SSLC Exam: SSLC ಪರೀಕ್ಷೆ ಬರೆಯುವ ಮಕ್ಕಳಿಗೆ ಹೊಸ ನಿಯಮ, ರಾಜ್ಯದ ಸರ್ಕಾರದ ಮಹತ್ವದ ಘೋಷಣೆ.
ಕರ್ನಾಟಕ ಸರ್ಕಾರ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವಲ್ಲಿ ಮಹತ್ವದ ಬದಲಾವಣೆಯನ್ನು ಜಾರಿಗೊಳಿಸಿದೆ.
SSLC Exam New Rule: ವಿದ್ಯಾರ್ಥಿಗಳ ಜೀವನದಲ್ಲಿ ಎಸ್ ಎಸ್ ಎಲ್ ಸಿ (SSLC) ಬಹುಮುಖ್ಯ ಪಾತ್ರ ವಹಿಸುತ್ತದೆ. ಎಸ್ ಎಸ್ ಎಲ್ ಸಿಯಲ್ಲಿ ಉತ್ತಮ ಅಂಕವನ್ನು ಗಳಿಸಿದೆ ವಿದ್ಯಾರ್ಥಿಯ ಭವಿಷ್ಯ ಉಜ್ವಲವಾಗಿರುತ್ತದೆ. ಇನ್ನು ಎಸ್ ಎಸ್ ಎಲ್ ಸಿಯಲ್ಲಿ ಉತ್ತಮ ಗಳಿಸಿದರೆ ಆದಷ್ಟು ಬೇಗ ಉತ್ತಮ ಉದ್ಯೋಗವನ್ನು ಪಡೆದುಕೊಳ್ಳಬಹುದು.
ಅನೇಕ ವಿದ್ಯಾರ್ಥಿಗಳ ಭವಿಷ್ಯವನ್ನು ಎಸ್ ಎಸ್ ಎಲ್ ಸಿ ಅಂಕಗಳು ನಿರ್ಧರಿಸುತ್ತವೆ. ಎಸ್ ಎಸ್ ಎಲ್ ಸಿ ಪರೀಕ್ಷೆಯು ಕೂಡ ಬಹಳ ಕಟ್ಟು ನಿಟ್ಟಾಗಿ ನಡೆಯುವಂತೆ ಶಿಕ್ಷಣ ಇಲಾಖೆ ನಿಗಾ ವಹಿಸುತ್ತದೆ.
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಗಮನಕ್ಕೆ
ಪ್ರಸ್ತುತ 2023 -24 ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿದೆ. ಈ ಬಾರಿಯ ಶೈಕ್ಷಣಿಕ ವರ್ಷದಲ್ಲಿ ಅನೇಕ ನಿಯಮಗಳು ಬದಲಾಗುತ್ತಿವೆ. ವಿದ್ಯಾರ್ಥಿಗಳು ಹೊಸ ಶಿಕ್ಷಣ ನೀತಿಯಡಿ ಶಿಕ್ಷಣವನ್ನು ಪಡೆಯಬೇಕಿದೆ. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಶಿಕ್ಷಣ ಇಲಾಖೆ ಹೊಸ ಹೊಸ ನಿಯಮವನ್ನು ಜಾರಿಗೊಳಿಸಿದೆ.
ಇದೀಗ ಎಸ್ ಎಸ್ ಎಲ್ ಸಿ ಓದುವವರಿಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಶಿಸ್ತುಬದ್ಧವಾಗಿ, ನಿಯಮಾನುಸಾರ ನಡೆಯಬೇಕೆನ್ನುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವಲ್ಲಿ ಮಹತ್ವದ ಬದಲಾವಣೆಯನ್ನು ಜಾರಿಗೊಳಿಸಿದೆ.
ಗ್ರಾಮೀಣ ಪ್ರದೇಶದಲ್ಲಿ ನಡೆಸಲಾಗುವ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ತಡೆ
ಗ್ರಾಮೀಣ ಗ್ರಾಮೀಣ ಪ್ರದೇಶದಲ್ಲಿ ನಡೆಸಲಾಗುವ ಎಸ್ ಎಸ್ ಎಲ್ ಸಿ ಪರೀಕ್ಷೆಯ ಕುರಿತಾಗಿ ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿ ಹೊರಡಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿನ ನಕಲು ತಡೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಶಿಕ್ಷಣ ಇಲಾಖೆ ತೀರ್ಮಾನ ಕೈಗೊಂಡಿದೆ. ಗ್ರಾಮೀಣ ಪದೇಶದಲ್ಲಿ ನಿಗಧಿಪಡಿಸಲಾದಂತಹ ಪರೀಕ್ಷಾ ಕೇಂದ್ರಗಳಿಗೆ ಕೋಕ್ ನೀಡಲಾಗಿದೆ.
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ
ಗ್ರಾಮೀಣ ಪದೇಶದಲ್ಲಿ ನಡೆಸಲಾಗುವ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಗ್ರಾಮೀಣ ಪದೇಶದಲ್ಲಿ ನಡೆಸಲಾಗುವ ಪರೀಕ್ಷಾ ಕೇಂದ್ರಗಳನ್ನು ಹೋಬಳಿ, ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ನಡೆಸುವಂತೆ ಆದೇಶ ನೀಡಲಾಗಿದೆ. ಮುಂದಿನ 2023-24 ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಈ ಹೊಸ ನಿಯಮ ಅನ್ವಯವಾಗಲಿದೆ. ಮುಂದಿನ 2024 ರ ಮಾರ್ಚ್, ಏಪ್ರಿಲ್ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಕಟ್ಟು ನಿಟ್ಟಾಗಿ ನಿರ್ವಹಿಸಲು ಶಿಕ್ಷಣ ಇಲಾಖೆ ಈ ತೀರ್ಮಾನನವನ್ನು ಕೈಗೊಂಡಿದೆ.