Govt Scheme: ಹೆಣ್ಣು ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಹೊಸ ಯೋಜನೆ, 300 ರೂ ಹೂಡಿಕೆ ಮಾಡಿದರೆ ಸಿಗಲಿದೆ 50 ಲಕ್ಷ.
ಈ ಯೋಜನೆ ಮೂಲಕ ನೀವು ಕಡಿಮೆ ಹೂಡಿಕೆಯಲ್ಲಿ ನಿಮ್ಮ ಮಗಳ ಶಿಕ್ಷಣ ಅಥವಾ ಮದುವೆಗಾಗಿ 50 ಲಕ್ಷ ಹಣವನ್ನು ಪಡೆಯಬಹುದು.
SSY Latest Update: ದೇಶದಲ್ಲಿ ಹೆಣ್ಣು ಮಕ್ಕಳ ಸಬಲೀಕರಣ ಉದ್ದೇಶದಿಂದ ಈಗಾಗಲೇ ಹಲವು ಯೋಜನೆಯನ್ನ ಜಾರಿಗೆ ತರಲಾಗಿದೆ. ಹೆಣ್ಣು ಮಕ್ಕಳನ್ನ ಹೊಂದಿರುವ ಪೋಷಕರು ಮಗಳ ಶಿಕ್ಷಣ ಮತ್ತು ವಿದ್ಯಾಭ್ಯಾಸಕ್ಕಾಗಿ ಕಷ್ಟವನ್ನ ಅನುಭವಿಸಬಾರದು ಅನ್ನುವ ಉದ್ದೇಶದಿಂದ ದೇಶದಲ್ಲಿ ಕೇಂದ್ರ ಸರ್ಕಾರ ಈಗಾಗಲೇ ಹಲವು ಯೋಜನೆಯನ್ನ ಜಾರಿಗೆ ತರುವುದರ ಮೂಲಕ ಹೆಣ್ಣು ಮಕ್ಕಳ ಸಬಲೀಕರಣದ ಕೆಲಸವನ್ನ ಮಾಡುತ್ತಿದೆ.
ಅದೇ ರೀತಿಯಲ್ಲಿ ದೇಶದಲ್ಲಿ ಕೇಂದ್ರ ಸರ್ಕಾರ ಕೆಲವು ಹೂಡಿಕೆ ಯೋಜನೆಯನ್ನ ಆರಂಭಿಸಿದ್ದು ಈ ಯೋಜನೆಯ ಅಡಿಯಲ್ಲಿ ಹೆಣ್ಣು ಮಕ್ಕಳ ಪೋಷಕರು ಮಗಳ ಹೆಸರಿನಲ್ಲಿ ಹೂಡಿಕೆ ಮಾಡಿದರೆ ದೊಡ್ಡ ಮೊತ್ತದ ಲಾಭ ಪಡೆದುಕೊಳ್ಳಬಹುದು.
ಸುಕನ್ಯಾ ಸಮೃದ್ಧಿ ಯೋಜನೆ
ದೇಶದ ಲಕ್ಷಾಂತರ ಮಹಿಳೆಯರು ಈಗಾಗಲೇ ಸುಕನ್ಯಾ ಸಮೃದ್ಧಿ ಯೋಜನೆ ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ. ತಮಗೆ ಹೆಣ್ಣು ಮಗು ಜನಸಿದ ತಕ್ಷಣ ಎಸ್ ಎಸ್ ವೈ ಯೋಜನೆಯಲ್ಲಿ ಹೂಡಿಕೆ ಮಾಡಲು ಪ್ರಾರಂಭಿಸುತ್ತಾರೆ. ಮಧ್ಯಮ ವರ್ಗದ ಜನರಿಗೆ ಈ ಯೋಜನೆ ಉತ್ತಮ ಆಯ್ಕೆಯಾಗಿದೆ. ಕೇಂದ್ರ ಸರ್ಕಾರ ದೇಶದ ಮಹಿಳೆಯರ ಆರ್ಥಿಕ ನೆರವಿಗೆ ಹೆಚ್ಚಿನ ಆಧ್ಯತೆಯನ್ನು ನೀಡುತ್ತದೆ. ದೇಶದ ಪ್ರತಿ ಹೆಣ್ಣು ಉತ್ತಮ ಭವಿಷ್ಯವನ್ನು ಕಟ್ಟಿಕೊಳ್ಳಬೇಕು ಎನ್ನುವುದು ಸರ್ಕಾರದ ಗುರಿಯಾಗಿದೆ.
