Siddaramaiah: ಸಿದ್ದರಾಮಯ್ಯ ಸರ್ಕಾರದ ಬಹುದೊಡ್ಡ ನಿರ್ಧಾರ, ರಾಜ್ಯದ ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್.

ರಾಜ್ಯದ ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್

Siddaramaiah About Guarantee: ಸದ್ಯ ರಾಜ್ಯದ ಜನತೆ ಸರ್ಕಾರದ ಗ್ಯಾರಂಟಿ ಯೋಜನೆಗಳ ಲಾಭವನ್ನು ಪಡೆಯುತ್ತಿದ್ದಾರೆ. ಸರ್ಕಾರದ ಐದು ಉಚಿತ ಗ್ಯಾರಂಟಿ ಯೋಜನೆಗಳು ರಾಜ್ಯದ ಜನತೆಗೆ ತಲುಪುತ್ತಿದೆ. ಇನ್ನು ರಾಜ್ಯ ಸರ್ಕಾರ ಐದು ಉಚಿತ ಗ್ಯಾರಂಟಿಯನ್ನು ನೀಡುವುದಕ್ಕಾಗಿ ವಾರ್ಷಿಕವಾಗಿ 50 ಸಾವಿರ ಕೋಟಿಗೂ ಹೆಚ್ಚು ಹಣವನ್ನು ಖರ್ಚು ಮಾಡುತ್ತಿದೆ. ಇಷ್ಟೊಂದು ವೆಚ್ಚವನ್ನು ಭರಿಸಲು ಸರಕಾರಕ್ಕೆ ಕಷ್ಟವಾಗುವುತ್ತಿರುವುದಂತೂ ಸತ್ಯ.

ಉಚಿತ ಗ್ಯಾರಂಟಿ ಯೋಜನೆಗಳಿಗಾಗಿ ವಸ್ತುಗಳ ಬೆಲೆ ಏರಿಕೆಯಾಗುತ್ತದೆ ಎಂದು ಸರ್ಕಾರವನ್ನು ದೂರುತ್ತಿದ್ದಾರೆ. ಆದಾಗ್ಯೂ, ಸರ್ಕಾರ ಗ್ಯಾರಂಟಿ ಜಾರಿಗಾಗಿ ಎಲ್ಲಿಂದ ಹಣವನ್ನು ತರುತ್ತಿದೆ ಎನ್ನುವ ಬಗ್ಗೆ ಆಗಾಗ ಚರ್ಚೆ ನಡೆಯುತ್ತಲೇ ಇದೆ. ಸದ್ಯ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಹಣ ಹೊಂದಿಸಲು ಹೊಸ ಮಾರ್ಗವನ್ನು ಕಂಡುಹಿಡಿದಿದೆ. 

Siddaramaiah About Guarantee
Image Credit: Business-standard

ಸಿದ್ದರಾಮಯ್ಯ ಸರ್ಕಾರದ ಬಹುದೊಡ್ಡ ನಿರ್ಧಾರ
ಗ್ಯಾರಂಟಿ ಹೊಡೆತದಿಂದ ತಪ್ಪಿಸಿಕೊಳ್ಳಲು ರಾಜ್ಯ ಸರ್ಕಾರ ಹೊಸ ಪ್ಲಾನ್ ಮಾಡಿದೆ. ಪರಿಸ್ತಿಷ್ಠ ಜಾತಿ ಉಪಯೋಜನೆ (SCSP ) , ಮತ್ತು ಪರಿಶಿಷ್ಟ ಪಂಗಡಗಳ ಉಪಯೋಜನೆಗೆಂದು (TSP ) ಮೀಸಲಿಟ್ಟ ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ಬಳಸಲು ಸರ್ಕಾರ ಮುಂದಾಗಿದೆ ಎನ್ನಲಾಗುತ್ತಿದೆ. ಹೌದು, ರಾಜ್ಯ ಸರ್ಕಾರ ಇದೀಗ ಗ್ಯಾರಂಟಿ ಯೋಜನೆಗಳ ಜಾರಿಗೆ ಹಣ ಹೊಂದಿಸಲು SCSP ಮತ್ತು TSP ಬಜೆಟ್ ನಲ್ಲಿ ಮೀಸಲಿಟ್ಟ ಒಟ್ಟು ಹಣದಲ್ಲಿ 14282 ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಲು ಅನುಮತಿ ನೀಡಿದೆ.

ರಾಜ್ಯದ ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್
FY 2024-25 ರಲ್ಲಿ SCSP ಮತ್ತು TSP ಅಡಿಯಲ್ಲಿ 39,121.46 ಕೋಟಿಗಳನ್ನು ಮೀಸಲಿಡಲಾಗಿದೆ. ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ರಾಜ್ಯ ಅಭಿವೃದ್ಧಿ ಮಂಡಳಿಯು ಹಣವನ್ನು ಖರ್ಚು ಮಾಡುವ ಉದ್ದೇಶಿತ ಕ್ರಿಯಾ ಯೋಜನೆಗೆ ಶುಕ್ರವಾರ ಅನುಮೋದನೆ ನೀಡಿದೆ. ಶಕ್ತಿ ಯೋಜನೆಗೆ 1451 ಕೋಟಿ, ಗೃಹ ಲಕ್ಷ್ಮಿ ಯೋಜನೆಗೆ 7881 ಕೋಟಿ, ಗೃಹ ಜ್ಯೋತಿ ಯೋಜನೆಗೆ 2585 ಕೋಟಿ, ಅನ್ನ ಭಾಗ್ಯ ನಗದು ಯೋಜನೆಗೆ 2187 ಕೋಟಿ, ಯುವ ನಿಧಿ ಯೋಜನೆಗೆ 175 ಕೋಟಿ ಮೀಸಲು ಇಡಲು ಸರ್ಕಾರ ನಿರ್ಧರಿಸಿದೆ.

Congress Guarantee Scheme
Image Credit: Vistaranews

Join Nadunudi News WhatsApp Group

Join Nadunudi News WhatsApp Group