Siddaramaiah: ಫ್ರೀ ಬಸ್ ಬೆನ್ನಲ್ಲೇ ಇನ್ನೊಂದು ಉಚಿತ ಯೋಜನೆ ಘೋಷಣೆ ಮಾಡಿದ ಸರ್ಕಾರ, ಸಂತಸದಲ್ಲಿ ಜನರು.
ಇನ್ನುಮುಂದೆ ಈ ಕೆಲಸ ಮಾಡುವವರಿಗೆ ಉಚಿತ ವಿದ್ಯುತ್ ಸಿಗಲಿದೆ.
Siddaramaiah Tweet: ರಾಜ್ಯದಲ್ಲಿ ಕಾಂಗ್ರೆಸ್ ತನ್ನ ಅಧಿಕಾರವನ್ನು ಆರಂಭಿಸಿದಾಗಿಂದ ಘೋಷಣೆ ಹೊರಡಿಸಿದ ಐದು ಯೋಜನೆಗಳ ಅನುಷ್ಠಾನ ಕಾರ್ಯದಲ್ಲಿ ತೊಡಗಿಕೊಂಡಿದೆ. ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಶಕ್ತಿ ಯೋಜನೆ, ಬಡತನ ರೇಖೆಗಿಂತ ಕೆಳಗಿರುವವರಿಗೆ ಅನ್ನ ಭಾಗ್ಯ ಯೋಜನೆ, ಗೃಹ ಜ್ಯೋತಿ ಯೋಜನೆಯಡಿ 200 ಯುನಿಟ್ ಉಚಿತ ವಿದ್ಯುತ್ ಈ ಯೋಜನೆಗಳ ಲಾಭವನ್ನು ಅರ್ಹ ಫಲಾನುಭವಿಗಳು ಪಡೆಯುತ್ತಿದ್ದಾರೆ.
ಇನ್ನು ಗೃಹ ಲಕ್ಷ್ಮಿ ಯೋಜನೆಗಳ ಲಾಭ ಆಗಸ್ಟ್ 31 ರಂದು ಅರ್ಹ ಅರ್ಹ ಫಲಾನುಭವಿಗಳಿಗೆ ಸಿಗಲಿದೆ. ಕಾಂಗ್ರೆಸ್ ಸರ್ಕಾರ ಘೋಸಿರುವ ಉದ್ಯೋಗ ಭತ್ಯೆ ಯೋಜನೆಯಾಗಿರುವ ಯುವ ನಿಧಿ ಸದ್ಯದಲ್ಲೇ ಘೋಷಣೆಯಾಗಲಿದೆ. ಐದು ಯೋಜನೆಗಳನ್ನು ಅನುಷ್ಠಾನಗೊಳಿಸಲಿರುವ ರಾಜ್ಯ ಸರಕಾರ ಇದೀಗ ಉಚಿತ ಯೋಜನೆಗಳ ಕುರಿತು ಮಹತ್ವದ ನಿರ್ಧಾರ ಕೈಗೊಂಡಿದೆ. ಉಚಿತ ಯೋಜನೆಗಳಿಗೆ ಸಂಭಂದಿಸಿದಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah ) ಅವರು ಮಹತ್ವದ ಮಾಹಿತಿ ನೀಡಿದ್ದಾರೆ.
ಉಚಿತ ವಿದ್ಯುತ್ ಬೆನ್ನಲೇ ಸಿದ್ದರಾಮಯ್ಯ ಮಹತ್ವದ ಘೋಷಣೆ
ರಾಜ್ಯದಲ್ಲಿ ಗೃಹ ಜ್ಯೋತಿ ಯೋಜನೆಯಡಿ ಉಚಿತ 200 ಯುನಿಟ್ ವಿದ್ಯುತ್ ನೀಡಲಾಗುತ್ತಿದೆ. ಜುಲೈ ತಿಂಗಳಿಂದ ರಾಜ್ಯದ ಜನತೆ ಉಚಿತ ವಿದ್ಯುತ್ ಲಾಭ ಪಡೆಯುತ್ತಿದ್ದಾರೆ. ಉಚಿತ ವಿದ್ಯುತ್ ನೀಡಿರುವ ಬೆನ್ನಲ್ಲೇ ಇದೀಗ ಸಿದ್ದರಾಮಯ್ಯ ಅವರು ಮತ್ತೊಂದು ಮಹತ್ವದ ಆದೇಶವನ್ನು ಹೊರಡಿಸಿದ್ದಾರೆ. “ಸಣ್ಣ ನೇಕಾರರಿಗೆ 10 ಹೆಚ್ ಪಿ ವರೆಗೆ ಉಚಿತ ವಿದ್ಯುತ್ ನೀಡಲು ತೀರ್ಮಾನಿಸಲಾಗಿದೆ” ಎಂದು ಸಿದ್ದರಾಮಯ್ಯ ಅವರು ಘೋಷಣೆ ಹೊರಡಿಸಿದ್ದಾರೆ.
ನೇಕಾರರ ಬಹುದಿನಗಳ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸಣ್ಣ ನೇಕಾರರಿಗೆ 10 ಹೆಚ್.ಪಿ ವರೆಗೆ ಉಚಿತ ವಿದ್ಯುತ್ ಪೂರೈಕೆ ಮಾಡುವ ಮಹತ್ವದ ನಿರ್ಣಯ ಕೈಗೊಂಡಿದ್ದೇನೆ.
– ಮುಖ್ಯಮಂತ್ರಿ @siddaramaiah— CM of Karnataka (@CMofKarnataka) August 25, 2023
ಟ್ವೀಟ್ ಮೂಲಕ ಸಿದ್ದರಾಮಯ್ಯ ಅಧಿಕೃತ ಘೋಷಣೆ
ಸಿಎಂ ಅವರ ಅದ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೇಕಾರರ ನಿಯೋಗದ ಜೊತೆ ಚರ್ಚಿಸಿ ನಂತರ ಸಿದ್ದರಾಮಯ್ಯ ಅವರು ಈ ನಿರ್ಧಾರದ ಬಗ್ಗೆ ಘೋಷಣೆ ನೀಡಿದ್ದಾರೆ. ‘ನೇಕಾರರ ಬಹುದಿನಗಳ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸಣ್ಣ ನೇಕಾರರಿಗೆ 10 ಹೆಚ್.ಪಿ ವರೆಗೆ ಉಚಿತ ವಿದ್ಯುತ್ ಪೂರೈಕೆ ಮಾಡುವ ಮಹತ್ವದ ನಿರ್ಣಯ ಕೈಗೊಂಡಿದ್ದೇನೆ’ ಎಂದು ಟ್ವೀಟ್ ಮಾಡುವ ಮೂಲಕ ಅಧಿಕೃತ ಘೋಷಣೆ ಹೊರಡಿಸಿದ್ದಾರೆ.