Senior Citizens Free Services: ದೇಶದ ಹಿರಿಯ ನಾಗರಿಕರಿಗೆ, ಅಂದರೆ 60 ವರ್ಷ ಮೇಲ್ಪಟ್ಟವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಅನೇಕ ಸೇವೆಗಳನ್ನು ನೀಡುತ್ತಾ ಬಂದಿದೆ. ಅದೇ ರೀತಿಯಲ್ಲಿ ಕೇಂದ್ರ ಸರ್ಕಾರ ಕೂಡ ಹಿರಿಯ ನಾಗರಿಕರಿಗೆ ಅನೇಕ ಸೇವೆಯನ್ನು ನೀಡುವುದರ ಮೂಲಕ ಅವರ ಮೆಚ್ಚುಗೆಗೆ ಕಾರಣವಾಗಿದೆ. ಭಾರತ ಸರ್ಕಾರ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಕೆಲವು ಸೇವೆಯನ್ನು ಪಡೆದುಕೊಳ್ಳಬಹುದು. ಈ ಲೇಖನದಲ್ಲಿ ಭಾರತ ಸರ್ಕಾರ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಯಾವ 5 ಸೇವೆಯನ್ನು ಪಡೆದುಕೊಳ್ಳಬಹುದು ಅನ್ನುವುದರ ಬಗ್ಗೆ ಮಾಹಿತಿ ತಿಳಿಯೋಣ.
* ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ದಾಪ್ಯ ಪಿಂಚಣಿ ಯೋಜನೆ
ಕೇಂದ್ರ ಸರ್ಕಾರ 60 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗಾಗಿ ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ದಾಪ್ಯ ಪಿಂಚಣಿ ಯೋಜನೆಯನ್ನು ದೇಶಾದ್ಯಂತ ಜಾರಿಗೆ ತಂದಿದೆ. ಬಡ ಕುಟುಂಬದ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗದ 60 ವರ್ಷ ಮೇಲ್ಪಟ್ಟ ದೇಶದ ಹಿರಿಯ ನಾಗರಿಕರು ಕೇಂದ್ರದ ಈ ಈ ಯೋಜನೆಯ ಅಡಿಯಲ್ಲಿ 2000 ರೂಪಾಯಿ ಪಿಂಚಣಿ ಹಣವನ್ನು ಪ್ರತಿ ತಿಂಗಳು ಪಡೆದುಕೊಳ್ಳಬಹುದು. ಸ್ಥಳೀಯ ಪಂಚಾಯತ್ ಮತ್ತು ಆನ್ಲೈನ್ ಮೂಲಕ ಹಿರಿಯ ನಾಗರಿಕರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
* ಹಿರಿಯ ನಾಗರಿಕರ ಉಳಿತಾಯ ಯೋಜನೆ
ಹಿರಿಯ ನಾಗರಿಕರ ಭವಿಷ್ಯದ ಜೀವನ ಸುಗಮವಾಗಿರಬೇಕು ಮತ್ತು ಅವರ ಖರ್ಚಿಗೆ ಯಾವುದೇ ಸಮಸ್ಯೆ ಆಗಬಾರದು ಅನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ ಎಲ್ಲಾ ಪೋಸ್ಟ್ ಆಫೀಸ್ ಮತ್ತು ಬ್ಯಾಂಕ್ ನಲ್ಲಿ ಹಿರಿಯ ನಾಗರಿಕರ ಉಳಿತಾಯ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯಲ್ಲಿ ಹೂಡಿಕೆ ಮಾಡಿದ ಹಣಕ್ಕೆ 8.2% ಬಡ್ಡಿ ಪಡೆದುಕೊಳ್ಳಬಹುದು. ಈ ಯೋಜನೆ ಉಇಚಿತವಲ್ಲದೆ ಇದ್ದರೂ ಕೂಡ ಹೂಡಿಕೆ ಮಾಡಿದ ಹಣಕ್ಕೆ ಭದ್ರತೆ ಸಿಗುತ್ತದೆ. ಹಿರಿಯ ನಾಗರಿಕರ ಉಳಿತಾಯ ಯೋಜನೆಯ ಅಡಿಯಲ್ಲಿ 30 ಲಕ್ಷ ರೂಪಾಯಿಯ ತನಕ ಹಣ ಹೂಡಿಕೆ ಮಾಡಬಹುದು.
