Shakti Yojana: ಇನ್ನುಮುಂದೆ ಖಾಸಗಿ ಬಸ್ಸಿನಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ, ಅಂತಿಮ ನಿರ್ಧಾರ ಬಾಕಿ.
ಖಾಸಗಿ ಬಸ್ ಗಳಿಗೂ ಶಕ್ತಿ ಯೋಜನೆ ವಿಸ್ತರಣೆ, ಮಹತ್ವದ ಮಾಹಿತಿ ನೀಡಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ.
Shakti Yojana Update: ಕಾಂಗ್ರೆಸ್ ನ ಐದು ಗ್ಯಾರಂಟಿ ಯೋಜನೆಗಳ ಕುರಿತಾಗಿ ದಿನಕ್ಕೊಂದು ಅಪ್ಡೇಟ್ ಹೊರಬೀಳುತ್ತಲೇ ಇದೆ. ಈಗಾಗಲೇ ನಾಲ್ಕು ಯೋಜನೆಗಳ ಅನುಷ್ಠಾನದ ಕುರಿತು ಕಾಂಗ್ರೆಸ್ (Congress) ಸರ್ಕಾರ ಘೋಷಣೆ ಹೊರಡಿಸಿದೆ. ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹ ಜ್ಯೋತಿ ಯೋಜನೆಗಳ ಲಾಭ ಸದ್ಯದಲ್ಲೇ ಜನರಿಗೆ ಸಿಗಲಿದೆ.
ಗೃಹ ಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆ ಜುಲೈ 20 ರಿಂದ ಪ್ರಾರಂಭವಾಗಿದೆ. ಅರ್ಹ ಫಲಾನುಭವಿಗಳು ಆಗಸ್ಟ್ ನಲ್ಲಿ ಯೋಜನೆಯ ಲಾಭ ಪಡೆಯಬಹುದಾಗಿದೆ. ಇನ್ನು ನಿನ್ನೆಯಷ್ಟೇ ಸಿದ್ದರಾಮಯ್ಯ ಅವರು ಯುವನಿಧಿ ಯೋಜನೆಯ ಬಗ್ಗೆ ಘೋಷಣೆ ಹೊರಡಿಸಿದ್ದಾರೆ.
ಮಹಿಳೆಯರ ಶಕ್ತಿ ಯೋಜನೆ
ಇನ್ನು ಮಹಿಳೆಯರಿಗಾಗಿ ಜಾರಿಗೊಳಿಸಿರುವ ಶಕ್ತಿ ಯೋಜನೆಯು (Shakti Yojana) ಜೂನ್ 11 ರಿಂದ ಪ್ರಾರಂಭಗೊಂಡಿದೆ. ಕಾಂಗ್ರೆಸ್ ಐದು ಗ್ಯಾರಂಟಿಗಳಲ್ಲಿ ಪ್ರಥಮವಾಗಿ ಶಕ್ತಿ ಯೋಜನೆಗೆ ಅನುಷ್ಠಾನಕ್ಕೆ ಬಂದಿತ್ತು. ಆದರೆ ಶಕ್ತಿ ಯೋಜನೆಯ ವಿರೋಧವಾಗಿ ಸಾಕಷ್ಟು ಪ್ರತಿಭಟನೆಗಳು ನಡೆದಿದ್ದವು. ಶಕ್ತಿ ಯೋಜನೆಯ ಜಾರಿಯಿಂದಾಗಿ ಆಟೋ, ಟ್ಯಾಕ್ಸಿ ಚಾಲಕರಿಗೆ ಹೆಚ್ಚಿನ ನಷ್ಟ ಎದುರಾಗಿದೆ. ಈ ಕಾರಣದಿಂದ ಖಾಸಗಿ ವಾಹನ ಸಂಘಗಳು ಶಕ್ತಿ ಯೋಜನೆಯ ವಿರುದ್ಧ ಧ್ವನಿ ಎತ್ತಿದ್ದಾರೆ.
