Interest Waived: ಬಡ್ಡಿ ಮನ್ನಾ ಘೋಷಣೆ ಮಾಡಿದ ಸಿದ್ದರಾಮಯ್ಯ, ರಾಜ್ಯ ಸರ್ಕಾರದಿಂದ ರೈತರಿಗೆ ಇನ್ನೊಂದು ಗಿಫ್ಟ್.
ರೈತರ ಬಡ್ಡಿ ಮನ್ನಾ ಮಾಡುವ ಬಗ್ಗೆ ಸಿದ್ದರಾಮಯ್ಯ ಅವರ ಮಹತ್ವದ ನಿರ್ಧಾರ.
Siddaramaiah About Interest Waived: ರಾಜ್ಯ ಸರ್ಕಾರ ಜನರಿಗಾಗಿ ವಿವಿಧ ಯೋಜನೆಯನ್ನು ಪರಿಚಯಿಸುತ್ತ ರಾಜ್ಯದ ಜನತೆಗೆ ಆರ್ಥಿಕವಾಗಿ ಬೆಂಬಲ ಇಡುತ್ತಿದೆ. ಈಗಾಗಲೇ ರಾಜ್ಯದ ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳ ಜೊತೆಗೆ ಹಲವಾರು ಯೋಜನೆಗಳನ್ನು ಸರಕಾರ ಘೋಷಿಸಿದೆ. ಅದರಲ್ಲೂ ಮುಖ್ಯವಾಗಿ ಸರ್ಕಾರ ರೈತರಿಗೆ ಹೆಚ್ಚಿನ ಯೋಜನೆಯನ್ನು ಪರಿಚಯಿಸಿದೆ.
ಈ ಬಾರಿ ರಾಜ್ಯದಲ್ಲಿ ಮಳೆ ಕೈಕೊಟ್ಟ ಕಾರಣಕ್ಕೆ ಅನ್ನದಾತರು ಹೆಚ್ಚಿನ ನಷ್ಟವನ್ನು ಅನುಭವಿಸಬೇಕಾದ ಪರಿಸ್ಥಿತಿ ಬಂದೊದಗಿದೆ. ಅನ್ನದಾತರ ಕಷ್ಟವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ವಿವಿಧ ಯೋಜನೆಯನ್ನು ಪರಿಚಯಿಸಿದೆ. ಸದ್ಯ ರಾಜ್ಯ ಸರ್ಕಾರ ರೈತರಿಗೆ ಬಡ್ಡಿ ಮನ್ನಾ ಮಾಡುವುದಾಗಿ ಘೋಷಣೆ ಹೊರಡಿಸಿದೆ. ಆದರೆ ರಾಜ್ಯದ ರೈತರು ತಮ್ಮ ಸಾಲದ ಬಡ್ಡಿ ಮನ್ನಾ ಮಾಡಿಕೊಳ್ಳಲು ಈ ಕೆಲಸ ಮಾಡುವುದು ಅಗತ್ಯವಾಗಿದೆ.
ರೈತರಿಗೆ ಸಿದ್ದರಾಮಯ್ಯ ಮಹತ್ವದ ಘೋಷಣೆ
ಸದ್ಯ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ರಾಜ್ಯದಲ್ಲಿ ಘೋಷಿಸಿರುವ ಯೋಜನೆಗಳ ಅನುಷ್ಠಾನ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಇನ್ನು ಹಲವಾರು ಜಿಲ್ಲೆಗಳಿಗೆ ಭೇಟಿ ನೀಡುತ್ತಿರುವ ಮುಖ್ಯಮಂತ್ರಿ ಅವರು ಅಲ್ಲಿನ ರೈತರ ಸಮಸ್ಯೆಯನ್ನು ಕೇಳಿಸಿಕೊಳ್ಳುತ್ತಿದ್ದಾರೆ. ರೈತರ ಸಮಸ್ಯೆಗೆ ಪರಿಹಾರ ನೀಡಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ. ಸದ್ಯ ರೈತರ ಬಡ್ಡಿ ಮನ್ನಾ ಮಾಡುವ ಬಗ್ಗೆ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ.
ವಿದ್ಯುತ್ ಬಿಲ್ ಅಸಲು ಕಟ್ಟಿದರೆ ಬಡ್ಡಿ ಮನ್ನಾ
ಸದ್ಯ ಹಾಸನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿಶೀಲನಾ ಸಭೆಯಲ್ಲಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಹೊರಡಿಸಿದ್ದಾರೆ. ಅಸಲು ಮತ್ತು ಬಡ್ಡಿ ಮನ್ನಾ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ.
ಸಭೆಯ ಬಳಿಕ ಕಾಫಿ ಬೆಳೆಗಾರರಿಗೆ ಸಿದ್ದರಾಮಯ್ಯ ಅವರು ಸಿಹಿಸುದ್ದಿ ನೀಡಿದ್ದಾರೆ. ಇನ್ನು ವಿದ್ಯುತ್ ಬಿಲ್ ಬಾಕಿ ಉಳಿದಿರುವ ಕಾರಣ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ. ಸದ್ಯ ಕಾಫಿ ಬೆಳೆಗಾರರು ವಿದ್ಯುತ್ ಬಿಲ್ ಅಸಲು ಪಾವತಿಸಿದರೆ ಬಡ್ಡಿ ಮನ್ನಾ ಮಾಡುವುದಾಗಿ ಸಿದ್ದರಾಮಯ್ಯ ಅವರು ಘೋಷಣೆ ಹೊರಡಿಸಿದ್ದಾರೆ. ಈ ಮೂಲಕ ಕಾಫಿ ಬೆಳೆಗಾರರಿಗೆ ಸಿದ್ದರಾಮಯ್ಯ ಅವರು ಸಿಹಿ ಸುದ್ದಿ ನೀಡಿದ್ದಾರೆ.