ಹೆಣ್ಣು ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಹೊಸ ಯೋಜನೆ
ಈ ಸುಕನ್ಯಾ ಸಮೃದ್ಧಿ ಯೋಜನೆ (Sukanya Samriddhi Yojana) ಕೇಂದ್ರ ಮೋದಿ ಸರ್ಕಾರವು ಹೆಣ್ಣು ಮಕ್ಕಳ ಶಿಕ್ಷಣ ಹಾಗೂ ಮದುವೆಗೆ ಅನುಕೂಲ ಮಾಡಿಕೊಡುತ್ತದೆ. ಈ ಯೋಜನೆ ಮೂಲಕ ನೀವು ಕಡಿಮೆ ಹೂಡಿಕೆಯಲ್ಲಿ ನಿಮ್ಮ ಮಗಳ ಶಿಕ್ಷಣ ಅಥವಾ ಮದುವೆಗಾಗಿ 50 ಲಕ್ಷ ಹಣವನ್ನು ಪಡೆಯಬಹುದು. ಈ ಯೋಜನೆಯು ಹೆಚ್ಚಿನ ಸುರಕ್ಷತೆಯನ್ನು ಹೊಂದಿದ್ದು ಬಡ ಕುಟುಂಬಗಳಿಗೆ ಇದು ಉತ್ತಮ ಹೂಡಿಕೆಯ ಯೋಜನೆಯಾಗಿದೆ.
ಇನ್ನು ಸುಕನ್ಯಾ ಸಮೃದ್ಧಿ ಯೋಜನೆಗೆ ಸರ್ಕಾರವು 8 ಪ್ರತಿಶತದಷ್ಟು ಬಡ್ಡಿಯನ್ನು ನೀಡಲಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ನಿಮ್ಮ ಮಗುವಿನ ವಯಸ್ಸು 10 ವರ್ಷವಾಗಿರಬೇಕು. 10 ವರ್ಷದ ದಾಟಿದ ಮಗುವಿನ ಹೆಸರಿನಲ್ಲಿ ಈ ಸುಕನ್ಯಾ ಸಮೃದ್ಧಿ ಯೋಜನೆಯ ಖಾತೆ ತೆರೆಯಲು ಸಾಧ್ಯವಾಗುವುದಿಲ್ಲ. ಹೆಣ್ಣು ಮಗು ಜನಸಿದ ತಕ್ಷಣವೇ ನೀವು ಈ ಯೋಜನೆಯ ಖಾತೆಯನ್ನು ತೆರೆಯಬಹದು. ಇನ್ನು ಕೂಡ ಈ ಯೋಜನೆಗೆ ನೀವು ಅರ್ಜಿ ಸಲ್ಲಿಸಿದ್ದಾರೆ ಈ ಕೂಡಲೇ ಯೋಜನೆಗೆ ಅರ್ಜಿ ಸಲ್ಲಿಸುವುದು ಉತ್ತಮ
300 ರೂ ಹೂಡಿಕೆ ಮಾಡಿದರೆ ಸಿಗಲಿದೆ 50 ಲಕ್ಷ
ಮೋದಿ ಸರ್ಕಾರ ತನ್ನ ಮೊದಲ ಅವಧಿಯಲ್ಲಿ ಈ ಯೋಜನೆಯನ್ನು ಪ್ರಾರಂಭಿಸಿದೆ, ಇದರಲ್ಲಿ ಕನಿಷ್ಠ 300 ರೂ.ಗಳಿಂದ ಗರಿಷ್ಠ 1.50 ಲಕ್ಷ ರೂ.ವರೆಗೆ ಹೂಡಿಕೆ ಮಾಡಬಹುದು.
ಮೋದಿ ಸರ್ಕಾರ ನಡೆಸುತ್ತಿರುವ ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ನೀವು ಪ್ರತಿ ನಿತ್ಯ 300 ರೂಪಾಯಿಗಳನ್ನು ಹೂಡಿಕೆ ಮೂಡುವ ಮೂಲಕ ವರ್ಷದಲ್ಲಿ 1,11,370 ರೂ. ಪಾವತಿಸಬೇಕಾಗುತ್ತದೆ. ಮುಕ್ತಾಯದ ಮೇಲೆ 8% ಬಡ್ಡಿಯ ದರದಲ್ಲಿ ಮಗಳ ವಯಸ್ಸು 21 ವರ್ಷವಾದಾಗ, ಮೆಚ್ಯೂರಿಟಿ ಆದ ಮೇಲೆ ಒಟ್ಟು 50 ಲಕ್ಷ ರೂ. ಲಾಭವನ್ನು ಪಡೆಯಬಹುದು.