Annual Exam Update: SSLC, PUC ವಿದ್ಯಾರ್ಥಿಗಳಿಗೆ ಹೊಸ ಪರೀಕ್ಷಾ ಮಾರ್ಗಸೂಚಿ ಪ್ರಕಟ, ಇಂದೇ ಪರೀಕ್ಷೆಗೆ ಅರ್ಜಿ ಸಲ್ಲಿಸಿ.
ಕರ್ನಾಟಕ ಸರ್ಕಾರ SSLC ಹಾಗೂ PUC ವಿದ್ಯಾರ್ಥಿಗಳ ಪರೀಕ್ಷಾ ನಿಯಮ ಬದಲಿಸಿದೆ
SSLC And PUC Annual Exam -1 Apply: ಸದ್ಯ 2023 -24 ಸಾಲಿನ ಶೈಕ್ಷಣಿಕ ವರ್ಷ ಆರಂಭಗೊಂಡಿದೆ. ಈ ಬಾರಿ ಶಿಕ್ಷಣ ಇಲಾಖೆ ಶಿಕ್ಷಣದ್ಲಲಿ ಹೊಸ ಹೊಸ ನಿಯಮವನ್ನು ಜಾರಿಗೊಳಿಸಿದೆ. ಶಾಲಾ ಮಕ್ಕಳು ಈ ಬಾರಿ ಹೊಸ ಶಿಕ್ಷಣ ನೀತಿಯ ಅಡಿಯಲ್ಲಿ ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಶಾಲಾ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವುದು ಇಲಾಖೆಯ ಗುರಿಯಾಗಿದೆ.
ಹೀಗಾಗಿ ಮಕ್ಕಳ ಶಿಕ್ಷಣದಲ್ಲಿ ಯಾವುದೇ ಕೊರತೆ ಆಗಬಾರದು ಎನ್ನುವ ಕಾರಣ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗಾಗಿ ಹೊಸ ಹೊಸ ಸೌಲಭ್ಯವನ್ನು ಒದಗಿಸುತ್ತಿವೆ. ಸದ್ಯ ಕರ್ನಾಟಕ ಸರ್ಕಾರ SSLC ಹಾಗೂ PUC ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯನ್ನು ನೀಡಿದೆ.
SSLC ಹಾಗೂ PUC ವಿದ್ಯಾರ್ಥಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ
ವಿದ್ಯಾರ್ಥಿ ಜೀವನದಲ್ಲಿ SSLC ಹಾಗೂ PUC ಎಷ್ಟು ಮುಖ್ಯ ಎನ್ನುವುದು ಎಲ್ಲರಿಗು ತಿಳಿದೇ ಇದೆ. ವಿದ್ಯಾರ್ಥಿ ಜೀವನದಲ್ಲಿ SSLC ಹಾಗೂ PUC ಮುಖ್ಯ ಘಟ್ಟ ಎನ್ನಬಹುದು. SSLC ಮತ್ತು PUC ಯಲಿ ಉತ್ತಮ ಅಂಕವನ್ನು ಗಳಿಸಿದೆ ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ. ಸದ್ಯ ಕರ್ನಾಟಕ ಶಿಕ್ಷಣ ಇಲಾಖೆ ಎಸ್ ಎಸ್ ಎಲ್ ಸಿ ಹಾಗು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 1 ಕ್ಕೆ ಹಾಜರಾಗೋ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
ವಾರ್ಷಿಕ ಪರೀಕ್ಷೆ-1 ಕ್ಕೆ ನೋಂದಣಿ ಅರ್ಜಿ ಆಹ್ವಾನ
ಎಸ್ ಎಸ್ ಎಲ್ ಸಿ ಹಾಗು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 1 ಕ್ಕೆ ನೋಂದಾಯಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಅರ್ಜಿ ಆಹ್ವಾನ ಮಾಡಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.
2023 -24 ನೇ ಸಾಲಿನಲ್ಲಿ SSLC ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ 1 ಕ್ಕೆ ರಾಜ್ಯದ ಸರ್ಕಾರೀ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನರಹಿತ ಪ್ರೌಢ ಶಾಲೆ ಮತ್ತು ಕಾಲೇಜುಗಳಿಂದ ಹಾಜರಾಗುವ ಶಾಲಾ, ಖಾಸಗಿ, ಪುನರಾವರ್ತಿತ ಅರ್ಹ ವಿದ್ಯಾರ್ಥಿಗಳನ್ನು ನೋಂದಾಯಿಸಲು ಅರ್ಜಿ ಆಹ್ವಾನಿಸಲಾಗಿದೆ.