Sim Rule 2023: ಸಿಮ್ ಕಾರ್ಡ್ ಬಳಸುವವರಿಗೆ ಇಂದಿನಿಂದ ಹೊಸ ನಿಯಮ, ನಿಯಮ ಪಾಲಿಸದಿದ್ದರೆ 10 ಲಕ್ಷ ರೂ ದಂಡ.

ಸಿಮ್ ಕಾರ್ಡ್ ಖರೀದಿಸಲು ಹೊಸ ನಿಯಮ ಜಾರಿ.

New Rule For Sim Card: ಇತ್ತೀಚಿಗೆ SIM Card ಕುರಿತಾಗಿ ಸಾಕಷ್ಟು ಅಪ್ಡೇಟ್ ಗಳು ಹೊರಬೀಳುತ್ತಿದೆ. ದೇಶದಲ್ಲಿ ಹೆಚ್ಚುತ್ತಿರುವ ವಂಚನೆಯನ್ನು ತಡೆಯಲು ಸರ್ಕಾರ ನಾನಾ ರೀತಿಯಲ್ಲಿ ಪ್ರಯತ್ನಿಸುತ್ತಿದೆ. ಇತ್ತೀಚೆಗಂತೂ Cyber Crime ಪ್ರಕರಣಗಳು ಹೆಚ್ಚು ಬೆಳಕಿಗೆ ಬರುತ್ತಿದೆ. ಒಂದು ರೀತಿಯ ವಂಚನೆಗೆ ಸರ್ಕಾರ ಬ್ರೇಕ್ ಹಾಕಿದರೆ ಇನ್ನೊಂದೆಡೆ ಮತ್ತೊಂದು ವಿಧಾನದಲ್ಲಿ ವಂಚನೆ ಮಾಡಲು ವಂಚರು ಸಿದ್ಧರಾಗುತ್ತಾರೆ.

ಈ ನಿಟ್ಟಿನಲ್ಲಿ ಸರ್ಕಾರ Sim Card Purchase ಮಾಡುವವರಿಗೆ ಹೊಸ ಹೊಸ ನಿಯಮವನ್ನು ಜಾರಿಗೊಳಿಸುತ್ತಿದೆ. ಟೆಲಿಕಾಂ ಸಚಿವರಾದ Ashwini Vaishnaw ಅವರು ಸಿಮ್ ಖರೀದಿಯಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ. ಇದೀಗ ಸಿಮ್ ಕಾರ್ಡ್ ಖರೀದಿಸಲು ಹೊಸ ನಿಯಮ ಜಾರಿಯಾಗಿದೆ.

Sim Card Purchase New Rule
Image Credit: Businessinsider

ಸಿಮ್ ಕಾರ್ಡ್ ಖರೀದಿಗೆ ಹೊಸ ನಿಯಮ
ಇತ್ತೀಚಿಗೆ ಜನರು ಸುಳ್ಳು ಮಾಹಿತಿಯನ್ನ ನೀಡಿ ಹೆಚ್ಚು ಹೆಚ್ಚು ಸಿಮ್ ಗಳನ್ನೂ ಖರೀದಿಸುತ್ತಿದ್ದಾರೆ. ದೂರ ಸಂಪರ್ಕ ಇಲಾಖೆ ಬಲ್ಕ್ ಸಿಮ್ ಖರೀದಿಯನ್ನು ನಿಷೇದಿಸಿದ್ದು, ಇದರ ಬದಲಾಗಿ ವ್ಯಾಪಾರ ಸಂಪರ್ಕದ ಹೊಸ ಪರಿಕಲ್ಪನೆಯನ್ನು ಪರಿಚಯಿಸಲಾಗುತ್ತದೆ. ಬಿಸಿನೆಸ್ KYC ಮಾತ್ರವಲ್ಲದೆ, ಆ ಸಿಮ್ ಪಡೆದುಕೊಂಡ ವ್ಯಕ್ತಿಯ KYC ಕೂಡ ಮಾಡಲಾಗುತ್ತದೆ.

