Siddaramaiah: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಿದ್ದು ಯಾಕೆ…? ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

ಪೆಟ್ರೋಲ್ -ಡೀಸೆಲ್ ಬೆಲೆ ಏರಿಕೆ ಬಗ್ಗೆ ಸಿದ್ದರಾಮಯ್ಯ ಹೇಳುವುದೇನು...?

Siddaramaiah About Petrol- Diesel Price Hike: ಪ್ರಸ್ತುತ ರಾಜ್ಯದಲ್ಲಿ ವಸ್ತುಗಳ ಬೆಲೆ ಒಂದೊಂದೇ ಏರಿಕೆಯಾಗುತ್ತಿದೆ. ಸದ್ಯ ಮೊದಲೇ ಬೆಲೆ ಏರಿಕೆಯನ್ನು ಎದುರಿಸುತ್ತಿರುವ ಜನರಿಗೆ ಇದೀಗ ಮತ್ತೊಂದು ಬೆಲೆ ಏರಿಕೆಯ ಬಿಸಿ ತಾಗಿದೆ. ಹೌದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಪೆಟ್ರೋಲ್- ಡೀಸೆಲ್ ಬೆಲೆಯನ್ನು ಹೆಚ್ಚಿಸಿದೆ. ದಿಢೀರ್ ಬೆಲೆ ಏರಿಕೆ ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ.

ಪೆಟ್ರೋಲ್ ಬೆಲೆ 3 ರೂಪಾಯಿ ಮತ್ತು ಡೀಸೆಲ್ ಬೆಲೆ 3.5 ರೂಪಾಯಿ ಏರಿಕೆಯಾಗಿದೆ. ಸರ್ಕಾರದ ಈ ಕ್ರಮಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯ ಬಗ್ಗೆ ಸಮರ್ಥನೆ ನೀಡಿದ್ದಾರೆ. ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಯನ್ನು ಏಕೆ ಏರಿಸಲಾಯಿತು ಅನ್ನುವುದಕ್ಕೆ ಸಿದ್ದರಾಮಯ್ಯ ಅವರು ಏನು ಹೇಳಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಇಲ್ಲಿದೆ.

Siddaramaiah About Petrol- Diesel Price Hike
Image Credit: Live Mint

ರಾಜ್ಯದಲ್ಲಿ ಪೆಟ್ರೋಲ್ -ಡೀಸೆಲ್ ಬೆಲೆ ಏರಿಕೆ
ದೇಶದಲ್ಲಿ ಡಬಲ್ ಇಂಜಿನ್ ಹೊಂದಿದ್ದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಿತ್ತು. ಆದರೆ, ಕೇಂದ್ರ ಬಿಜೆಪಿ ಸರ್ಕಾರ ಪದೇ ಪದೇ ವ್ಯಾಟ್ ಹೆಚ್ಚಿಸಿತ್ತು. ಇದರಿಂದ ಕರ್ನಾಟಕದ ಆದಾಯ ಕುಂಠಿತವಾಗಿತ್ತು. ರಾಜ್ಯ ವ್ಯಾಟ್ ಹೆಚ್ಚಳದಿಂದ ಜನಸೇವೆ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಹಣ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೈಲ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇನ್ನು ಬಿಜೆಪಿಯಿಂದ ನಾಳೆ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳುವ ಮುನ್ನವೇ ಪೆಟ್ರೋಲ್- ಡೀಸೆಲ್ ಬೆಲೆ ಕಡಿಮೆ ಮಾಡೋಲ್ಲ ಎನ್ನುವ ಮುನ್ಸೂಚನೆಯನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ.

Petrol And Diesel Price Hike
Image Credit: The Statesman

ಬೆಲೆ ಏರಿಕೆಯ ಬಗ್ಗೆ ಸಿದ್ದರಾಮಯ್ಯ ಹೇಳುವುದೇನು…?
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಿಎಂ ಸಿದ್ದರಾಮಯ್ಯ, ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಹೆಚ್ಚಳದ ನಂತರ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯಾಗಿದೆ. ಆರ್ಥಿಕವಾಗಿ ದೇಶದಲ್ಲೇ ಬಲಿಷ್ಠವಾಗಿರುವ ಮಹಾರಾಷ್ಟ್ರಕ್ಕಿಂತ ನಮ್ಮ ರಾಜ್ಯ ಕಡಿಮೆ ದರವನ್ನು ಹೊಂದಿದೆ. ನಮ್ಮ ರಾಜ್ಯದಲ್ಲಿ ಡೀಸೆಲ್ ಬೆಲೆ ಗುಜರಾತ್ ಮತ್ತು ಮಧ್ಯಪ್ರವೇಶ ರಾಜ್ಯಕ್ಕಿಂತ ಕಡಿಮೆ ಇದೆ. ಹೀಗಾಗಿ ತೈಲಗಳ ಮೇಲಿನ ರಾಜ್ಯದ ವ್ಯಾಟ್ ದರವನ್ನು ಹೆಚ್ಚಿಸಿದ್ದೇವೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಹಿಂದಿನ ಡಬಲ್ ಇಂಜಿನ್ ಬಿಜೆಪಿ ಸರ್ಕಾರ ನಮ್ಮ ರಾಜ್ಯದ ಸಂಪನ್ಮೂಲವನ್ನು ಬೇರೆ ರಾಜ್ಯಕ್ಕೆ ನೀಡಿತ್ತು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಿತ್ತು. ಆದರೆ, ಕೇಂದ್ರ ಬಿಜೆಪಿ ಸರ್ಕಾರ ಪದೇ ಪದೇ ವ್ಯಾಟ್ ಹೆಚ್ಚಿಸಿತ್ತು. ಇದರಿಂದ ಕರ್ನಾಟಕದ ಆದಾಯ ಕುಂಠಿತವಾಗಿತ್ತು. ಆದರೆ ಕೇಂದ್ರ ಸರ್ಕಾರ ಕನ್ನಡಿಗರಿಗೆ ಮೋಸ ಮಾಡಿ ಹೆಚ್ಚು ತೆರಿಗೆ ವಸೂಲಿ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಅವರು ಬಿಜೆಪಿ ಸರ್ಕಾರವನ್ನು ಆರೋಪಿಸಿದ್ದಾರೆ.

Join Nadunudi News WhatsApp Group

Karnataka fuel price hike
Image Credit: India Today

Join Nadunudi News WhatsApp Group