SSLC Result: ನಾಳೆ SSLC ಫಲಿತಾಂಶ ಪ್ರಕಟ, ಹೀಗೆ ಚೆಕ್ ಮಾಡಿಕೊಳ್ಳಿ ನಿಮ್ಮ ಫಲಿತಾಂಶ.

ನಾಳೆ SSLC ಫಲಿತಾಂಶ ಪ್ರಕಟ, ಫಲಿತಾಂಶವನ್ನು ಈ ಸುಲಭ ವಿಧಾನದ ಮೂಲಕ ಪರಿಶೀಲಿಸಿಕೊಳ್ಳಬಹುದು.

SSLC Result Date: ಇತ್ತೀಚಿನ ದಿನಗಳಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶದ ಬಗ್ಗೆ ಸಾಕಷ್ಟು ಸುದ್ದಿಗಳು ಹರಡಿದ್ದವು. ಇನ್ನು ಎಸ್ ಎಸ್ ಎಲ್ ಸಿ (SSLC) ವಿದ್ಯಾರ್ಥಿಗಳು ತಮ್ಮ ಪರೀಕ್ಷೆಯ ಫಲಿತಾಂಶಕ್ಕೆ (SSLC Result) ಕಾಯುತ್ತಿದ್ದಾರೆ. ಇದೀಗ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶದ ವಿಚಾರವಾಗಿ ಮಾಹಿತಿ ಲಭಿಸಿದೆ.

2022-23 SSLC Result Latest news
Image Credit: ndtv

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆಯು ಮಾರ್ಚ್ 31 ರಿಂದ ಆರಂಭಗೊಂಡಿತ್ತು. ಏಪ್ರಿಲ್ 15 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಮುಕ್ತಾಯಗೊಂಡಿತ್ತು. ಪರೀಕ್ಷೆ ಬರೆದ ವಿದ್ಯಾರ್ಥಿಗಳು ಇದೀಗ ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ. ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶ ನಾಳೆ ಪ್ರಕಟವಾಗಲಿದೆ.

ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು 8.6 ಲಕ್ಷ ವಿದ್ಯಾರ್ಥಿಗಳು ಬರೆದಿದ್ದಾರೆ. ಉತ್ತರಪತ್ರಿಕೆಗಳು ಮೌಲ್ಯಮಾಪನ ಮಾಡಲಾಗುತ್ತಿದೆ. 45 ಲಕ್ಷಕ್ಕೂ ಹೆಚ್ಚಿನ ಉತ್ತರಪತ್ರಿಕೆಗೂ ತಿದ್ದಲಾಗುತ್ತಿದೆ. ಮೌಲ್ಯಮಾಪನ ಕಾರ್ಯವು ಶೀಘ್ರವೇ ಮುಗಿಯಲಿದೆ ಎಂದು ವರದಿಯಾಗಿದೆ. ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಈ ಸುಲಭ ವಿಧಾನದ ಮೂಲಕ ಪರಿಶೀಲಿಸಿಕೊಳ್ಳಬಹುದು.

ಮೇ 8 ರಂದು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ
ಕರ್ನಾಟಕ ಎಸ್ ಎಸ್ ಎಲ್ ಸಿ 2023 ರ ಪರೀಕ್ಷಾ ಮೌಲ್ಯಮಾಪನವು ಈಗಾಗಲೇ ಮುಗಿದಿದ್ದು ನಾಳೆ (ಮೇ 8) ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ವರದಿ ನೀಡಿದೆ. ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ. ಈ ರೀತಿ ನೀವು ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು.

karnataka sslc exam result 2023
Image Credit: tamilanjobs

ಎಸ್ ಎಸ್ ಎಲ್ ಸಿ ಫಲಿತಾಂಶ ಪರಿಶೀಲಿಸುವ ವಿಧಾನ
*karresults.nic.in ಮತ್ತು kseab.karnataka.gov.in ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಫಲಿತಾಂಶವನ್ನು ಪರಿಶೀಲಿಕೊಳ್ಳಬಹುದು.
*ಮೊದಲು ಅಧಿಕೃತ ವೆಬ್ ಸೈಟ್ karresults.nic.in ಗೆ ಭೇಟಿ ನೀಡಬೇಕು.
*ಕರ್ನಾಟಕ ಎಸ್ ಎಸ್ ಎಲ್ ಸಿ 2023 ಫಲಿತಾಂಶ ಲಿಂಕ್ ಅನ್ನು ತೆರೆದರೆ ಹೊಸ ಲಾಗಿನ್ ಪುಟ ತೆರೆಯುತ್ತದೆ.
*ನಂತರ ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಸೂಕ್ತ ಮಾಹಿತಿಯನ್ನು ಸಲ್ಲಿಸಿದರೆ ನಿಮ್ಮ ಫಲಿತಾಂಶ ಪ್ರಕಟವಾಗುತ್ತದೆ.

Join Nadunudi News WhatsApp Group

Join Nadunudi News WhatsApp Group