About Shamanuru Shivashankarappa: ಕರ್ನಾಟಕದ ಹಿರಿಯ ರಾಜಕಾರಣಿ ಶಿಕ್ಷಣ ಕ್ಷೇತ್ರದಲ್ಲಿ ದಶಕಗಳ ಕಾಲ ಅಚ್ಚಳಿಯದ ನೆನಪು ಮೂಡಿಸಿದ ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಅವರು ನಿನ್ನೆ (ಡಿಸೆಂಬರ್ 14, 2025) ವಿಧಿವಶರಾಗಿದ್ದಾರೆ. 94 ವರ್ಷ ವಯಸ್ಸಿನ ಶಾಮನೂರು ಶಿವಶಂಕರಪ್ಪ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು ಬೆಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ನಿನ್ನೆ ಸಂಜೆ ಕೊನೆಯುಸಿರೆಳೆದಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ರಾಜಕೀಯ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿದ್ದ ಶಾಮನೂರು ಶಿವಶಂಕರಪ್ಪ ಅಗಲಿಕೆ ಕರ್ನಾಟಕ ರಾಜ್ಯ ಮತ್ತು ದೇಶಕ್ಕೆ ತುಂಬಲಾರದ ನಷ್ಟ ಉಂಟುಮಾಡಿದೆ.
ಶಾಮನೂರು ಶಿವಶಂಕರಪ್ಪ ಆರಂಭಿಕ ಜೀವನ
1931 ರ ಜೂನ್ 16ರಂದು ದಾವಣಗೆರೆಯ ಶಾಮನೂರು ಗ್ರಾಮದಲ್ಲಿ ಜನಿಸಿದ ಶಿವಶಂಕರಪ್ಪ ಅವರು ಸಾವಿತ್ರಮ್ಮ ಮತ್ತು ಶಾಮನೂರು ಕಲ್ಲಪ್ಪ ದಂಪತಿಯ ಹಿರಿಯ ಮಗನಾಗಿ ಜನಿಸುತ್ತಾರೆ. ಸರಳ ಕುಟುಂಬದಿಂದ ಬಂದ ಅವರು ಕಠಿಣ ಪರಿಶ್ರಮದಿಂದ ಉದ್ಯಮಿ, ರಾಜಕಾರಣಿ ಮತ್ತು ಶಿಕ್ಷಣಾಧಾನಿ ಕೂಡ ಆಗಿದ್ದರು. ಅವರು ತಮ್ಮ ಜೀವನದಲ್ಲಿ ಶಿಕ್ಷಣ ಮತ್ತು ಸಮಾಜ ಸೇವೆಗೆ ಹೆಚ್ಚು ಒತ್ತು ನೀಡಿದ್ದಾರೆ. ದಾವಣಗೆರೆಯನ್ನು ವಿದ್ಯಾ ಕೇಂದ್ರವಾಗಿ ಬೆಳೆಸುವಲ್ಲಿ ಅವರ ಪಾತ್ರ ಬಹಳ ಅಪಾರವಾಗಿದೆ.
ಶಾಮನೂರು ಶಿವಶಂಕರಪ್ಪ ಸೇವೆಗಳು
* ಶಾಮನೂರು ಶಿವಶಂಕರಪ್ಪ ರಾಜಕೀಯ ಪಯಣ
1969 ರಲ್ಲಿ ದಾವಣಗೆರೆ ಮುನ್ಸಿಪಲ್ ಕೌನ್ಸಿಲ್ ಸದಸ್ಯರಾಗಿ ರಾಜಕೀಯಕ್ಕೆ ಪ್ರವೇಶಿಸಿದ ಶಾಮನೂರು ಶಿವಶಂಕರಪ್ಪ ಅವರು 1971 ರಲ್ಲಿ ಅಧ್ಯಕ್ಷರಾದರು. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಆರು ಬಾರಿ ಶಾಸಕರಾಗಿದ್ದಾರೆ. ನಂತರ 1998-99 ರಲ್ಲಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗುತ್ತಾರೆ. 2023 ರ ಚುನಾವಣೆಯಲ್ಲಿ 92 ವರ್ಷ ವಯಸ್ಸಿನಲ್ಲಿ ಗೆದ್ದು ದೇಶದ ಅತೀ ಹಿರಿಯ ಕಾರ್ಯನಿರತ ಶಾಸಕರೆಂಬ ಖ್ಯಾತಿಯನ್ನು ಕೂಡ ಪಡೆದುಕೊಳ್ಳುತ್ತಾರೆ. ಮಾಜಿ ಸಚಿವರಾಗಿ ತೋಟಗಾರಿಕೆ ಖಾತೆ ನಿರ್ವಹಿಸಿದ್ದಲ್ಲದೇ KPCC ಖಜಾಂಚಿಯಾಗಿ ದೀರ್ಘಕಾಲ ಸೇವೆ ಸಲ್ಲಿಸಿದರು. ಎಲ್ಲ ಪಕ್ಷಗಳ ನಾಯಕರೊಂದಿಗೆ ಉತ್ತಮ ಸಂಬಂಧ ಹೊಂದಿದ್ದ ಶಾಮನೂರು ಶಿವಶಂಕರಪ್ಪ ಅವರು ಅಜಾತಶತ್ರುವೆಂದು ಖ್ಯಾತರಾಗಿದ್ದರು.
