SSLC Result: SSLC ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ, ಈ ರೀತಿಯಾಗಿ ನಿಮ್ಮ ಫಲಿತಾಂಶವನ್ನು ಪರಿಶೀಲಿಸಿಕೊಳ್ಳಿ.

ಹತ್ತನೇ ತರಗತಿ ಫಲಿತಾಂಶ ಪ್ರಕಟವಾಗಿದ್ದು ವಿದ್ಯಾರ್ಥಿಗಳು ಈ ರೀತಿಯಾಗಿ ಫಲಿತಾಂಶ ಚೆಕ್ ಮಾಡಿಕೊಳ್ಳಬಹುದು.

SSLC Result check: ಇಂದು ಎಸ್ ಎಸ್ ಎಲ್ ಸಿ (SSLC) ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದೆ. ರಾಜ್ಯದಲ್ಲಿ ಹತ್ತನೇ ತರಗತಿ ಮಕ್ಕಳ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ವಿದ್ಯಾರ್ಥಿಗಳು ಆನ್ಲೈನ್ ಮೂಲಕ ತಮ್ಮ ಪರೀಕ್ಷೆ ಫಲಿತಾಂಶ ಚೆಕ್ ಮಾಡಿಕೊಳ್ಳಬಹುದಾಗಿದೆ.

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆಯು ಮಾರ್ಚ್ 31 ರಿಂದ ಆರಂಭಗೊಂಡಿತ್ತು. ಏಪ್ರಿಲ್ 15 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಮುಕ್ತಾಯಗೊಂಡಿತ್ತು. ಇನ್ನು ಇಂದು ಫಲಿತಾಂಶ ಪ್ರಕಟವಾಗಿದ್ದು ವಿದ್ಯಾರ್ಥಿಗಳು ಸುಲಭ ವಿಧಾನದ ಮೂಲಕ ತಮ್ಮ ಫಲಿತಾಂಶವನ್ನ ನೋಡಬಹುದಾಗಿದೆ.

SSLC Result check
Image Credit: hindustantimes

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ
ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು 8.6 ಲಕ್ಷ ವಿದ್ಯಾರ್ಥಿಗಳು ಬರೆದಿದ್ದಾರೆ. ಉತ್ತರಪತ್ರಿಕೆಗಳು ಮೌಲ್ಯಮಾಪನ ಮಾಡಲಾಗುತ್ತಿದೆ. 45 ಲಕ್ಷಕ್ಕೂ ಹೆಚ್ಚಿನ ಉತ್ತರಪತ್ರಿಕೆಗೂ ತಿದ್ದಲಾಗಿದೆ. ಮೌಲ್ಯಮಾಪನ ಕಾರ್ಯವು ಮುಗಿದಿದ್ದು ಇಂದು ಫಲಿತಾಂಶ ಪ್ರಪ್ರಕಟವಾಗಿದೆ.

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಈ ಸುಲಭ ವಿಧಾನದ ಮೂಲಕ ಪರಿಶೀಲಿಸಿಕೊಳ್ಳಬಹುದು.ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ. ಈ ರೀತಿ ನೀವು ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು.

The result has been published today and students can check their result through the website in an easy way
Image Credit: dnaindia

ಎಸ್ ಎಸ್ ಎಲ್ ಸಿ ಫಲಿತಾಂಶ ಪರಿಶೀಲಿಸುವ ವಿಧಾನ
*karresults.nic.in ಮತ್ತು kseab.karnataka.gov.in ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಫಲಿತಾಂಶವನ್ನು ಪರಿಶೀಲಿಕೊಳ್ಳಬಹುದು.
*ಮೊದಲು ಅಧಿಕೃತ ವೆಬ್ ಸೈಟ್ karresults.nic.in ಗೆ ಭೇಟಿ ನೀಡಬೇಕು.
*ಕರ್ನಾಟಕ ಎಸ್ ಎಸ್ ಎಲ್ ಸಿ 2023 ಫಲಿತಾಂಶ ಲಿಂಕ್ ಅನ್ನು ತೆರೆದರೆ ಹೊಸ ಲಾಗಿನ್ ಪುಟ ತೆರೆಯುತ್ತದೆ.
*ನಂತರ ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಸೂಕ್ತ ಮಾಹಿತಿಯನ್ನು ಸಲ್ಲಿಸಿದರೆ ನಿಮ್ಮ ಫಲಿತಾಂಶ ಪ್ರಕಟವಾಗುತ್ತದೆ.

Join Nadunudi News WhatsApp Group

Join Nadunudi News WhatsApp Group