Siddaramaih Order: ಮಹಿಳೆಯರಿಗೆ ಉಚಿತ ಬಸ್ ಬೆನ್ನಲ್ಲೇ ಇನ್ನೊಂದು ಗುಡ್ ನ್ಯೂಸ್ ನೀಡಿದ ಸಿದ್ದರಾಮಯ್ಯ, ಇನ್ನೊಂದು ಘೋಷಣೆ.
ಮಹಿಳೆಯರ ಉಚಿತ ಬಸ್ ಯಶಸ್ವಿ ಬೆನ್ನಲ್ಲೇ ಇನ್ನೊಂದು ಘೋಷಣೆ ಮಾಡಿದ ಸಿದ್ದರಾಮಯ್ಯ.
Shakthi Yojana Latest Update: ರಾಜ್ಯದಲ್ಲಿ ಕಾಂಗ್ರಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದ ಜನತೆಗೆ ಸಾಲು ಸಾಲು ಯೋಜನೆಗಳು ಪರಿಚಯವಾಗುತ್ತಿದೆ. ಕಾಂಗ್ರೆಸ್ ಅಧಿಕಾರವನ್ನು ತೆಗೆದುಕೊಂಡಾಗಿನಿಂದ ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ ಯೋಜನೆಗಳ ಅನುಷ್ಠಾನದಲ್ಲಿ ತೊಡಗಿಕೊಂಡಿದೆ. ರಾಜ್ಯದಲ್ಲಿ ಐದು ಯೋಜನೆಗಳಲ್ಲಿ ಮೊದಲು ಮಹಿಳೆಯರಿಗಾಗಿ ಘೋಷಿಸಿದ್ದ Shakti ಯೋಜನೆ ಜಾರಿ ಮಾಡಲಾಗಿದೆ.
June 11, 2023 ರಿಂದ ರಾಜ್ಯದಲ್ಲಿ ಮಹಿಳೆಯರ ಉಚಿತ ಪ್ರಯಾಣ ಆರಂಭಗೊಂಡಿದೆ. ಈಗಾಗಲೇ ಶಕ್ತಿ ಯೋಜನೆ ಚಲನೆಗೊಂಡು ಬರೋಬ್ಬರಿ 4 ತಿಂಗಳು ಕಳೆದಿದೆ. ಇದೀಗ ರಾಜ್ಯ ಸರ್ಕಾರ ಶಕ್ತಿ ಯೋಜನೆಯನ್ನು ಇನ್ನಷ್ಟು ಸೌಲಭ್ಯ ನೀಡಲು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಈ ಮೂಲಕ ರಾಜ್ಯದ ಮಹಿಳೆಯರಿಗೆ ಮತ್ತೊಮೆ ಖುಷಿ ನೀಡಿದೆ.
ಮಹಿಳೆಯರಿಗೆ ಉಚಿತ ಬಸ್ ಬೆನ್ನಲ್ಲೇ ಇನ್ನೊಂದು ಗುಡ್ ನ್ಯೂಸ್ ನೀಡಿದ ಸಿದ್ದರಾಮಯ್ಯ
ಸದ್ಯ ರಾಜ್ಯದ ಮಹಿಳೆಯರು ಶಕ್ತಿ ಯೋಜನೆಯ ಅಡಿ ಒಂದು ರೂ. ಪಾವತಿಸಿದೆ ಉಚಿತ ಪ್ರಯಾಣವನ್ನು ಮಾಡುತ್ತಿದ್ದಾರೆ. ಸದ್ಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಬೆನ್ನಲ್ಲೇ ಸಿದ್ದರಾಮಯ್ಯ ಇನ್ನೊಂದು ಗುಡ್ ನ್ಯೂಸ್ ನೀಡಿದ್ದಾರೆ. ಶಕ್ತಿ ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಗೊಳಿಸಲು ಸರ್ಕಾರ ಮುಂದಾಗಿದೆ.
ಹೊಸ ಹೊಸ ಬಸ್ ಗಳ ಖರೀದಿಗೆ ಮುಂದಾದ ರಾಜ್ಯ ಸರ್ಕಾರ
ಶಕ್ತಿ ಯೋಜನೆಯಿಂದ ಸರಕಾರಿ ಬಸ್ಸುಗಳಲ್ಲಿ ಶೇ. 15 ರಷ್ಟು ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಇನ್ನಷ್ಟು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಹೊಸದಾಗಿ 5,675 ಬಸ್ ಗಳನ್ನು ಖರೀದಿಸುವ ಯೋಜನೆಯನ್ನು ಸರ್ಕಾರ ಹೂಡಿದೆ.
ಈ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ಕ್ರಮವನ್ನು ಕೈಗೊಳ್ಳುವಂತೆ ಸೂಚನೆಯನ್ನು ನೀಡಿದ್ದಾರೆ. ಇದೀಗ ಹೊಸದಾಗಿ 5,675 ಬಸ್ ಗಳನ್ನು ಖರೀದಿಸಲು ಸರಕಾರ 500 ಕೋಟಿ ರೂಪಾಯಿ ಅನುದಾನ ನೀಡಲಿದೆ. ಸದ್ಯದಲ್ಲೇ ಹೆಚ್ಚುವರಿ ಬಸ್ ಗಳನ್ನೂ ಖರೀದಿಸಿ ಮಹಿಳೆಯರ ಉಚಿತ ಪ್ರಯಾಣವನ್ನು ಸುಗಮಗೊಳಿಸುವುದು ಸರ್ಕಾರದ ಉದ್ದೇಶವಾಗಿದೆ.