SSY Close: ಸುಕನ್ಯಾ ಸಮೃದ್ಧಿ ಖಾತೆ ಇದ್ದವರಿಗೆ ಹೊಸ ರೂಲ್ಸ್, ಖಾತೆಯಲ್ಲಿ ಇಷ್ಟು ಹಣ ಇಲ್ಲದಿದ್ದರೆ ಖಾತೆ ಬಂದ್
ಸುಕನ್ಯಾ ಸಮೃದ್ಧಿ ಖಾತೆಯಲ್ಲಿ ಇಷ್ಟು ಹಣ ಇಲ್ಲದಿದ್ದರೆ ಬಂದ್ ಆಗಲಿದೆ ನಿಮ್ಮ ಖಾತೆ
SSY Account Minimum Balance Deadline: ಸದ್ಯ ದೇಶದಲ್ಲಿ ಲಭ್ಯವಿರುವ ವಿವಿಧ ಹೂಡಿಕೆಯ ಯೋಜನೆಗಳಲ್ಲಿ ಕೇಂದ್ರ ಸರ್ಕಾರ ಹೆಣ್ಣುಮಕ್ಕಳಿಗಾಗಿ ಪರಿಚಯಿಸಿರುವ Sukanya Samriddhi ಯೋಜನೆಯು ಬಹಳ ವಿಶೇಷವಾಗಿದೆ. ಈ ಯೋಜನೆಯು ಹೆಣ್ಣುಮಕ್ಕಳ ಉತ್ತಮ ಭವಿಷ್ಯಕ್ಕಾಗಿಯೇ ರೂಪಿಸಲಾಗಿದೆ. ಪೋಷಕರು ತಮ್ಮ ಹೆಣ್ಣು ಮಗಳ ಹೆಸರಿನಲ್ಲಿ ಖಾತೆಯನ್ನು ತೆರೆದು ಹೂಡಿಕೆಯನ್ನು ಆರಂಭಿಸಿದರೆ, ಮಗಳ ಮುಂದಿನ ಭವಿಷ್ಯದ ಬಗ್ಗೆ ಹೆಚ್ಚು ಚಿಂತಿಸಬೇಕಾಗಿರುವುದಿಲ್ಲ.
ಮಗಳ ಮದುವೆ, ವಿದ್ಯಾಭ್ಯಾಸ, ಉದ್ಯೋಗ ಸೇರಿದಂತೆ ಮಗಳಿಗೆ ಸಂಬಂಧಿಸಿದಂತೆ ಹೂಡಿಕೆಯ ಹಣವನ್ನು ಬಳಸಿಕೊಳ್ಳಲು ಸಹಾಯವಾಗುತ್ತದೆ. ಈಗಾಗಲೇ ದೇಶದಲ್ಲಿ ಲಕ್ಷಾಂತರ ಪೋಷಕರು ತಮ್ಮ ಮಗಳ ಹೆಸರಿನಲ್ಲಿ ಹೂಡಿಕೆಯನ್ನು ಆರಿಭಿಸಿದ್ದಾರೆ. ಸದ್ಯ ಕೇಂದ್ರದಿಂದ SSY ಹೂಡಿಕೆದಾರರಿಗೆ ಹೊಸ ನಿಯಮ ಜಾರಿಯಾಗಿದೆ. ಖಾತೆದಾರರು ನಿಗದಿತ ಸಮಯದೊಳಗೆ ಈ ಕೆಲಸಗಳನ್ನು ಮಾಡುವುದು ಅಗತ್ಯವಾಗಿದೆ.
