School-College Bandh: ನಾಳೆ ದೇಶಾದ್ಯಂತ್ಯ ಶಾಲಾ ಕಾಲೇಜು ಬಂದ್, ಈ ಕಾರಣಕ್ಕೆ ಶಾಲೆ ಮತ್ತು ಕಾಲೇಜುಗಳು ಬಂದ್

ಜುಲೈ 4 ರಂದು ದೇಶಾದ್ಯಂತ ಶಾಲಾ-ಕಾಲೇಜುಗಳು ಬಂದ್‌

School-College Bandh Tomorrow: ಸದ್ಯ 2024 ರ ಮೇ ನಲ್ಲಿ 2024 -25 ರ ಶೈಕ್ಷಣಿಕ ವರ್ಷ ಆರಂಭವಾಗಿದೆ. ಈ ಬಾರಿ ಶಿಕ್ಶಣ ಇಲಾಖೆ ವಿದ್ಯಾರ್ಥಿಗಳಿಗಾಗಿ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದೆ. ಇನ್ನು ವಿದ್ಯಾರ್ಥಿಗಳು ಹೊಸ ಶಿಕ್ಷಣ ನೀತಿಯಿಂದ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಸದ್ಯ ಜೂನ್ ನಿಂದ ಮಳೆಗಾಲ ಜೋರಾಗಿದ್ದು, ವಿದ್ಯಾರ್ಥಿಗಳು ಶಾಲೆಗಳಿಗೆ ಹೋಗಲು ತೊಂದರೆ ಕೂಡ ಎದುರಿಸುತ್ತಿದ್ದಾರೆ ಎನ್ನಬಹುದು.

ಇನ್ನು ಮಳೆಗಾಲದ ಶಾಲಾ ವಿದ್ಯಾರ್ಥಿಗಳಿಗೆ ಮಳೆಯ ಕಾರಣ ರಜೆ ಹೆಚ್ಚಿರುತ್ತದೆ. ಆದರೆ ಈ ಬಾರಿ ಅಷ್ಟಾಗಿ ಮಳೆ ಇಲ್ಲದೆ ಇರುವ ಕಾರಣ ರಜೆ ಘೋಷಣೆ ಆಗಿಲ್ಲ. ಆದರೆ ಇದೀಗ ಶಾಲಾ ಮಕ್ಕಳಿಗೆ ವಾರಾಂತ್ಯದ ರಜೆಯ ಹೊರತಾಗಿ ಶಾಲೆಗಳಿಗೆ ರಜೆ ಸಿಗಲಿದೆ. ಹೌದು, ಈ ದಿನದಂದು ಶಾಲಾ ಕಾಲೇಜುಗಳು ಬಂದ್ ಆಗಲಿದೆ ಎನ್ನುವ ಬಗ್ಗೆ ಮಾಹಿತಿ ಕೇಳಿಬರುತ್ತಿದೆ.

School-College Bandh Tomorrow
Image Credit: Thehindu

ಜುಲೈ 4 ರಂದು ದೇಶಾದ್ಯಂತ ಶಾಲಾ-ಕಾಲೇಜುಗಳು ಬಂದ್‌
ಪ್ರಸಕ್ತ ಹೊಸ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ಅಧ್ಯಯನದಲ್ಲಿ ತೊಡಗಿರುವ ಸಂದರ್ಭದಲ್ಲಿ ಎಂಟು ಬೇಡಿಕೆಗಳ ಈಡೇರಿಕೆಗಾಗಿ ಜುಲೈ 4 ರಂದು ದೇಶಾದ್ಯಂತ ಶಾಲಾ-ಕಾಲೇಜುಗಳು ಬಂದ್‌ ಗೆ ಕರೆ ನೀಡಿವೆ. ಹೌದು, ನೀಟ್ ಮತ್ತು ನೆಟ್ ಪರೀಕ್ಷೆ ಪತ್ರಿಕೆ ಸೋರಿಕೆ ಕುರಿತು ಸಮಗ್ರ ತನಿಖೆಗೆ ಆಗ್ರಹಿಸಿ ವಿದ್ಯಾರ್ಥಿ ಸಂಘಟನೆಗಳು ಜುಲೈ 4 ರಂದು ದೇಶಾದ್ಯಂತ ಶಾಲಾ-ಕಾಲೇಜು ಬಂದ್ ಗೆ ಕರೆ ನೀಡಿವೆ.

