Students Food: ಶಾಲಾ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್, ಊಟದ ಜೊತೆಗೆ ಸಿಗಲಿದೆ ಈ ಪೌಷ್ಠಿಕ ಆಹಾರ.
ಶಾಲಾ ಮಕ್ಕಳಿಗೆ ಊಟದ ಜೊತೆಗೆ ಈ ಪೌಷ್ಠಿಕ ಆಹಾರ ನೀಡಲು ಸರ್ಕಾರ ನಿರ್ಧಾರ ಮಾಡಿದೆ.
Karnataka Government Sch0ol Students Food: ಪ್ರಸ್ತುತ 2023 -24 ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಗೊಂಡಿದ್ದು, ಶಾಲಾ ಮಕ್ಕಳು ದಸರಾ ರಜೆಯನ್ನು (ಅಕ್ಟೋಬರ್ ನ ಮಧ್ಯಂತರ ರಜೆ) ಮುಗಿಸಿ ಮತ್ತೆ ಶಾಲೆಗಳಿಗೆ ಹೋಗಲು ಪ್ರಾರಂಭಿಸಿದ್ದಾರೆ.
ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿ ಆರಂಭಗೊಂಡಿದ್ದು, ಈ ವರ್ಷದ ಶಿಕ್ಷಣ ನೀತಿಯಲ್ಲಿ ಸಾಕಷ್ಟು ಬದಲಾವಣೆಗಳು ಆಗಿವೆ ಎನ್ನಬಹುದು. ರಾಜ್ಯದ ಶಾಲಾ ಮಕ್ಕಳಿಗೆ ಶಿಕ್ಷಣ ಇಲಾಖೆ ಹೊಸ ಹೊಸ ನಿಯಮಗಳ ಜೊತೆಗೆ ವಿವಿಧ ಸೌಲಭ್ಯಗಳನ್ನು ನೀಡಲು ಮುಂದಾಗಿದೆ. ಸದ್ಯ ರಾಜ್ಯ ಸರ್ಕಾರ ಸರ್ಕಾರೀ ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದೆ.
ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್
ಸರ್ಕಾರೀ ಶಾಲಾ ಮಕ್ಕಳಿಗೆ ಸರ್ಕಾರ ವಿವಿಧ ಸೌಲಭ್ಯವನ್ನು ನೀಡುತ್ತಿದೆ. ಈಗಾಗಲೇ ಮಕ್ಕಳಿಗೆ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿ ಊಟ ಮಾಡಿಕೊಡಲಾಗಿತ್ತು. ಇದೀಗ ಈ ಸೌಲಭ್ಯವನ್ನು ಸರ್ಕಾರ ಮತ್ತಷ್ಟು ವಿಸ್ತರಿಸಿದೆ. ಶಾಲೆ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಜೊತೆಗೆ ಕಡ್ಡಾಯವಾಗಿ ಈ ಆಹಾರ ಪದಾರ್ಥ ನೀಡುವಂತೆ ಎಲ್ಲ ಸರ್ಕಾರೀ ಮತ್ತು ಅನುದಾನಿತ ಶಾಲಾ ಆಡಳಿತ ಮಂಡಳಿಗಳಿಗೆ ಸರ್ಕಾರ ಸೂಚನೆ ನೀಡಿದೆ. ಈ ಮೂಲಕ ರಾಜ್ಯ ಸರ್ಕಾರ ಶಾಲಾ ಮಕ್ಕಳ ಊಟದ ನಿಯಮದಲ್ಲಿ ಮಹತ್ವದ ಬದಲಾವಣೆಯನ್ನು ಜಾರಿಗೊಳಿಸಿದೆ.
ಶಾಲಾ ಮಕ್ಕಳಿಗೆ ಮೊಟ್ಟೆಯ ಜೊತೆಗೆ ವಿಶೇಷ ಪೌಷ್ಠಿಕಾಂಶವುಳ್ಳ ಆಹಾರ ವಿತರಣೆ
ಇದೀಗ 2023 -14 ನೇ ಸಾಲಿನ ಶಾಲಾ ಮಕ್ಕಳಲ್ಲಿರುವ ಅಪೌಷ್ಟಿಕತೆಯನ್ನು ನಿವಾರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮಕ್ಕಳ ಅಪೌಷ್ಟಿಕತೆ ನಿವಾರಣೆಗಾಗಿ ಸರ್ಕಾರ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಸರಕಾರಿ ಹಾಗೂ ಸರ್ಕಾರೀ ಅನುದಾನಿತ ಶಾಲೆಗಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ, ಚಿಕ್ಕಿ, ಬಾಳೆಹಣ್ಣನ್ನು ನೀಡಬೇಕು ಎಂದು ಸರ್ಕಾರ ಘೋಷಿಸಿದೆ.
ಸರ್ಕಾರೀ ಹಾಗು ಅನುದಾನಿತ ಶಾಲಾ ಮಕ್ಕಳಿಗೆ ಪೌಷ್ಟಿಕತೆ ಹೆಚ್ಚಿಸುವ ನಿಟ್ಟಿನಲ್ಲಿ ಪೌಷ್ಟಿಕ ಆಹಾರ ನೀಡಲಾಗುತ್ತಿದೆ. ಮಧ್ಯಾಹ್ನದ ಬಿಸಿಯೂಟ ಯೋಜನೆಯ ಅಡಿಯಲ್ಲಿ ಮೊಟ್ಟೆ ನೀಡಲಾಗುತ್ತದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ಅಥವಾ ಚಿಕ್ಕಿಯನ್ನು ವಿತರಿಸಲಾಗುತ್ತದೆ. ಈ ಎಲ್ಲ ಸೌಲಭ್ಯದ ಜೊತೆಗೆ November 23 ರಿಂದ ಶಾಲಾ ಮಕ್ಕಳಿಗೆ ವಿಶೇಷ ಪೌಷ್ಠಿಕಾಂಶವುಳ್ಳ ಆಹಾರವನ್ನು ನೀಡಬೇಕು ಎಂದು ಆಹಾರ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.