Gruha lakshmi Problem: ಗೃಹಲಕ್ಷ್ಮಿ ಯೋಜನೆಯಲ್ಲಿ ಎದುರಾಗಿದೆ ದೊಡ್ಡ ಸಮಸ್ಯೆ, 2000 ರೂ ಗಾಗಿ ಶಾಪ ಹಾಕಿದ ನಾರಿಯರು.
ಗೃಹ ಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆಯಲ್ಲಿ ಎದುರಾದ ಸಮಸ್ಯೆಯಿಂದ ಗೃಹ ಲಕ್ಷ್ಮಿ ನೋಂದಣಿ ಕಾರ್ಯ ಸ್ಥಗಿತ.
Server Problem For Gruha Lakshmi Application: ಪ್ರಸ್ತುತ ರಾಜ್ಯದಲ್ಲಿ ಗೃಹ ಲಕ್ಷ್ಮಿಯ (Gruha Lakshmi Scheme) ಸದ್ದು ಜೋರಾಗಿಯೇ ಕೇಳಿ ಬರುತ್ತಿದೆ. ಗೃಹ ಲಕ್ಷ್ಮಿ ಯೋಜನೆಯ ಕುರಿತಾಗಿ ಸುದ್ದಿಗಳು ವೈರಲ್ ಆಗುತ್ತಿವೆ.
ಜುಲೈ19 ರಂದು ಗೃಹ ಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆ ಪ್ರಾರಂಭಿಸುವುದರ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದಾರೆ. ಇನ್ನು ಈಗಾಗಲೇ ಗೃಹ ಲಕ್ಷ್ಮಿ ಯೋಜನೆ ಅನುಷ್ಠಾನದ ಕುರಿತು ಸಾಕಷ್ಟು ಸುದ್ದಿಗಳು ಹರಿದಾಡಿದ್ದವು. ಕೊನೆಗೂ ಅರ್ಜಿ ಸಲ್ಲಿಕೆಯ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ಜುಲೈ 20 ರಿಂದ ಗೃಹ ಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆ ಆರಂಭ
ಪ್ರತಿ ಮನೆಯ ಒಡತಿಯರಿಗೆ ಮಾಸಿಕ 2000 ಹಣ ನೀಡುವ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಹೊರಡಿಸಿದ್ದರು. ಮನೆ ಒಡತಿಯರು ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ತೊಂದರೆ ಆಗಬಾರದೆಂದು ಕೆಲವು ಪ್ರಮುಖ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯ ಸಮಯದಲ್ಲಿ ಮನೆ ಯಜಮಾನಿಗೆ ಗೃಹ ಲಕ್ಷ್ಮಿ ಯೋಜನೆಯ ಲಾಭ ನೀಡಲು ಸರ್ಕಾರ ಸಿದ್ಧತೆ ನಡೆಸುತ್ತಿದೆ.
ಈಗಾಗಲೇ ಲಕ್ಷಾಂತರ ಜನರು ಯೋಜನೆಗೆ ಅರ್ಜಿ ಸಲ್ಲಿಸುತ್ತಿದ್ದಾರೆ. ಆದರೆ ಅರ್ಜಿ ಸಲ್ಲಿಕೆಯ ಸಮಯದಲ್ಲಿ ಬಹುದೊಡ್ಡ ಸಂಕಷ್ಟ ಎದುರಾಗಿದೆ. ಇನ್ನು ಗೃಹ ಲಕ್ಷ್ಮಿ ಯೋಜನೆಯು ರಾಜ್ಯದ 12.8 ಮಿಲಿಯನ್ ಕುಟುಂಬಗಳಿಗೆ ಲಾಭವನ್ನು ನೀಡಲಿದೆ.