![SSY Account Minimum Balance Deadline](https://nadunudi.in/wp-content/uploads/2024/02/SSY-Account-Minimum-Balance-Deadline.png)
SSY ಖಾತೆ ಹೊಂದಿದವರಿಗೆ ಬಿಗ್ ಅಪ್ಡೇಟ್
ಸದ್ಯ ಕೇಂದ್ರದಿಂದ ಸುಕನ್ಯಾ ಸಮೃದ್ಧಿ ಯೋಜನೆಯ ಹೂಡಿಕೆದಾರರಿಗೆ ಹೊಸ ರೂಲ್ಸ್ ಜಾರಿಯಾಗಿದೆ. Sukanya Samriddhi Yojana (SSY) ಖಾತೆಯನ್ನು ಸಕ್ರಿಯವಾಗಿಡಲು ಕನಿಷ್ಠ ಬ್ಯಾಲೆನ್ಸ್ ಅನ್ನು ನಿರ್ವಹಿಸುವುದು ಕಡ್ಡಾಯವಾಗಿದೆ. ಈ ನಿಟ್ಟಿನಲ್ಲಿ ಹೊಸ ನಿಯಮವೂ ಜಾರಿಗೆ ಬಂದಿದೆ.
ಮಾರ್ಚ್ 31, 2024 ರ ವರೆಗೆ ಈ ಖಾತೆಗಳಲ್ಲಿ ಕನಿಷ್ಠ ಬ್ಯಾಲೆನ್ಸ್ ಅನ್ನು ನಿರ್ವಹಿಸಬೇಕಾಗುತ್ತದೆ. ಖಾತೆದಾರರು ತನ್ನ ಬ್ಯಾಲೆನ್ಸ್ ಅನ್ನು ನಿರ್ವಹಿಸದಿದ್ದರೆ ಅಂತವರ ಖಾತೆಯು ನಿಷ್ಕ್ರಿಯವಾಗಬಹುದು. ನಿಷ್ಕ್ರಿಯ ಖಾತೆಯನ್ನು ಪುನಃ ತೆರೆಯಲು, ಖಾತೆದಾರರು ದಂಡವನ್ನು ಪಾವತಿಸಬೇಕಾಗುತ್ತದೆ. ಇದೀಗ ನಾವು ಸುಕನ್ಯಾ ಸಮೃದ್ಧಿ ಖಾತೆಯಲ್ಲಿ ಇಷ್ಟು ಕನಿಷ್ಠ ಬ್ಯಾಲೆನ್ಸ್ ನಿರ್ವಹಿಸುವುದು ಅಗತ್ಯವಾಗಿದೆ.
![SSY Account Minimum Balance](https://nadunudi.in/wp-content/uploads/2024/02/SSY-Account-Minimum-Balance.png)
SSY ಖಾತೆಯಲ್ಲಿ ಇಷ್ಟು ಹಣ ಇಲ್ಲದಿದ್ದರೆ ನಿಮ್ಮ ಖಾತೆ ನಿಷ್ಕ್ರಿಯ ಗ್ಯಾರಂಟಿ
ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ Minimum Balance 250 ರೂ. ಆಗಿದೆ. ಅಂದರೆ ಖಾತೆಯನ್ನು ಸಕ್ರಿಯವಾಗಿಡಲು ಆರ್ಥಿಕ ವರ್ಷದಲ್ಲಿ 250 ರೂ. ಗಳನ್ನು ಹೂಡಿಕೆ ಮಾಡುವುದು ಅಗತ್ಯ. ನೀವು ಈ ಯೋಜನೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಹೂಡಿಕೆ ಮಾಡದಿದ್ದರೆ ಖಾತೆಯನ್ನು ಬಂದ್ ಮಾಡಲಾಗುತ್ತದೆ. ಖಾತೆಯನ್ನು ಮತ್ತೆ ಸಕ್ರಿಯಗೊಳಿಸಲು ಖಾತೆದಾರನು ವರ್ಷಕ್ಕೆ 50 ರೂಪಾಯಿ ದಂಡವನ್ನು ಪಾವತಿಸಬೇಕಾಗುತ್ತದೆ. ನೀವು ನಿಮ್ಮ SSY ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಅನ್ನು ಮಾರ್ಚ್ 31 ರೊಳಗೆ ಕಾಯ್ದಿರಿಸುವುದು ಅಗತ್ಯ.