಿಯನ್ನು (Aadhaar Card Enrollment) ಕಡ್ಡಾಯಗೊಳಿಸಿದೆ. ಇನ್ನು ಮಕ್ಕಳ ಆಧಾರ್ ನೋಂದಣಿ ಪ್ರಕ್ರಿಯೆ ಶೇ. 60 ರಷ್ಟು ಮುಗಿದಿದೆ.

students aadhar cards registration
Image Credit: thehansindia

ಆಧಾರ್ ನೋಂದಣಿ ಕಡ್ಡಾಯಗೊಳಿಸಲು ಕಾರಣವೇನು
ಶಾಲಾ ಮಕ್ಕಳಿಗೆ ಸರ್ಕಾರದಿಂದ ಸಾಕಷ್ಟು ಸೌಲಭ್ಯಗಳು ದೊರೆಯುತ್ತವೆ. ಶಾಲಾ ಮಕ್ಕಳಿಗೆ ಮದ್ಯಾಹ್ನದ ಬಿಸಿಯೂಟ, ಉಚಿತ ಸಮವಸ್ತ್ರ, ಕ್ಷೀರಭಾಗ್ಯ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಶಾಲಾ ಮಕ್ಕಳು ಸರ್ಕಾರ ನೀಡುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಲು ಆಧಾರ್ ನೋಂದಣಿ ಕಡ್ಡಾಯವಾಗಿದೆ. ಮಕ್ಕಳ ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ವಂಚನೆ ನಡೆದರೆ ಆಧಾರ್ ನೋಂದಣಿಯಿಂದಾಗಿ ಅದು ಬೆಳಕಿಗೆ ಬರುತ್ತದೆ.

Join Nadunudi News WhatsApp Group

Join Nadunudi News WhatsApp Group