Government Employees: ಹಲವು ಗ್ಯಾರೆಂಟಿ ಬೆನ್ನಲ್ಲೇ ರಾಜ್ಯ ಸರ್ಕಾರೀ ನೌಕರರಿಗೆ ಬಂಪರ್ ಗುಡ್ ನ್ಯೂಸ್, ಸರ್ಕಾರದ ಇನ್ನೊಂದು ಘೋಷಣೆ.

ಇದೀಗ ರಾಜ್ಯ ಸರ್ಕಾರದ 7 ನೇ ವೇತನ ಆಯೋಗದ ಕುರಿತು ಮಾಹಿತಿ ಲಭಿಸಿದೆ.

State Government Employees: ರಾಜ್ಯ ಸರ್ಕಾರ (State Government) ದಿನದಿನದ ದಿನಕ್ಕೆ ಹೊಸ ನಿಯಮಗಳನ್ನ ಜಾರಿಗೆ ತರುತ್ತಿದೆ. ಕರ್ನಾಟಕದಲ್ಲಿ ಹೊಸದಾಗಿ ಅಧಿಕಾರವನ್ನ ಸ್ವೀಕಾರ ಮಾಡಿರುವ ಕಾಂಗ್ರೆಸ್ ಸರ್ಕಾರ ಕರ್ನಾಟಕದ ಜನತೆಗೆ ಸಾಲು ಸಾಲು ಸಿಹಿ ಸುದ್ದಿಯನ್ನ ನೀಡುತ್ತಿದೆ.

ಚುನಾವಣೆಯ ಸಮಯದಲ್ಲಿ ಭರವಸೆ ನೀಡಿದ್ದ 5 ಯೋಜನೆಗಳಲ್ಲಿ 4 ಯೋಜನೆಗಳನ್ನು ಈಗಾಗಲೇ ಜಾರಿಗೆ ತಂದಿದೆ. ಇತ್ತೀಚಿಗೆ ಸರ್ಕಾರೀ ನೌಕರರ ವೇತನದ ವಿಷಯವಾಗಿ ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ. ಸರ್ಕಾರಿ ನೌಕರರ ವೇತನ ಹೆಚ್ಚಳದ ಕುರಿತಾದ ಸುದ್ದಿಗಳು ದಿನೇ ದಿನೇ ಹೆಚ್ಚುತ್ತಲೇ ಇದೆ. ಇದೀಗ ರಾಜ್ಯ ಸರ್ಕಾರದ 7 ನೇ ವೇತನ ಆಯೋಗದ ಕುರಿತು ಮಾಹಿತಿ ಲಭಿಸಿದೆ.

Good News for State Government Employees
Image Credit: Livemint

ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಗುಡ್ ನ್ಯೂಸ್
ಶನಿವಾರ ಚಿತ್ರದುರ್ಗದ ಹೊಸದುರ್ಗದಲ್ಲಿ ನೆಡೆದ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ. ಎಸ್ ಷಡಕ್ಷರಿ 7 ನೇ ವೇತನ ಆಯೋಗದ ಕುರಿತು ಮಾಹಿತಿ ನೀಡಿದ್ದಾರೆ. State Government Employees 7 ನೇ ವೇತನದ ಶಿಫಾರಸ್ಸಿನಂತೆ ಶೇಕಡಾ 38 ರಿಂದ 40 ರಷ್ಟು ವೇತನ ಹೆಚ್ಚಾಗುವ ವಿಶ್ವಾಸವಿದೆ ಎಂಬುದಾಗಿ ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದಾರೆ.

ರಾಜ್ಯ ಸರಕಾರ ರಚಿಸಿರುವಂತ 7 ನೇ ವೇತನ ಆಯೋಗದ ಸಮಿತಿಯು ನವೆಂಬರ್ ಅಂತ್ಯದ ವೇಳೆಗೆ ವೇತನ ಹೆಚ್ಚಳಕ್ಕೆ ಪೂರಕವಾಗಿರುವ ವರದಿಯನ್ನು ಸಲ್ಲಿಸಿದೆ ಎಂದರು. 7 ನೇ ವೇತನದ ಆಯೋಗದ ಸಮಿತಿಯನ್ನು ಶುಕ್ರವಾರ ಭೇಟಿ ಮಾಡಿ ಶೇಕಡಾ 38 ರಿಂದ 40 ರಷ್ಟು ವೇತನ ಹೆಚ್ಚಳಕ್ಕೆ ಮನವಿ ಮಾಡಲಾಗಿದೆ.

Good News for State Government Employees
Image Credit: Timesofindia

ಏಪ್ರಿಲ್ 1 ರಂದು ನೆಡೆಸಿದ ಮುಷ್ಕರದ ಫಲವಾಗಿ ಮಧ್ಯಂತರ ಪರಿಹಾರ ಸಿಕ್ಕಿದೆ ಎಂದು ತಿಳಿಸಿದ್ದಾರೆ. 7 ವೇತನ ಆಯೋಗದ ಜಾರಿ ಹಾಗೂ OPS ಮರು ಜಾರಿ ನಮ್ಮ ಪ್ರಮುಖ ಬೇಡಿಕೆಗಳಾಗಿದೆ. ರಾಜ್ಯ ಸರ್ಕಾರಿ ನೌಕರರ ಕುಟುಂಬಕ್ಕೆ ಆಸ್ಪತ್ರೆಯಲ್ಲಿ ಕ್ಯಾಶ್ ಲೆಸ್ ಚಿಕಿತ್ಸೆ ಸಿಗುವ ಯೋಜನೆ ಈ ತಿಂಗಳ ಅಂತ್ಯದೊಳಗೆ ಜಾರಿಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

Join Nadunudi News WhatsApp Group

Join Nadunudi News WhatsApp Group