Scholarship: ರಾಜ್ಯದ ಎಲ್ಲಾ ವಿದ್ಯಾರ್ಥಿಗಳ ಖಾತೆಗೆ 10 ಸಾವಿರ ರೂ, ಈ ದಾಖಲೆಯೊಂದಿಗೆ ಇಂದೇ ಅರ್ಜಿ ಸಲ್ಲಿಸಿ

ರಾಜ್ಯದ ಅರ್ಹ ವಿದ್ಯಾರ್ಥಿಗಳಿಗೆ ಸಿಗಲಿದೆ 10 ಸಾವಿರ, ವಿಶೇಷ ವಿದ್ಯಾರ್ಥಿ ವೇತನ.

Sports Scholarship:  ರಾಜ್ಯ ಮತ್ತು ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಪ್ರೋತ್ಸಾಹಕ್ಕೆ ಅನೇಕ ವಿದ್ಯಾರ್ಥಿ ವೇತನವನ್ನು ಪರಿಚಯಿಸುತ್ತ ಇರುತ್ತದೆ. ಸಾಕಷ್ಟು ವಿದ್ಯಾರ್ಥಿಗಳು ವಿದ್ಯಾರ್ಥಿವೇತನದಿಂದ ಸಿಗುವ ಹಣದಿಂದಲೇ ತಮ್ಮ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿಕೊಂಡಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಆಗಾಗ ಹೊಸ ಹೊಸ ವಿದ್ಯಾರ್ಥಿವೇತನವನ್ನು ಬಿಡುಗಡೆ ಮಾಡುತ್ತಾ ಬರುತ್ತದೆ.

ಸದ್ಯ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗಾಗಿ ವಿಶೇಷ ವಿದ್ಯಾರ್ಥಿ ವೇತನವನ್ನು ಪರಿಚಯಿಸಿದೆ. ರಾಜ್ಯ ಸರ್ಕಾರ ಪರಿಚಯಿಸಿರುವ ಈ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಕೆ ಹೇಗೆ..? ವಿದ್ಯಾರ್ಥಿ ವೇತನಕ್ಕೆ ಯಾರು ಆರ್ಹರು..? ಎನ್ನುವ ಬಗ್ಗೆ ಮಾಹಿತಿ ಇಲ್ಲಿದೆ.

Sports Scholarship
Image Credit: Leverageedu

ರಾಜ್ಯದ ಅರ್ಹ ವಿದ್ಯಾರ್ಥಿಗಳಿಗೆ ಸಿಗಲಿದೆ 10 ಸಾವಿರ
ಸದ್ಯ ರಾಜ್ಯ ಸರ್ಕಾರ ವಾರ್ಷಿಕ ರೂ. 10,000 ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನವನ್ನು ನೀಡಲು ಆನ್‌ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ಷಿಕ ರೂ. 10,000 ಕ್ರೀಡಾ ವಿದ್ಯಾರ್ಥಿ ವೇತನ ನೀಡಲು ಇಲಾಖೆಯಲ್ಲಿ ಚಾಲ್ತಿಯಲ್ಲಿದ್ದು, ಈ ಯೋಜನೆಯಡಿ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾ ಪಟುಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು.

2023-24ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಆಯಾ ಜಿಲ್ಲೆಗಳ ಉಪ/ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅರ್ಹ ಕ್ರೀಡಾಪಟುಗಳು ತಮ್ಮ ಅರ್ಜಿಗಳನ್ನು ಕಚೇರಿಯ ಅಧಿಕೃತ ವೆಬ್‌ ಸೈಟ್ https://sevasindhuservices.karnataka.gov ಮೂಲಕ ಆನ್‌ ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ 30/06/2024 ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿದೆ.

Sports Scholarship Application
Image Credit: Stacksports

ವಿದ್ಯಾರ್ಥಿ ವೇತನ ಪಡೆಯಲು ಯಾರು ಅರ್ಹರು…?
•ಅರ್ಜಿದಾರರು 2023-24 ರಲ್ಲಿ ಪ್ರೌಢ ಅಥವಾ ಪ್ರೌಢಶಾಲೆಯಲ್ಲಿ (6 ರಿಂದ 10 ನೇ ತರಗತಿ) ಓದುತ್ತಿರುವ ವಿದ್ಯಾರ್ಥಿಯಾಗಿರಬೇಕು.

Join Nadunudi News WhatsApp Group

•ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದ ದಿನಾಂಕ: 01.04.2023 ರಿಂದ 31.03.2024 ರ ವರೆಗೆ ನೋಂದಾಯಿಸಲಾದ ಕ್ರೀಡಾ ಸಂಸ್ಥೆಗಳು ನಡೆಸುವ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿರಬೇಕು ಮತ್ತು ಮೊದಲ ಸ್ಥಾನವನ್ನು ಪಡೆದಿರಬೇಕು ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು.

•ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ್ದರೆ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು.

•ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸುವ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು.

•ಒಬ್ಬ ಕ್ರೀಡಾಪಟುವು ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದರೂ ವರ್ಷಕ್ಕೆ ಕೇವಲ ಒಂದು ವಿದ್ಯಾರ್ಥಿವೇತನ ಮೊತ್ತಕ್ಕೆ ಅರ್ಹರಾಗಿರುತ್ತಾರೆ.

Sports Scholarship In India
Image Credit: Navbharattimes

Join Nadunudi News WhatsApp Group