*ಶಿಕ್ಷಣ ಕ್ಷೇತ್ರಕ್ಕೆ ಶಾಮನೂರು ಶಿವಶಂಕರಪ್ಪ ಕೊಡುಗೆ
ಶಾಮನೂರು ಶಿವಶಂಕರಪ್ಪ ಅವರು ತಮ್ಮ ಜೀವನದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ. ಬಾಪೂಜಿ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿ ದಾವಣಗೆರೆಯನ್ನು ಶಿಕ್ಷಣ ಹಬ್ ಆಗಿ ಬೆಳೆಸುತ್ತಾರೆ. ಇಂಜಿನಿಯರಿಂಗ್, ಮೆಡಿಕಲ್, ಫಾರ್ಮಸಿ ಸೇರಿದಂತೆ ಹಲವು ಕಾಲೇಜುಗಳು ಮತ್ತು ಶಾಲೆಗಳನ್ನು ನಡೆಸುತ್ತಾ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ಉತ್ತಮಗೊಳಿಸಿದ್ದಾರೆ.
ಉದ್ಯಮಿಯಾಗಿ ಮತ್ತು ಸಮಾಜ ಸೇವೆ
ಶಾಮನೂರು ಶಿವಶಂಕರಪ್ಪ ಅವರು ಉದ್ಯಮಿಯಾಗಿಯೂ ಯಶಸ್ಸು ಕಂಡವರಾಗಿದ್ದರೆ. Shamanur Group of Industries ಮೂಲಕ ಸಾಕಷ್ಟು ಉದ್ಯೋಗ ಸೃಷ್ಟಿಸಿದರು. ಜನಕಲ್ಯಾಣ ಟ್ರಸ್ಟ್ ಸ್ಥಾಪಿಸಿ ಕೋಟ್ಯಾಂತರ ರೂಪಾಯಿ ದೇಣಿಗೆ ನೀಡುತ್ತಾರೆ. ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಸಮುದಾಯದ ಏಕತೆಗೆ ಶ್ರಮಿಸುತ್ತಾರೆ. ಹಾಗೆ ಪ್ರಭಾವಿ ಲಿಂಗಾಯತ ನಾಯಕರಾಗಿ ಸಮಾಜದಲ್ಲಿ ಗೌರವ ಗಳಿಸುತ್ತಾರೆ.
ಶಾಮನೂರು ಶಿವಶಂಕರಪ್ಪ ಅವರ ಕುಟುಂಬ
ಶಾಮನೂರು ಶಿವಶಂಕರಪ್ಪ ಅವರಿಗೆ ಮೂವರು ಪುತ್ರರು ಮತ್ತು ನಾಲ್ಕು ಪುತ್ರಿಯರು. ಪುತ್ರ ಎಸ್.ಎಸ್. ಮಲ್ಲಿಕಾರ್ಜುನ್ ಕರ್ನಾಟಕ ಸಚಿವರಾಗಿದ್ದು, ಸೊಸೆ ಪ್ರಭಾ ಮಲ್ಲಿಕಾರ್ಜುನ್ ದಾವಣಗೆರೆ ಲೋಕಸಭಾ ಸದಸ್ಯರಾಗಿದ್ದಾರೆ.
ಶಾಮನೂರು ಶಿವಶಂಕರಪ್ಪ ಅಗಲಿಕೆಗೆ ಹಲವರ ಸಂತಾಪ
ಶಾಮನೂರು ಶಿವಶಂಕರಪ್ಪ ಅವರ ನಿಧಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿ ದೇವೇಗೌಡ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ದಾವಣಗೆರೆಯಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಮ್ಮ ಸುದೀರ್ಘ ಸಾರ್ವಜನಿಕ ಜೀವನದಲ್ಲಿ ಅಪವಾದ, ಆರೋಪಗಳಿಂದ ದೂರವಿದ್ದು, ಸಿಕ್ಕ ಅಧಿಕಾರವನ್ನು ಜನಕಲ್ಯಾಣಕ್ಕಾಗಿಯೇ ಮುಡುಪಿಟ್ಟಿದ್ದ ನಾಯಕನ ಅಗಲಿಕೆ ರಾಜ್ಯಕ್ಕೆ ತುಂಬಲಾರದ ನಷ್ಟ ಆಗಿದೆ.
Disclaimer: This information is provided for awareness purposes only. For personalised legal advice, consult a qualified professional and refer to official government notifications.

