Siddaramaiah Tweet: ಮುಖ್ಯಮಂತ್ರಿ ಆದ ಬೆನ್ನಲ್ಲೇ ಕೊಟ್ಟ ಗ್ಯಾರೆಂಟಿಗಳ ಬಗ್ಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ.

ಕಾಂಗ್ರೆಸ್ ನೀಡಿದ ಗ್ಯಾರೆಂಟಿಗಳ ಬಗ್ಗೆ ನೂತನ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಭರವಸೆಯನ್ನ ನೀಡಿದ್ದಾರೆ.

Siddaramaiah Tweeted About Congress Guarantee: ಕರ್ನಾಟಕದಲ್ಲಿ ಈ ಬಾರಿ ಹೊಸ ಸರ್ಕಾರ ರಚನೆಯಾಗಿದೆ. ಬರೋಬ್ಬರಿ 135 ಸ್ಥಾನಗಳನ್ನು ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ (Congress) ಸರ್ಕಾರ ಅಧಿಕಾರವನ್ನು ಪಡೆದಿದೆ.

ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಈ ಹಿಂದೆ ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಯ ಸ್ಥಾನದಲ್ಲಿದ್ದರು.ಇನ್ನು ಬಸವರಾಜ್ ಬೊಮ್ಮಾಯಿ ಅವರು ರಾಜ್ಯದ ಮಾಜಿ ಮುಖ್ಯಮಂತ್ರಿಯಾಗಿದ್ದಾರೆ.

The new Chief Minister Siddaramaiah has promised about the guarantees given by the Congress.
Image Credit: livelaw

ಕಾಂಗ್ರೆಸ್ ಸರ್ಕಾರದಿಂದ ಹೊಸ ಮುಖ್ಯಮಂತ್ರಿಯ ಆಯ್ಕೆಯಾಗಿದೆ. ಮಾಜಿ ಮುಖ್ಯಮಂತ್ರಿ ಸ್ಥಾನದಲ್ಲಿದ್ದ ಸಿದ್ದರಾಮಯ್ಯ (Siddaramaiah)  ಅವರು ಮತ್ತೆ ಮುಖ್ಯಮಂತ್ರಿಯಾಗಿದ್ದಾರೆ.ಇದೀಗ ರಾಜ್ಯದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನೀಡಿದ ಭರವಸೆಗಳ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಸ್ಥಾನ ಮತ್ತೊಮ್ಮೆ ಪಡೆದ ಸಿದ್ದರಾಮಯ್ಯ
ಕಾಂಗ್ರೆಸ್ ಪಕ್ಷದ ನೂತನ ನಾಯಕರಾಗಿ ಸಿದ್ದರಾಮಯ್ಯ ಅವರು ಹಾಗೂ ಉಪ ಮುಖಯಮಂತ್ರಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ (D.K Shivakumar) ಅವರು ಆಯ್ಕೆ ಆಗಿದ್ದಾರ. ಕಾಂಗ್ರೆಸ್ ಹೈಕಮಾಂಡ್ ಗುರುವಾರ (ಮೇ 19 ) ರಂದು ಅಧಿಕೃತ ಘೋಷಣೆ ಹೊರಡಿಸಲಿದೆ.

Siddaramaiah Tweeted About Congress Guarantee
Image Credit: thesouthfirst

ಕೆ.ಸಿ ವೇಣುಗೋಪಾಲ್ ಅವರು ನೂತನ ಮುಖ್ಯಮಂತ್ರಿಯ ಅಧಿಕೃತ ಘೋಷಣೆ ಹೊರಡಿಸಿದ್ದಾರೆ. ಮೇ 20 ರಂದು ನೂತನ ಮುಖ್ಯಮಂತ್ರಿ ಹಾಗು ಉಪ ಮುಖ್ಯಮಂತ್ರಿ ಅವರು 12 :30 ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇನ್ನು ಮುಖ್ಯಮಂತ್ರಿ ಆದ ಬೆನ್ನಲ್ಲೇ ಕಾಂಗ್ರೆಸ್ ನೀಡಿದ ಗ್ಯಾರೆಂಟಿಗಳ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

Join Nadunudi News WhatsApp Group

ಕಾಂಗ್ರೆಸ್ ಗ್ಯಾರೆಂಟಿಗಳ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ
ಪ್ರಚಾರ ವೇಳೆ ಕಾಂಗ್ರೆಸ್ ಸರ್ಕಾರ ಜನತೆಗೆ ಐದು ಭರವಸೆಗಳನ್ನು ನೀಡುತ್ತು. ಕಾಂಗ್ರೆಸ್ ಪಕ್ಷ ನೀಡಿದ ಭರವಸೆಗಳನ್ನು ಈಡೇರಿಸುತ್ತದೆ ಎನ್ನುವ ಕಾರಣ ಜನತೆ ಕೈ ಗೆ ಬೆಂಬಲವನ್ನು ನೀಡಿದರು. ಇದೀಗ ಹೊಸ ಸರ್ಕಾರದ ಭರವಸೆಗಳ ಲಭ್ಯತೆಯ ಬಗ್ಗೆ ಕರ್ನಾಟಕದ ಜನತೆ ಕುತೂಹಲರಾಗಿದ್ದಾರೆ.

ಈ ನಡುವೆ ಸಿದ್ದರಾಮಯ್ಯ ಕಾಂಗ್ರೆಸ್ ಭರವಸೆಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. “ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಲಿದೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ, ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ” ಎಂದು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ.

Join Nadunudi News WhatsApp Group