ಜುಲೈ 21 ರಂದು ಸಿದ್ದರಾಮಯ್ಯ ಅವರು ಯೋಜನೆಗೆ ಚಾಲನೆಯನ್ನು ನೀಡಿದ್ದಾರೆ. ಎಪಿಎಲ್, ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಹೊಂದಿರುವವರು ಈ ಯೋಜನೆಯ ಲಾಭವನ್ನು ಪಡೆಯಬಹುದು. ಆದರೆ ಆದಾಯ ತೆರಿಗೆ ಮತ್ತು ಜಿಎಸ್ ಟಿ ಪಾವತಿದಾರರು ಈ ಗೃಹ ಲಕ್ಷ್ಮಿ ಯೋಜನೆಗೆ ಅರ್ಹರಾಗಿರುವುದಿಲ್ಲ.
ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆಗೆ ಎದುರಾಗಿದೆ ದೊಡ್ಡ ಸಮಸ್ಯೆ
ಇನ್ನು ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆಗೆ ಇದೀಗ ಸರ್ವರ್ ಸಮಸ್ಯೆ (Server Problem) ಎದುರಾಗಿದೆ. ಸರವರ್ ಸಮಸ್ಯೆಯಿಂದ ಗೃಹ ಲಕ್ಷ್ಮಿ ನೋಂದಣಿ ಕಾರ್ಯ ಸ್ಥಗಿತಗೊಂಡಿದೆ. ಮಹಿಳೆಯರು ಬೆಳಿಗ್ಗೆಯಿಂದ ಸಂಜೆಯ ತನಕ ಕಾಯುವ ಪರಿಸ್ಥಿತಿ ಎದುರಾಗಿದೆ.
ಪಡಿತರ ಚೀಟಿ, ಆಧಾರ್ ಸಂಖ್ಯೆ, ಪತಿಯ ಆಧಾರ್ ಸಂಖ್ಯೆ, ಬ್ಯಾಂಕ್ ಪಾಸ್ ಪುಸ್ತಕದ ಮಾಹಿತಿ ಹೊಂದಿದ್ದರು ಕೂಡ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳುತ್ತಿಲ್ಲ. ಸರ್ವರ್ ಸಮಸ್ಯೆಯಿಂದಾಗಿ ಸೇವಾ ಕೇಂದ್ರದ ಸಿಬ್ಬಂದಿಗಳು ಅಸಹಾಯಕರಾಗಿದ್ದಾರೆ. ನೋಂದಣಿ ಪ್ರಕ್ರಿಯೆಗೆ ಅಡ್ಡಿ ಉಂಟಾಗಿರುವ ಕಾರಣ ಮಹಿಳೆಯರು ಕಿಡಿ ಕಾರುತ್ತಿದ್ದಾರೆ.
SMS ಮೂಲಕ ಅರ್ಜಿ ಸಲ್ಲಿಕೆಯ ಬಗ್ಗೆ ಮಾಹಿತಿ ನೀಡಲಾಗುತ್ತದೆ
ಇನ್ನು ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳು 8147500500 ಸಂಖ್ಯೆಗೆ ಆಧಾರ್ ಕಾರ್ಡ್ ನಲ್ಲಿ ಲಿಂಕ್ ಆಗಿರುವ ಮೊಬೈಲ್ ನಿಂದ ನಿಮ್ಮ ಪಡಿತರ ಚೀಟಿ ಸಂಖ್ಯೆಯನ್ನು SMS ನ ಮೂಲಕ ಕಳುಹಿಸಬೇಕು. ನಿಮ್ಮ ಸಂದೇಶ ತಲುಪಿದ ಕೆಲವೇ ಕ್ಷಣದಲ್ಲಿ ನಿಮಗೆ VM -SEVSIN ಕರ್ನಾಟಕ ಸರ್ಕಾರದ ವತಿಯಿಂದ ನೀವು ಯಾವ ದಿನಾಂಕದಲ್ಲಿ ಯಾವ ಸಮಯಕ್ಕೆ ಯಾವ ಸ್ಥಳದಲ್ಲಿ ಹೋಗಿ ಅರ್ಜಿ ಸಲ್ಲಿಸಬೇಕು ಎನ್ನುವ ಮೆಸೇಜ್ ನಿಮಗೆ ತಲುಪುತ್ತದೆ.