PUC Result: ದ್ವಿತೀಯ PUC ಪರೀಕ್ಷೆ ಬರೆದ ಮಕ್ಕಳಿಗೆ ಬಿಗ್ ಅಪ್ಡೇಟ್, ಈ ದಿನದಿಂದ ನಿಮ್ಮ ರಿಸಲ್ಟ್ ಘೋಷಣೆ

ದ್ವಿತೀಯ PUC ಪರೀಕ್ಷೆ ಬರೆದ ಮಕ್ಕಳಿಗೆ ಬಿಗ್ ಅಪ್ಡೇಟ್, ಈ ದಿನದಂದು ನಿಮ್ಮ ರಿಸಲ್ಟ್

Second PUC Result 2024: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಮುಕ್ತಾಯದ ಹಂತ ತಲುಪಿದೆ. ದ್ವಿತೀಯ PUC ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆ ಮುಗಿದೇ. ಇನ್ನು SSLC ವಿದ್ಯಾರ್ಥಿಗಳು ಅಂತಿಮ ಪರೀಕ್ಷೆಯನ್ನು ಎದುರಿಸುತ್ತಿದ್ದು ಏಪ್ರಿಲ್ 6 ರಂದು SSLC ವಿದ್ಯರ್ಥಿಗಳಿಗೆ ಕೊನೆಯ ಪರೀಕ್ಷೆ ನಡೆಯಲಿದೆ. ಇನ್ನು ದ್ವಿತೀಯ PUC ವಿದ್ಯಾರ್ಥಿಗಳಿಗೆ ಮಾರ್ಚ್ 1 ರಂದು ಆರಂಭವಾದ ಪರೀಕ್ಷೆ ಮಾರ್ಚ್ 22 ರಂದು ಮುಕ್ತಾಯಗೊಂಡಿದೆ.

ಸದ್ಯ PUC ವಿದ್ಯಾಥಿಗಳು ಅಂತಿಮ ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ದ್ವಿತೀಯ ಪಿಯುಸಿ ವಾರ್ಷಿಕ ಫಲಿತಾಂಶ ಬಹಳ ಮುಖ್ಯವಾಗಿರುತ್ತದೆ. ಅದೆಷ್ಟೋ ವಿದ್ಯಾರ್ಥಿಗಳ ಜೀವನ ದ್ವಿತೀಯ ಪಿಯುಸಿ ಫಲಿತಾಂಶದ ನಂತರ ಬದಲಾಗುತ್ತದೆ.

Second PUC Result 2024
Image Credit: Onetyperakshi

ದ್ವಿತೀಯ PUC ಪರೀಕ್ಷೆ ಬರೆದ ಮಕ್ಕಳಿಗೆ ಬಿಗ್ ಅಪ್ಡೇಟ್

ದ್ವಿತೀಯ ಪಿಯುಸಿ ಅಂಕದ ಆಧಾರದ ಮೇಲೆ ಉನ್ನತ ಹುದ್ದೆಯನ್ನು ಪಡೆಯುವ ಅವಕಾಶ ಇರುತ್ತದೆ. ಸದ್ಯ ಕರ್ನಾಟಕ ಶಿಕ್ಷಣ ಮಂಡಳಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶದ ಕುರಿತು ಬಗ್ ಅಪ್ಡೇಟ್ ಹೊರಬಿದ್ದಿದೆ. ಈ ದಿನಾಂಕದಂದು ವಿದ್ಯಾರ್ಥಿಗಳ ಫಲಿತಾಂಶ ಹೊರಬೀಳಲಿದೆ ಎನ್ನುವ ಬಗ್ಗೆ ವರದಿಯಾಗಿದೆ.

ಮಾರ್ಚ್ 1 ರಿಂದ 22 ರವರೆಗೆ ರಾಜ್ಯದ 1120 ಕ್ಕೂ ಹೆಚ್ಚು ಕೇಂದ್ರಗಳಲ್ಲಿ ದ್ವಿತೀಯ ಪಿಯು ಪರೀಕ್ಷೆಗಳನ್ನು ನಡೆಸಲಾಯಿತು. ಈ ಬಾರಿ ಸುಮಾರು 7 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಏಪ್ರಿಲ್ ಎರಡನೇ ವಾರದಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ. ಏಪ್ರಿಲ್ 10 ರಂದು ಪ್ರಕಟಿಸಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ.

Join Nadunudi News WhatsApp Group

Second PUC Result
Image Credit: India Today

ಈ ದಿನದಿಂದ ನಿಮ್ಮ ರಿಸಲ್ಟ್ ಘೋಷಣೆ
ದ್ವಿತೀಯ ಪಿಯು ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾಗಿದ್ದು, ಏ.10ರ ಸುಮಾರಿಗೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ ಸಿದ್ಧತೆ ನಡೆಸಿದೆ. ಮಾರ್ಚ್ 25 ರಿಂದಲೇ ಮೌಲ್ಯಮಾಪನ ಪ್ರಕ್ರಿಯೆ ಆರಂಭಿಸಲಾಗಿತ್ತು.

ಮಂಡಳಿಯ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ ಬಹುತೇಕ ಮೌಲ್ಯಮಾಪನ ಕಾರ್ಯ ಅಂತಿಮ ಹಂತ ತಲುಪಿದೆ. ಇನ್ನೊಂದು ವಾರದೊಳಗೆ ಮೌಲ್ಯಮಾಪನ ಪೂರ್ಣಗೊಳ್ಳಲಿದ್ದು, ಅಂಕಗಳ ಗಣಕೀಕರಣವೂ ಪೂರ್ಣಗೊಳ್ಳಲಿದೆ. ಏ.10 ಅಥವಾ ಇನ್ನೆರಡು ದಿನಗಳಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ಏಪ್ರಿಲ್ 10 ರ ಬಳಿಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

Second PUC Result Date
Image Credit: Jagran

Join Nadunudi News WhatsApp Group