ಖಾಸಗಿ ಬಸ್ ಗಳಿಗೂ ಶಕ್ತಿ ಯೋಜನೆ ವಿಸ್ತರಣೆ
ಇನ್ನು ರಾಜ್ಯದಲ್ಲಿ ಖಾಸಗಿ ಬಸ್ ಗಳಿಗೂ ಶಕ್ತಿ ಯೋಜನೆ ವಿಸ್ತರಣೆ ಮಾಡುವಂತೆ ಖಾಸಗಿ ಬಸ್ ಸಂಘಗಳು ಒತ್ತಾಯಿಸುತ್ತಿವೆ. ಈ ಸಂಬಂಧ ಸಾರಿಗೆ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ. “ಖಾಸಗಿ ಬಸ್ ಗಳಿಗೂ ಶಕ್ತಿ ಯೋಜನೆ ವಿಸ್ತರಣೆ ಬಗ್ಗೆ ಸಿಎಂ ಜೊತೆ ಸದ್ಯದಲ್ಲೇ ಚರ್ಚೆ ಮಾಡಲಾಗುತ್ತದೆ” ಎಂದು ಸಚಿವ ರಾಮಲಿಂಗ ರೆಡ್ಡಿ ಅವರು ಮಾಹಿತಿ ನೀಡಿದ್ದಾರೆ.
ಜುಲೈ 27 ರಂದು ರಾಜ್ಯದಾದ್ಯಂತ ಬಂದ್ ಗೆ ಕರೆ
ಖಾಸಗಿ ಬಸ್ ಟ್ಯಾಕ್ಸಿ ಮತ್ತು ಆಟೋ ಸಂಘಟನೆಗಳು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆ ನೀಡಲಾಗಿದೆ. ಉಚಿತ ಬಸ್ ಪ್ರಯಾಣದಿಂದಾಗಿ ಆಟೋ, ಟ್ಯಾಕ್ಸಿ, ಖಾಸಗಿ ಬಸ್ ಚಾಲಕರಿಗೆ ಸಂಕಷ್ಟ ಎದುರಾಗುತ್ತಿದೆ. ನಷ್ಟದಲ್ಲಿರುವವರಿಗೆ ಪರಿಹಾರ ನೀಡಬೇಕು ಎಂದು ಕರ್ನಾಟಕ ಖಾಸಗಿ ಸಾರಿಗೆ ಸಂಘಟನೆಗಳು ಸರ್ಕಾರದ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ.
ಬಂಧ್ ಗೆ ಕರೆ ನೀಡಿದ ಖಾಸಗಿ ಸಾರಿಗೆ ಸಂಘಟನೆ
ನಷ್ಟದಲ್ಲಿರುವ ಚಾಲಕರಿಗೆ ಸರ್ಕಾರ ಪ್ರತಿ ತಿಂಗಳು 10 ಸಾವಿರ ರೂ. ಪರಿಹಾರ ನೀಡಬೇಕು ಎಂದು ಬೆಂಗಳೂರು ಆಟೋ ರಿಕ್ಷಾ ಚಾಲಕರ ಸಂಘ ಸರ್ಕಾರಕ್ಕೆ ಒತ್ತಾಯಿಸಿದೆ.
ಉಚಿತ ಪ್ರಯಾಣದಿಂದಾಗಿ ಆಟೋ ಚಾಲಕರು ನಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರ ಭರವಸೆ ನೀಡಿರುವ ಹಾಗೆ ರ್ಯಾಪಿಡ್ ಬೈಕ್ ಟ್ಯಾಕ್ಸಿ ನಿಷೇಧಿಸಬೇಕು, ಅಸಂಘಟಿತ ವಾಣಿಜ್ಯ ಚಾಲಕರಿಗೆ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು. ಹೀಗೆ ಹಲವು ಬೇಡಿಕೆಯನ್ನ ಸರ್ಕಾರದ ಮುಂದೆ ಇಟ್ಟಿದ್ದು ಜೂಲೈ 27 ಕ್ಕೆ ಬಂಧ್ ಕರೆ ನೀಡಲಾಗಿದೆ.