Siddaramaiah Tweet: ರದ್ದಾಗಲಿದೆ ಮಹಿಳೆಯರ ಉಚಿತ ಬಸ್ ಯೋಜನೆ, ಸ್ಪಷ್ಟನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ.
ಶಕ್ತಿ ಯೋಜನೆ ಸ್ಥಗಿತ ಗೊಳ್ಳುವ ಸುದ್ದಿಯ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ.
Siddaramaiah Tweeted About Shakti Scheme: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕಾರಣ ಘೋಷಣೆ ಹೊರಡಿಸಿದಂತೆ ಐದು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇಗಾಗಲೇ ರಾಜ್ಯದಲ್ಲಿ ಶಕ್ತಿ ಯೋಜನೆ, ಗೃಹ ಜ್ಯೋತಿ, ಅನ್ನ ಭಾಗ್ಯ, ಗೃಹ ಲಕ್ಷ್ಮಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಇನ್ನು ಉದ್ಯೋಗ ಭತ್ಯೆಯಾಗಿ ನೀಡುವ ಯುವ ನಿಧಿ ಯೋಜನೆಯ ಬಗೆ ಸದ್ಯದಲ್ಲೇ ಸರ್ಕಾರ ಘೋಷಣೆ ಹೊರಡಿಸಲಿದೆ.
ಇನ್ನು ಕಾಂಗ್ರೆಸ್ ಸರ್ಕಾರದ ಐದು ಯೋಜನೆಗಳಲ್ಲಿ ಶಕ್ತಿ ಯೋಜನೆಯು ಮೊದಲ ಬಾರಿ ಅನುಷ್ಠಾಗೊಳಿಸಲಾಗಿತ್ತು. ಶಕ್ತಿ ಯೋಜನೆಯ ಲಾಭ ರಾಜ್ಯದ ಮಹಿಳೆಯರು ಪಡೆಯುತ್ತಿದ್ದರು. ಪ್ರತಿನಿತ್ಯ ಲಕ್ಷಾಂತರ ಮಹಿಳಾ ಪ್ರಯಾಣಿಕರು ಉಚಿತ ಬಸ್ ಪ್ರಯಾಣದ ಲಾಭ ಪಡೆಯುತ್ತಿದ್ದಾರೆ. ಇನ್ನು ಶಕ್ತಿ ಯೋಜನೆಯ ಎಫೆಕ್ಟ್ ನಿಂದಾಗಿ ಖಾಸಗಿ ಸಂಘಟನೆಗಳು ಸಾಕಷ್ಟು ಮುಷ್ಕರವನ್ನು ಪ್ರಾರಂಭಿಸಿದ್ದರು.
ಶಕ್ತಿ ಯೋಜನೆ ಇನ್ನುಮುಂದೆ ಸ್ಥಗಿತ
ಇನ್ನು ಶಕ್ತಿ ಯೋಜನೆಗೆ ಮಾತ್ರ ವಾರ್ಷಿಕವಾಗಿ 3000 ರಿಂದ 4000 ಕೋಟಿ ಹಣ ಅನುದಾನ ಬೇಕಿದೆ. ಹೀಗಾಗಿ ಹಣಕಾಸು ಸಚಿವಾಲಯ ಶಕ್ತಿ ಯೋಜನೆಯ ಜಾರಿಯನ್ನು ತಡೆಹಿಡಿದಿತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಿಳೆಯರಿಗೆ ಶಕ್ತಿ ಯೋಜನೆಯನ್ನು ಜಾರಿಗೊಳಿಸಿದ್ದರು.
ಇದೀಗ ಆಗಸ್ಟ್ 15 ರ ನಂತರ ರಾಜ್ಯದಲ್ಲಿ ಶಕ್ತಿ ಯೋಜನೆ ಬಂದ್ ಆಗಲಿದೆ ಎನ್ನುವ ಬಗ್ಗೆ ಸುದ್ದಿಗಳು ಹರಿದಾಡುತ್ತಿವೆ. ಸೋಶಿಯಲ್ ಮೀಡಿಯಾದಲ್ಲಿ ಶಕ್ತಿ ಯೋಜನೆಯ ಸುದ್ದಿಗಳು ಬಾರಿ ವೈರಲ್ ಆಗುತ್ತಿದೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಶಕ್ತಿ ಯೋಜನೆ ಸ್ಥಗಿತವಾಗುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಯಾವುದೇ ಕಾರಣಕ್ಕೂ ಶಕ್ತಿ ಯೋಜನೆ ಸ್ಥಗಿತಗೊಳ್ಳುವುದಿಲ್ಲ
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಶಕ್ತಿ ಯೋಜನೆಯ ಸುದ್ದಿಗಳಿಗೆ ಸಿದ್ದರಾಮಯ್ಯ ಅವರು ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ. “ಮೊದಲಿಗೆ ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂದು ಅಪಪ್ರಚಾರ ಮಾಡಿದರು.
