Kodi Mutt: ಈ ಮೂರೂ ವ್ಯಕ್ತಿಗಳಿಗೆ ಗಂಡಾಂತರ, ದಿಡೀರನೆ ಇನ್ನೊಂದು ಆಘಾತಕಾರಿ ಭವಿಷ್ಯ ನುಡಿದ ಕೊಡಿ ಶ್ರೀಗಳು.

ಶಿವಯೋಗಿ ಶಿವಾನಂದ ರಾಜೇಂದ್ರ ಸ್ವಾಮೀಜಿಯವರು ದೇಶದ ಮಹಾನ್ ವ್ಯಕ್ತಿಗಳಿಗೆ ಎದುರಾಗುವ ಕಂಟಕದ ಬಗ್ಗೆ ಮಾಹಿತಿ ನೀಡಿದ್ದಾರೆ.

Kodi Mutt Swamiji New Astrology: ಭವಿಷ್ಯ ಹೇಳುವುದರಲ್ಲಿ ಪ್ರಖ್ಯಾತಿ ಪಡೆದಿರುವ ಕೊಡಿ ಮಠದ ಶಿವಯೋಗಿ ಶಿವಾನಂದ ರಾಜೇಂದ್ರ (Shivayogi Shivananda Rajendra) ಸ್ವಾಮೀಜಿಯವರು ಸದ್ಯದಲ್ಲಿ ಸಂಭವಿಸಲಿರುವ ಕೆಲವು ಅಚ್ಚರಿಯ ಘಟನೆಗಳ ಬಗ್ಗೆ ಮಾಹಿತಿ ನೀಡಿದ್ದರು. ಈ ಹಿಂದೆ ರಾಜಕೀಯದ ಕುರಿತು ಒಂದಿಷ್ಟು ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ.

ವಿಧಾನಸಭಾ ಚುನಾವಣೆ ಹಾಗೂ ಲೋಕಸಭಾ ಚುನಾವಣೆಯ ಕುರಿತು ಮಹತ್ವದ ಭವಿಷ್ಯವನ್ನು ನುಡಿದಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷ ಅಧಿಕಾರವನ್ನು ಪಡೆಯುತ್ತದೆ ಎನ್ನುವ ಬಗ್ಗೆ ಸ್ವಾಮೀಜಿಯವರು ಭವಿಷ್ಯವಾಣಿ ನುಡಿದಿದ್ದರು. ಇದೀಗ ಶಿವಯೋಗಿ ಶಿವಾನಂದ ರಾಜೇಂದ್ರ ಸ್ವಾಮೀಜಿಯವರು ದೇಶದ ಮಹಾನ್ ವ್ಯಕ್ತಿಗಳಿಗೆ ಎದುರಾಗುವ ಕಂಟಕದ ಬಗ್ಗೆ ಮಾಹಿತಿ ನೀಡಿದ್ದಾರೆ.

Shivayogi Shivananda Rajendra latest news

2024 ರ ಯುಗಾಧಿ ವೇಳೆಗೆ ಮತ್ತೊಂದು ಧುರ್ಘಟನೆ
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹಾರಹಳ್ಳಿಯಲ್ಲಿರುವ ಕೊಡಿ ಮಠದಲ್ಲಿ ಶ್ರೀಗಳು ಯುಗಾಧಿಯ ಭವಿಷ್ಯ ನುಡಿದಿದ್ದಾರೆ. “ದೇಶದಲ್ಲಿ ಮತ್ತೊಂದು ದುರ್ಘಟನೆ ನಡೆಯುತ್ತದೆ. ಜಗತ್ತಿನ ಸಾಮ್ರಾಟರೆಲ್ಲ ತಲ್ಲಣವಾಗುವ ಕಾಲ ಬರುತ್ತದೆ. ದೊಡ್ಡ ಪಟ್ಟಣಗಳಿಗೆ ಅಪಾಯದ ಸೂಚನೆಯಿದ್ದು, ದೊಡ್ಡ ದೊಡ್ಡ ಕಟ್ಟಡಗಳು ಕುಸಿಯುವ ಸಾಧ್ಯತೆ ಇದೆ. ಅಲ್ಲದೆ, 2024 ರ ಯುಗಾದಿಯೊಳಗೆ ಮೂರು ಮಂದಿ ಮಹಾನ್ ವ್ಯಕ್ತಿಗಳಿಗೆ ಅಪಾಯವಿದೆ.

ನಮ್ಮನ್ನು ಆಳುವವರು ಎಚ್ಚರ ವಹಿಸಿದರೆ ಈ ಧುರ್ಘಟನೆ ತಪ್ಪಿಸಬಹುದು. ಕಾಲ ಬಂದಾಗ ನಾನೆ ಎಲ್ಲವನ್ನು ವಿವರಿಸುತ್ತೇನೆ. ಜೀವನ ಆಡಂಬರ ರಹಿತವಾಗಿರಬೇಕು. ಅದ್ಯಾತ್ಮಿಕವಾದ ಚಿಂತನೆ ನಮ್ಮಲಿರಬೇಕು” ಎಂದಿದ್ದಾರೆ.

Join Nadunudi News WhatsApp Group

Shivayogi Shivananda Rajendra
Image Credit: Oneindia

ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ. ಆದರೆ ಕೆಲವ್ರು ಬಹುಬೇಗ ಹಣ ಮಾಡುವ ಆಸೆ ಹೊಂದಿದ್ದಾರೆ. ಅದೇ ಅವರಿಗೆ ಆಪತ್ತು ತಂದುಕೊಡುತ್ತದೆ. ಆಘಾತಗಳು ಸಂಭವಿಸಲಿದೆ. ಆದರೆ ಯಾವುದೇ ತೊಂದರೆಯಿಲ್ಲ. ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಆಗುವ ಸಂಭವವಿದೆ. ಹೀಗಾಗಿ ಸರ್ಕಾರ ಜನರ ಹಿತಕ್ಕಾಗಿ ಬದಲಾಗಬೇಕಿದೆ” ಎಂದಿದ್ದಾರೆ.

Join Nadunudi News WhatsApp Group