Business Loan: ಸ್ವಂತ ಉದ್ಯೋಗ ಮಾಡಲು ಸರ್ಕಾರದಿಂದಲೇ ಸಿಗುತ್ತಿದೆ ಕಡಿಮೆ ಬಡ್ಡಿಗೆ ಸಾಲ, ಇಂದೇ ಅರ್ಜಿ ಸಲ್ಲಿಸಿ.

ರಾಜ್ಯದ SC -ST ಮಹಿಳೆಯರಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ ಪರಿಚಯಿಸಿದ ರಾಜ್ಯ ಸರ್ಕಾರ.

Self Employment Direct Loan Scheme 2023: ಸದ್ಯ ರಾಜ್ಯ ಸರ್ಕಾರ ರಾಜ್ಯದ ಜನತೆಗಾಗಿ ವಿವಿಧ ಯೋಜನೆಯನ್ನು ಪರಿಚಯಿಸುತ್ತಿದೆ. ರಾಜ್ಯದ ಜನರು ಸರ್ಕಾರ ಎಲ್ಲ ಯೋಜನೆಗಳ ಲಾಭವನ್ನು ಪಡೆಯುತ್ತಿದ್ದಾರೆ.

ಸದ್ಯ ರಾಜ್ಯ ಸರ್ಕಾರ ಮಹಿಳೆಯರ ಸಬಲೀಕರಣದತ್ತ ಹೆಚ್ಚಿನ ಗಮನಹರಿಸಿ ಇದೀಗ ಹೊಸ ಯೋಜನೆಯನ್ನು ಪರಿಚಯಿಸಲು ಮುಂದಾಗಿದೆ. ಮಹಿಳೆಯರಿಗೆ ಸಾಲ ಮತ್ತು ಸಹಾಯಧನ ನೀಡಲು ಹೊಸ ಯೋಜನೆಯನ್ನು ಪರಿಚಯಿಸಿದೆ. ಈ ಯೋಜನೆಯ ಅಡಿಯಲ್ಲಿ ಮಹಿಳೆಯರು ಸಾಲ ಸೌಲಭ್ಯವನ್ನ ಪಡೆದುಕೊಳ್ಳಬಹುದಾಗಿದೆ.

Self Employment Direct Loan Scheme 2023
Image Credit: Zee News

ಸ್ವಂತ ಉದ್ಯೋಗ ಮಾಡಲು ಸರ್ಕಾರದಿಂದಲೇ ಸಿಗುತ್ತಿದೆ ಕಡಿಮೆ ಬಡ್ಡಿಗೆ ಸಾಲ
ರಾಜ್ಯ ಸರ್ಕಾರ ರಾಜ್ಯದ SC -ST ಮಹಿಳೆಯರಿಗಾಗಿ ವಿಶೇಷವಾಗಿ “ಸ್ವಯಂ ಉದ್ಯೋಗ ನೇರ ಸಾಲ ಯೋಜನೆ”ಯನ್ನು ಪರಿಚಯಿಸಿದೆ. ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ ಅಥವಾ ಪಂಗಡದ ಮಹಿಳಾ ಸ್ವಸಹಾಯ ಸಂಘಗಳಿಗೆ ಸೂಕ್ಷ್ಮ ಆರ್ಥಿಕ ಚಟುವಟಿಕೆಗಳಿಗೆ ಸಾಲ ಮತ್ತು ಸಹಾಯಧನ ಸೌಲಭ್ಯ ನೀಡಲು ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ ವಿವಿಧ ನಿಗಮಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಾ ಲಾಭ ಪಡೆಯಲು ಆಸಕ್ತರು ಸೇವಾ ಸಿಂಧು ಪೋರ್ಟಲ್ ನ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ನವೆಂಬರ್ 29 ಕೊನೆಯ ದಿನಾಂಕವಾಗಿದೆ.  ಇನ್ನು ಈ ಸಾಲ ಸೌಲಭ್ಯವನ್ನು ಪಡೆಯಲು ಬೇಕಾದ ಅರ್ಹತೆ ಮತ್ತು ದಾಖಲೆಗಳ ಬಗ್ಗೆ ಸರ್ಕಾರ ಮಾಹಿತಿ ನೀಡಿದೆ. ಇಂತವರು ಮಾತ್ರ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಯೋಜನೆಯ ಬಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

Direct Loan Scheme 2023
Image Credit: Twentyfournews

ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳೇನು..?
*ಪರಿಶಿಷ್ಟ ಜಾತಿ ಅಥವಾ ಪಂಗಡದವರಾಗಿರಬೇಕು.

Join Nadunudi News WhatsApp Group

*ಗ್ರಾಮೀಣ ಪ್ರದೇಶದಲ್ಲಿ ರೂ. 1.5 ಲಕ್ಷ ಹಾಗೂ ನಗರ ಪ್ರದೇಶದಲ್ಲಿ ರೂ. 2 ಲಕ್ಷ ಆದಾಯ ಮಿತಿ ಮೀರಿರಬಾರದು.

*ಅರ್ಜಿದಾರರ ವಯೋಮಿತಿ 21 ರಿಂದ 60 ವರ್ಷಗಳಾಗಿರಬೇಕು.

*ಆದಾಯ ಪ್ರಮಾಣಪತ್ರ

*ಕುಟುಂಬದ ಪಡಿತರ ಚೀಟಿ

*ಬಾಂಕ್ ಪಾಸ್ ಬುಕ್

*ಆಧಾರ್  ಕಾರ್ಡ್

Join Nadunudi News WhatsApp Group