Karnataka Rain Alert: ರಾಜ್ಯದ ಈ 13 ಜಿಲ್ಲೆಗಳಲ್ಲಿ ಬಾರಿ ಮಳೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.

ರಾಜ್ಯದ ಈ 13 ಜಿಲ್ಲೆಗಳಲ್ಲಿ ಬಾರಿ ಮಳೆ, ಹವಾಮಾನ ಇಲಾಖೆ ಎಚ್ಚರಿಕೆ

School And College Holiday Due To Heavy Rain: ಸದ್ಯ ರಾಜ್ಯದೆಲ್ಲೆಡೆ ವರ್ಷಧಾರೆ ಧಾರಾಕಾರವಾಗಿ ಹರಿಯುತ್ತಿದೆ ಎನ್ನಬಹುದು. ಜೂನ್ ನಿಂದ ಆರಂಭವಾದ ಮಳೆ ಇನ್ನು ಕೂಡ ಬಿಡದೆ ಸುರಿಯುತ್ತಿದೆ. ಬಾರಿ ಮಳೆಯಿಂದಾಗಿ ಸಾಕಷ್ಟು ಪ್ರದೇಶಗಳು ಹಾನಿಗೊಳಗಾಗಿದೆ. ಈಗಾಗಲೇ ಮಳೆಯ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡುತ್ತಿದೆ. ಬಾರಿ ಮಳೆಯ ಕಾರಣ ಶಾಲಾ ಕಾಲೇಜುಗಳಿಗೆ ಹೋಗಲು ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದೆ.

ಈ ನಿಟ್ಟಿನಲ್ಲಿ ಅನೇಕ ಜಿಲ್ಲೆಯ ಶಾಲಾ ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗುತ್ತಿದೆ. ಸದ್ಯ ಇಂದಿಂದ ಮತ್ತೆ ವರುಣನ ಆರ್ಭಟ ಜೋರಿರುವ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಎಲ್ಲ ಜಿಲ್ಲೆಗಳಲ್ಲಿ ಬಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್, ಆರೆಂಜ್ ಅಲರ್ಟ್, ಎಲ್ಲೊ ಅಲರ್ಟ್ ಘೋಷಣೆಯಾಗಿದೆ.

School And College Holiday Due To Heavy Rain
Image Credit: Live mint

ರಾಜ್ಯದ ಈ 13 ಜಿಲ್ಲೆಗಳಲ್ಲಿ ಬಾರಿ ಮಳೆ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಈಗಾಗಲೇ ಜನಜೀವನ ಅಸ್ತವ್ಯಸ್ತಗೊಂಡಿದೆ ಎನ್ನಬಹುದು. ಮುಂದಿನ 3 ಗಂಟೆಗಳಲ್ಲಿ ರಾಜ್ಯದ 13 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಕಲಬುರಗಿ, ಬೀದರ್, ವಿಜಯಪುರ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಳಗಾವಿ, ವಿಜಯನಗರ, ತುಮಕೂರು, ಬಳ್ಳಾರಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಈ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಇಂದು ಮತ್ತು ನಾಳೆ (ಜೂನ್ 6, 7) ಮತ್ತೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ವರುಣನ ಆರ್ಭಟದಿಂದ ದ.ಕನ್ನಡ, ಉ.ಕನ್ನಡ, ಉಡುಪಿಯಲ್ಲಿ ಜೂ.8 ರಿಂದ 10 ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಕುಮಟಾ, ಹೊನ್ನಾವರ, ಭಟ್ಕಳ, ಕಾರವಾರ, ಅಂಕೋಲಾ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Karnataka Rain Alert Update
Image Credit: Sakshi

Join Nadunudi News WhatsApp Group

Join Nadunudi News WhatsApp Group