Stamp Duty Hike: ಹೊಸದಾಗಿ ಆಸ್ತಿ ಖರೀದಿ ಮಾಡುವವರಿಗೆ ಹೊಸ ರೂಲ್ಸ್, ಇಂದಿನಿಂದ ಕಟ್ಟಬೇಕು ಹೆಚ್ಚು ಶುಲ್ಕ

ಹೊಸದಾಗಿ ಆಸ್ತಿ ಖರೀದಿ ಮಾಡುವವರಿಗೆ ಹೊಸ ರೂಲ್ಸ್

Stamp Duty Hike In Karnataka: ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ( Congress Government ) ಅಧಿಕಾರಕ್ಕೆ ಬಂದು ಅನೇಕ ಯೋಜನೆಗಳನ್ನೂ ಜಾರಿಗೆ ತರುದರ ಜೊತೆಗೆ ಹೊಸ ಹೊಸ ನಿಯಮವನ್ನು ಕೂಡ ಜಾರಿಗೆ ತಂದಿದೆ.

ಸದ್ಯ ಕಾಂಗ್ರೆಸ್ ಸರ್ಕಾರ ಉಚಿತ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದಾಗಿ ಬಾರಿ ನಷ್ಟವನ್ನು ಎದುರಿಸುವ ಪರಿಸ್ಥಿತಿ ಬಂದೊದಗಿದೆ. ಹೀಗಾಗಿ ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಇದೀಗ ಸರ್ಕಾರ ರಾಜ್ಯದ ಆರ್ಥಿಕ ಹೊರೆ ಕಡಿಮೆ ಮಾಡುವ ಸಲುವಾಗಿ ಬೆಲೆ ಏರಿಕೆ ಮಾಡಲು ಮುಂದಾಗಿದೆ.

Stamp Duty Hike In Karnataka
Image Credit: Theweek

ಆಸ್ತಿ ನೋಂದಣಿ, ಮುದ್ರಾಂಕ ಶುಲ್ಕ ಹೆಚ್ಚಳಕ್ಕೆ ರಾಜ್ಯಪಾಲರ ಅಂಕಿತ
ರಾಜ್ಯ ಸರ್ಕಾರದಿಂದ ಕರ್ನಾಟಕ ಸ್ಟಾಂಪು (ತಿದ್ದುಪಡಿ) ಅಧಿನಿಯಮಕ್ಕೆ ತಿದ್ದುಪಡಿಯನ್ನು ಕಳೆದ ವಿಧಾನಸಭೆಯ ಅವಧಿಯಲ್ಲಿ ತರಲಾಗಿತ್ತು. ಅದನ್ನು ಉಭಯ ಸದನಗಳನಲ್ಲೂ ಅಂಗೀಕರಿಸಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಇದೀಗ ರಾಜ್ಯಪಾಲರು ಅದಕ್ಕೆ ಅಂಕಿತದ ಮುದ್ರೆ ಒತ್ತಿದ್ದಾರೆ. ಹೀಗಾಗಿ ರಾಜ್ಯಪತ್ರದಲ್ಲಿ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಮೂಲಕ ರಾಜ್ಯದ ಜನತೆಗೆ ಸ್ಟಾಂಪ್ ಡ್ಯೂಟಿ ಹೆಚ್ಚಳ ( Stamp Duty Hike ) ಮಾಡಿ ಸರ್ಕಾರ ಶಾಕ್ ನೀಡಿದೆ.

ಯಾವುದಕ್ಕೆ ಎಷ್ಟು ಶುಲ್ಕ ವಿಧಿಸಲಾಗುತ್ತದೆ…?
*ರಾಜ್ಯಪತ್ರದಲ್ಲಿ ಪ್ರಕಟಿತ ತಿದ್ದುಪಡಿ ದರದ ಪ್ರಕಾರ, ದತ್ತು ಪತ್ರಗಳ ಮೇಲಿನ ಮುದ್ರಾಂಕ ಶುಲ್ಕ 500 ರಿಂದ 1,000 ರೂಪಾಯಿಗೆ ಏರಿಕೆಯಾಗಿದೆ.

