Board Exam: SSLC ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ಆದೇಶ, ಬೋರ್ಡ್ ಪರೀಕ್ಷೆ ಬರೆಯಲು ಈ ರೀತಿ ಅರ್ಜಿ ಸಲ್ಲಿಸಿ.
SSLC ವಿದ್ಯಾರ್ಥಿಗಳಿಗೆ ಅಗತ್ಯ ಮಾಹಿತಿ, ಬೋರ್ಡ್ ಪರೀಕ್ಷೆಗೆ ಈ ರೀತಿ ಅರ್ಜಿ ಸಲ್ಲಿಸಿ.
SSLC Board Exam Apply: ಸದ್ಯ ರಾಜ್ಯದಲ್ಲಿ ಶೈಕ್ಷಣಿಕ ನೀತಿಯಲ್ಲಿ ಸಾಕಷ್ಟು ಬದಲಾವಣೆ ಆಗಿದೆ ಎನ್ನಬಹುದು. ರಾಜ್ಯ ಸರ್ಕಾರ ಇತ್ತೀಚಿಗೆ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಬೇಕು ಎನ್ನುವ ಉದ್ದೇಶದಿಂದ ಸರ್ಕಾರ ವಿದ್ಯಾರ್ಥಿಗಳಿಗೆ ಅನೇಕ ಸೌಲಭ್ಯದ ಜೊತೆಗೆ ಹೊಸ ಹೊಸ ನಿಯಮವನ್ನು ಪರಿಚಯಿಸುತ್ತಿದೆ.
ವಿದ್ಯಾರ್ಥಿ ಜೀವನದಲ್ಲಿ SSLC ಅತಿ ಹೆಚ್ಚು ಪ್ರಾಮುಖ್ಯತೆಯನ್ನು ಪಡೆಯುತ್ತದೆ. SSLC ಓದುತ್ತಿರುವ ವಿದ್ಯಾರ್ಥಿಗಳು ಶಿಕ್ಷಣದ್ಲಲಿ ಹೆಚ್ಚಿನ ಆಸಕ್ತಿ ತೋರಿಸಿದೆ ಅವರ ಮುಂದಿನ ಜೀವನ ಉತ್ತಮವಾಗಿರುತ್ತದೆ. ಸದ್ಯ SSLC ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ.
SSLC ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ಆದೇಶ
ಈಗಾಗಲೇ SSLC ವಿದ್ಯಾರ್ಥಿಗಳಿಗೆ ಬೋರ್ಡ್ ಎಕ್ಸಾಂ ಎರಡು ಬಾರಿ ಇರಲಿದೆ ಎನ್ನುವ ಬಗ್ಗೆ ಶಿಕ್ಷಣ ಸಚಿವರು ಮಾಹಿತಿ ನೀಡಿದ್ದಾರೆ. ಇದೀಗ SSLC ವಾರ್ಷಿಕ ಪರೀಕ್ಷೆ 1 ಕ್ಕೆ ನೋಂದಾಯಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಅರ್ಜಿ ಆಹ್ವಾನ ಮಾಡಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.
ಸದ್ಯ 2023 -24 ನೇ ಸಾಲಿನಲ್ಲಿ SSLC ಪರೀಕ್ಷೆ 1 ಕ್ಕೆ ರಾಜ್ಯದ ಸರ್ಕಾರೀ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನರಹಿತ ಪ್ರೌಢ ಶಾಲೆಗಳಿಂದ ಹಾಜರಾಗುವ ಶಾಲಾ, ಖಾಸಗಿ, ಪುನರಾವರ್ತಿತ ಅರ್ಹ ವಿದ್ಯಾರ್ಥಿಗಳನ್ನು ನೋಂದಾಯಿಸಲು ಅರ್ಜಿ ಆಹ್ವಾನಿಸಲಾಗಿದೆ.
ಬೋರ್ಡ್ ಪರೀಕ್ಷೆ ಬರೆಯಲು ಈ ರೀತಿ ಅರ್ಜಿ ಸಲ್ಲಿಸಿ
*ಅರ್ಹ ಅಭ್ಯರ್ಥಿಗಳು https://kseab.karnataka.gov.in/ ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಲಾಗಿನ್ ಮಾಡಿಕೊಳ್ಳಬಹುದು.
*ಶಾಲಾ ಮುಖ್ಯ ಶಿಕ್ಷಕರು ಶಾಲಾ ವಿದ್ಯಾರ್ಥಿಗಳ ಮಾಹಿತಿ, ಭಾವಚಿತ್ರ ಮತ್ತು ಸಹಿಯೊಂದಿಗೆ ತಮ್ಮ ಶಾಲೆಯ ಲಾಗಿನ್ ನಲ್ಲಿ ಬೋರ್ಡ್ ಒದಗಿಸಿದ ಬಳಕೆದಾರ ಹೆಸರು ಮತ್ತು ಪಾಸ್ ವರ್ಡ್ ಅನ್ನು ಬಳಸಿಕೊಂಡು ಆನ್ ಲೈನ್ ನಲ್ಲಿ ನೋಂದಾಯಿಸಿಕೊಳ್ಳಬಹುದು.
*ಶಾಲಾ ವಿದ್ಯಾರ್ಥಿಗಳ ಬಹುತೇಕ ಮಾಹಿತಿಯನ್ನು ಸ್ಯಾಟ್ಸ್ ದತ್ತಾಂಶದಿಂದ ಪಡೆಯುತ್ತಿರುವುದರಿಂದ ಅಭ್ಯರ್ಥಿಯ ಹೆಸರು, ತಂದೆ, ತಾಯಿ ಹೆಸರು, ಜನ್ಮ ದಿನಾಂಕ, ಪ್ರವರ್ಗ, ಲಿಂಗ, ಧರ್ಮ ಮತ್ತು ಮಾಧ್ಯಮ ಇವುಗಳಲ್ಲಿ ಯಾವುದೇ ತಿದ್ದುಪಡಿ ಇದ್ದಲ್ಲಿ ಮಂಡಳಿಯ ಜಾಲತಾಣದಲ್ಲಿ ನೇರವಾಗಿ ಮಾಡಲು ಸಾಧ್ಯವಿಲ್ಲ. ಸ್ಯಾಟ್ಸ್ ನಲ್ಲಿ ತಿದ್ದುಪಡಿ ಮಾಡಿದ ನಂತರ ಮಂಡಳಿ ಶಾಲಾ ಲಾಗಿನ್ ನಲ್ಲಿ ನೋಂದಣಿ ಮಾಡುವಂತೆ ಸಲಹೆ ನೀಡಿದೆ.
*ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ನೀಡಿ ಹಿಂದುಳಿದ ವರ್ಗದವರು ಪರೀಕ್ಷಾ ಶುಲ್ಕದಲ್ಲಿ ವಿನಾಯಿತಿಯನ್ನು ಪಡೆಯಬಹುದು.
*ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಯ ವಿವರವನ್ನು ಕಡ್ಡಾಯವಾಗಿ ನೋಂದಣಿ ಮಾಡಬೇಕು.