* ಸೀನಿಯರ್ ಸಿಟಿಜನ್ ಕಾರ್ಡ್
ಹಿರಿಯ ನಾಗರಿಕರು ಈ ಸೀನಿಯರ್ ಸಿಟಿಜನ್ ಕಾರ್ಡ್ ಮಾಡಿಸಿಕೊಂಡರೆ ಸರ್ಕಾರದಿಂದ ಅನೇಕ ಸೇವೆ ಪಡೆದುಕೊಳ್ಳಬಹುದು. ಆಸ್ಟ್ರೇಗಳಲ್ಲಿ, ಔಷಧಾಲಯಗಳಲ್ಲಿ, ಸರ್ಕಾರೀ ಕಚೇರಿಯಲ್ಲಿ ಅನೇಕ ಸೇವೆಯನ್ನು ಪಡೆದುಕೊಳ್ಳಬಹುದು. ಸೀನಿಯರ್ ಸಿಟಿಜನ್ ಕಾರ್ಡ್ ಇದ್ದವರು ಪ್ರಯಾಣದ ಟಿಕೆಟ್ ನಲ್ಲಿ ಕೂಡ ರಿಯಾಯಿತಿ ಪಡೆದುಕೊಳ್ಳಬಹುದು.
* ಆಯುಷ್ಮಾನ್ ಭಾರತ್ ಯೋಜನೆಯ ಲಾಭ
ದೇಶದ ಹಿರಿಯ ನಾಗರಿಕರು ಆಯುಷ್ಮಾನ್ ಭಾರತ್ ಯೋಜನೆಯ ಅಡಿಯಲ್ಲಿ ಉಚಿತ ಆರೋಗ್ಯ ಸೇವೆಯನ್ನು ಪಡೆದುಕೊಳ್ಳಬಹುದು. 70 ವರ್ಷ ಮೇಲ್ಪಟ್ಟವರಿಗೂ ಕೂಡ ಈ ಯೋಜನೆಯನ್ನು ವಿಸ್ತರಣೆ ಮಾಡಲಾಗಿದೆ. ಸುಮಾರು 5 ಲಕ್ಷ ರೂಪಾಯಿಯ ತನಕ ಆರೋಗ್ಯ ವಿಮೆ ಈ ಯೋಜನೆಯ ಅಡಿಯಲ್ಲಿ ಲಭ್ಯವಿದೆ. ಆಸ್ಪತ್ರೆಯ ದಾಖಲಾತಿ ಸೇರಿದಂತೆ ಶಸ್ತ್ರಚಿಕಿತ್ಸೆಯನ್ನು ಕೂಡ ಈ ಯೋಜನೆಯ ಅಡಿಯಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದು.
* ಆರೋಗ್ಯ ತಪಾಸಣೆ ಕಾರ್ಯಕ್ರಮ
ಸ್ಥಳೀಯ ಆರೋಗ್ಯ ಕೇಂದ್ರದಲ್ಲಿ ಹಿರಿಯ ನಾಗರಿಕರು ಉಚಿತವಾಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳಬಹುದು. ಎಲ್ಲಾ ಸರ್ಕಾರೀ ಆಸ್ಪತ್ರೆಗಳಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ಉಚಿತ ಆರೋಗ್ಯ ತಪಾಸಣೆ ಸೇವೆಯನ್ನು ನೀಡಬೇಕು ಅಂತ ಸರ್ಕಾರ ಆದೇಶ ಹೊರಡಿಸಿದೆ. ಅದೇ ರೀತಿಯಲ್ಲಿ ಬ್ಯಾಂಕಿಂಗ್ ಸೇವೆಯಲ್ಲಿ ಕೂಡ ಹಿರಿಯ ನಾಗರಿಕರು ವಿಶೇಷ ಸೇವೆ ಪಡೆದುಕೊಳ್ಳಬಹುದಾಗಿದೆ.
Disclaimer: This information is provided for awareness purposes only. For personalised legal advice, consult a qualified professional and refer to official government notifications.