*ಸದ್ಯ 20 ರೂಪಾಯಿಗಳ ಮುದ್ರಾಂಕ ಶುಲ್ಕವನ್ನು ಹೊಂದಿರುವ ಅಫಿಡವಿಟ್​​ಗಳಿಗೆ ಮುಂದೆ 100 ರೂಪಾಯಿ ಮುದ್ರಾಂಕ ಶುಲ್ಕ ವಿಧಿಸಲಾಗುತ್ತದೆ.

Join Nadunudi News WhatsApp Group

Stamp Duty Hike
Image Credit: The Economic Times

*ಪವರ್ ಆಫ್ ಅಟಾರ್ನಿ ಮೇಲಿನ ಮುದ್ರಾಂಕ ಶುಲ್ಕವನ್ನು 100 ರೂ. ನಿಂದ 500 ರೂಪಾಯಿಗೆ ಹೆಚ್ಚಿಸಲಾಗಿದೆ. ೫ಮಕಿಂತ ಹೆಚ್ಚು ಹಾಗೂ 10 ಕ್ಕಿಂತ ಕಡಿಮೆ ವ್ಯಕ್ತಿಗಳು ಜಂಟಿಯಾಗಿ ಪವರ್ ಆಫ್ ಅಟಾರ್ನಿ ನೀಡುವುದಾದರೆ ಅದರ ಮೇಲಿನ ಮುದ್ರಾಂಕ ಶುಲ್ಕ 200 ರೂ. ನಿಂದ 1000 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.

*ನಗರ ಪ್ರದೇಶಗಳಲ್ಲಿರುವ ಆಸ್ತಿ ವಿಭಜನಾ ಪತ್ರಗಳಿಗೆ ಮುದ್ರಾಂಕ ಶುಲ್ಕವನ್ನು ಪ್ರತಿ ಷೇರಿಗೆ 1000 ರೂ. ನಿಂದ 5000 ರೂಪಾಯಿಗೆ ಹೆಚ್ಚಿಸಲಾಗಿದೆ. ನಗರ ಮಿತಿಯಿಂದ ಹೊರಗಿರುವ ಆಸ್ತಿಗಳಿಗೆ 500 ರೂ. ಬದಲಾಗಿ ಪ್ರತಿ ಷೇರಿಗೆ 3000 ರೂ. ಮಾಡಲಾಗಿದೆ. ಕೃಷಿ ಆಸ್ತಿಗಳನ್ನು ವಿಭಜಿಸಲು ಪ್ರತಿ ಷೇರಿಗೆ 250 ರೂ. ಬದಲಾಗಿ 1000 ರೂಪಾಯಿವರೆಗೆ ಹೆಚ್ಚಿಸಲಾಗಿದೆ.

*ವಿಚ್ಛೇದನ ಪತ್ರಗಳ ಮೇಲಿನ ಸ್ಟ್ಯಾಂಪ್ ಡ್ಯೂಟಿ ಕೂಡ 100 ರಿಂದ 500 ರೂಪಾಯಿ ಹೆಚ್ಚಾಗಲಿದೆ. ಪ್ರಮಾಣೀಕೃತ ಪ್ರತಿಗಳಿಗೆ ಸ್ಟ್ಯಾಂಪ್ ಸುಂಕವನ್ನು 5 ರಿಂದ 20 ಕ್ಕೆ ಏರಿಕೆ ಮಾಡಲಾಗಿದೆ. ಇದಲ್ಲದೆ ಟ್ರಸ್ಟ್‌ ಗಳನ್ನು ನೋಂದಾಯಿಸುವುದು ಸಹ ದುಬಾರಿಯಾಗಲಿದೆ. ಕಂಪನಿಗಳ ವಿಲೀನ ಹಾಗೂ ಮತ್ತಿತರ ಪ್ರಕ್ರಿಯೆಗಳ ಶುಲ್ಕದಲ್ಲೂ ಸಹ ಹೆಚ್ಚಳವಾಗಲಿದೆ.

Join Nadunudi News WhatsApp Group