ಎನ್ ಟಿಎ ರದ್ದು ಹಾಗೂ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ವಿದ್ಯಾರ್ಥಿ ಸಂಘಟನೆಗಳಾದ SIF, AISF, PDSU, PDSO, NSUI ಒತ್ತಾಯಿಸಿವೆ. ಕಳೆದ ಐದು ವರ್ಷಗಳಲ್ಲಿ 65 ಪೇಪರ್ ಸೋರಿಕೆ ಘಟನೆಗಳು ನಡೆದಿದ್ದು, ಪೇಪರ್ ಸೋರಿಕೆಯಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದು, ಈ ಬಗ್ಗೆ ಸಂಸತ್ತಿನಲ್ಲಿ ಚರ್ಚಿಸಿ ನ್ಯಾಯ ಕೊಡಿಸುವಂತೆ ಮೋದಿ ಅವರಿಗೆ ಮನವಿ ಮಾಡಲಾಗಿದೆ.

School-College Bandh
Image Credit: Sambadenglish

ಶಾಲಾ ಕಾಲೇಜುಗಳ ಬಂದ್ ಗೆ ಕಾರಣವೇನು…?
ಒನ್ ನೇಷನ್-ಒನ್ ಎಕ್ಸಾಮ್ ನೆಪದಲ್ಲಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ತಂದಿದ್ದು, ಇಡೀ ಪರೀಕ್ಷಾ ವ್ಯವಸ್ಥೆಯೇ ಕುಸಿದಿದೆ ಎಂದು ವಿದ್ಯಾರ್ಥಿ ಸಂಘಟನೆಗಳ ಮುಖಂಡರು ಆರೋಪಿಸಿದ್ದಾರೆ. ರಾಷ್ಟ್ರೀಯ ಮಟ್ಟದ ಪರೀಕ್ಷೆಗಳನ್ನು ನಡೆಸುವಲ್ಲಿ ಎನ್‌ಟಿಎ ವಿಫಲವಾಗಿದೆ ಎಂದು ಆರೋಪಿಸಿ ಎಸ್‌ಎಫ್‌ಐ ಕೇಂದ್ರ ಕಾರ್ಯಕಾರಿ ಸಮಿತಿಯು ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ದಾಳಿಯನ್ನು ಪ್ರತಿಭಟಿಸಿ ಜುಲೈ 4 ರಂದು ರಾಷ್ಟ್ರವ್ಯಾಪಿ ಬಂದ್‌ ಗೆ ಕರೆ ನೀಡಿದೆ.

Join Nadunudi News WhatsApp Group

ಎನ್ ಟಿಎ ಪದ್ಧತಿಯನ್ನು ರದ್ದುಪಡಿಸಬೇಕು ಹಾಗೂ ನೀಟ್ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಎಂಟು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬಂದ್ ನಡೆಯಲಿದೆ. ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಇದಲ್ಲದೆ, ವಿಶ್ವವಿದ್ಯಾನಿಲಯಗಳು, ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ಸಂಶೋಧನಾ ಸಂಸ್ಥೆಗಳಲ್ಲಿ ಪಿಎಚ್‌ ಡಿ ಪ್ರವೇಶಕ್ಕಾಗಿ ಇತ್ತೀಚೆಗೆ ಅನುಮೋದಿಸಲಾದ ಕಡ್ಡಾಯ ನಿವ್ವಳ ಅಂಕ ವ್ಯವಸ್ಥೆಯನ್ನು ಹಿಂಪಡೆಯುವಂತೆ ವಿದ್ಯಾರ್ಥಿ ಸಂಘಗಳು ಒತ್ತಾಯಿಸಿವೆ.

Bharat Bandh Tomorrow
Image Credit: India

Join Nadunudi News WhatsApp Group