ಈ ನಿಯಮ ಪಾಲಿಸದಿದ್ದರೆ 10 ಲಕ್ಷ ರೂ. ದಂಡ
ಇನ್ನುಮುಂದೆ ಹೊಸ ಫೋನ್ ಸಿಮ್ ಡೀಲರ್ ಗಳಿಗೆ ಪೊಲೀಸ್ ಪರಿಶೀಲನೆ ಮತ್ತು ಬಯೋಮೆಟ್ರಿಕ್ ಪರಿಶೀಲನೆ ಕಡ್ಡಾಯವಾಗಿದೆ. ಎಲ್ಲಾ ಸೇಲ್ ಡೀಲರ್ ಗಳಿಗೆ ನೋಂದಣಿ ಕಡ್ಡಾಯವಾಗಿದೆ. ಇನ್ನು ಸಿಮ್ ಕಾರ್ಡ್ ಗಳನ್ನೂ ಮಾರಾಟ ಮಾಡುವ ಅಸ್ತಿತ್ವದಲ್ಲಿರುವ ಅಂಗಡಿಗಳು ಸಹ ಈಗಾಗಲೇ ಹೊಸ ನಿಯಮದ ಪ್ರಕಾರ ತಮ್ಮ KYC ಅನ್ನು ಮಾಡಬೇಕಾಗಿದೆ.

New Rule For Sim Card
Image Credit: Abplive

ಒಂದು ವೇಳೆ ನಿಯಮವನ್ನು ಉಲ್ಲಂಘಿಸಿದರೆ 10 ಲಕ್ಷ ದಂಡ ವನ್ನು ವಿಧಿಸಲಾಗುತ್ತದೆ ಎಂದು ದೂರ ಸಂಪರ್ಕ ಇಲಾಖೆ ಮಾಹಿತಿ ನೀಡಿದೆ. ಹೆಚ್ಚುತ್ತಿರುವ ನಕಲಿ ಸಿಮ್ ಗಾಲ ಬಳಕೆಯನ್ನು ತಡೆಗಟ್ಟಲು ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಹೊಸ ನಿಯಮದ ಪ್ರಕಾರ, ಮಾರಾಟಗಾರರು ಪೂರ್ವ ಸಕ್ರಿಯಗೊಳಿಸಿದ ಸಿಮ್ ಗಳನ್ನೂ ಇತರರಿಗೆ ವರ್ಗಾಯಿಸಲು ಸಾಧ್ಯವಾಗುವುದಿಲ್ಲ.

Join Nadunudi News WhatsApp Group

October 1 ರಿಂದಲೇ ಹೊಸ ನಿಯಮ ಜಾರಿ
DoT ನ ಹೊಸ ನಿಯಮಗಳ ಪ್ರಕಾರ, ಕಾರ್ಪೊರೇಟ್ ID ಸಂಖ್ಯೆ ಅಥವಾ CIN ಸಂಖ್ಯೆಯನ್ನು ಪ್ರತಿ SIM ಕಾರ್ಡ್ ಅಂಗಡಿಗೆ ನೀಡಲಾಗುತ್ತದೆ. ಈ ಸಂಖ್ಯೆ ಇಲ್ಲದೆ ಯಾರು ಕೊಡ ಸಿಮ್ ಅನ್ನು ಮಾರಾಟ ಮಾಡಲು ಸಾಧ್ಯವಾಗುವುದಿಲ್ಲ. ಈ ಐಡಿ ಇಲ್ಲದೆ ಸಿಮ್ ಕಾರ್ಡ್ ಮಾರಾಟವಾದರೆ ಅಂತಹ ಐಡಿಯನ್ನು ನಿರ್ಬಂಧಿಸಲಾಗುತ್ತದೆ. ಇನ್ನುಮುಂದೆ ವ್ಯಕ್ತಿಯು ಸಿಮ್ ಕಾರ್ಡ್ ಅನ್ನು ಕಳೆದುಕೊಂಡರೆ ಪರಿಶೀಲನೆ ಪ್ರಕ್ರಿಯೆಯ ಮೂಲಕವೇ ಹೋಗಬೇಕಾಗುತ್ತದೆ.

Join Nadunudi News WhatsApp Group