ಈಗ ಆ ಯೋಜನೆಗಳು ಹೆಚ್ಚು ಕಾಲ ಚಾಲನೆ ಇಲ್ಲಾ ಎಂದು ಅಪಪ್ರಚಾರ ಆರಂಭಿಸಿದ್ದಾರೆ. ಇಂತಹ ಸುಳ್ಳು ಸುದ್ದಿಗೆ ಕಿವಿಕೊಡಬೇಡಿ. ಯಾವುದೇ ಕಾರಣಕ್ಕೂ ಶಕ್ತಿ ಯೋಜನೆ ಸ್ಥಗಿತಗೊಳ್ಳುವುದಿಲ್ಲ. ನಮ್ಮದು ನುಡಿದಂತೆ ನಡೆಯುವ ಸರ್ಕಾರ. ಇದಕ್ಕೆ ನಾನೇ ಗ್ಯಾರಂಟಿ ಎಂದು ಟ್ವೀಟ್ ನ ಮೂಲಕ ತಿಳಿಸಿದ್ದಾರೆ.
ಮೊದಲು ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂದು ಅಪಪ್ರಚಾರ ಮಾಡಿದರು,
ಈಗ ಈ ಯೋಜನೆಗಳು ಹೆಚ್ಚು ಕಾಲ ಚಾಲನೆಯಲ್ಲಿ ಇರುವುದಿಲ್ಲ ಎಂದು ಅಪಪ್ರಚಾರ ಆರಂಭಿಸಿದ್ದಾರೆ.ಇಂಥ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ, ನಮ್ಮದು ನುಡಿದಂತೆ ನಡೆಯುತ್ತಿರುವ ಸರ್ಕಾರ.
ಇದಕ್ಕೆ ನಾನೇ ಗ್ಯಾರಂಟಿ. pic.twitter.com/VCBUgwKUpn— Siddaramaiah (@siddaramaiah) August 16, 2023
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಇನ್ನು ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿ ಅವರು ಕೂಡ ಪ್ರತಿಕ್ರಿಯಿಸಿದ್ದಾರೆ. ‘ಶಕ್ತಿ ಯೋಜನೆಯನ್ನು ನಿಲ್ಲಿಸಲಾಗುತ್ತದೆ ಎಂದು ಒಂದು ರಾಜಕೀಯ ಪಕ್ಷ ಸುಳ್ಳು ಹರಡುತ್ತಿದೆ. ಯೋಜನೆಯ ಯಶಸ್ಸನ್ನು ಸಹಿಸಿಕೊಳ್ಳಲಾಗದ ಪ್ರತಿಪಕ್ಷದವರು ಈ ರೀತಿ ಮಾಡುತ್ತಿದ್ದಾರೆ.
ಈ ಐದು ವರ್ಷ ಮಾತ್ರವಲ್ಲ ಇನ್ನು ಹತ್ತು ವರ್ಷ ಶಕ್ತಿ ಯೋಜನೆ ಮುಂದುವರೆಯಲಿದೆ. ಯೋಜನೆಯ ಲಾಭ ಪಡೆಯಲು ಪಾಸ್ ಪಡೆಯುವ ಅಗತ್ಯ ಇರುವುದಿಲ್ಲ. ಮುಂದೆಯೂ ನಾವೇ ಅಧಿಕಾರದಲ್ಲಿರುತ್ತೇವೆ. ಹೀಗಾಗಿ ಮುಂದಿನ 10 ವರ್ಷ ಮಹಿಳೆಯರು ರಾಜ್ಯದಾದ್ಯಂತ ಸಾರಿಗೆ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಇದರಲ್ಲಿ ಯಾವುದೇ ಗೊಂದಲಗಳು ಬೇಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.