Student Food: 1 ರಿಂದ 10 ನೇ ತರಗತಿ ಮಕ್ಕಳಿಗೆ ಬಂಪರ್ ಗುಡ್ ನ್ಯೂಸ್, ಊಟದ ನಿಯಮದಲ್ಲಿ ದೊಡ್ಡ ಬದಲಾವಣೆ.

ಇದೀಗ ಸರ್ಕಾರ 1 ರಿಂದ 10 ನೇ ತರಗತಿಯ ಮಕ್ಕಳಿಗೆ ವಿಶೇಷ ಸೌಲಭ್ಯ ನೀಡುವುದಾಗಿ ಘೋಷಣೆ ಹೊರಡಿಸಿದೆ.

Student Food New Facility: ಪ್ರಸ್ತುತ 2023 -24 ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಗೊಂಡಿದ್ದು, ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿ ಆರಂಭಗೊಂಡಿದೆ. ಈ ವರ್ಷದ ಶಿಕ್ಷಣ ನೀತಿಯಲ್ಲಿ ಸಾಕಷ್ಟು ಬದಲಾವಣೆಗಳು ಆಗಿವೆ. ರಾಜ್ಯದ ಶಾಲಾ ಮಕ್ಕಳಿಗೆ ಶಿಕ್ಷಣ ಇಲಾಖೆ ಹೊಸ ಹೊಸ ನಿಯಮಗಳ ಜೊತೆಗೆ ವಿವಿಧ ಸೌಲಭ್ಯಗಳನ್ನು ನೀಡಲು ಮುಂದಾಗಿದೆ.

ಇನ್ನು 2023 -24 ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿದ್ದು ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಈ ಮಾರ್ಗ ಸೂಚಿಯಲ್ಲಿ ಏನಿದೆ ಎನ್ನುವ ಬಗ್ಗೆ ಮಾಹಿತಿ ತಿಳಿಯೋಣ.

Student Food New Facility
Image Credit: Newindianexpress

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್
ಸರ್ಕಾರೀ ಶಾಲಾ ಮಕ್ಕಳಿಗೆ ಸರ್ಕಾರ ವಿವಿಧ ಸೌಲಭ್ಯವನ್ನು ನೀಡುತ್ತಿದೆ. ಈಗಾಗಲೇ ಮಕ್ಕಳಿಗೆ ಶಾಲೆಗಳಲ್ಲಿ ಮದ್ಯಾಹ್ನದ ಬಿಸಿ ಊಟ ಮಾಡಿಕೊಡಲಾಗಿತ್ತು. ಇದೀಗ ಈ ಸೌಲಭ್ಯವನ್ನು ಸರ್ಕಾರ ಮತ್ತಷ್ಟು ವಿಸ್ತರಿಸಿದೆ. ಶಾಲೆ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಜೊತೆಗೆ ಕಡ್ಡಾಯವಾಗಿ ಈ ಆಹಾರ ಪದಾರ್ಥ ನೀಡುವಂತೆ ಎಲ್ಲ ಸರ್ಕಾರೀ ಮತ್ತು ಅನುದಾನಿತ ಶಾಲಾ ಆಡಳಿತ ಮಂಡಳಿಗಳಿಗೆ ಸರ್ಕಾರ ಸೂಚನೆ ನೀಡಿದೆ. ಈ ಮೂಲಕ ರಾಜ್ಯ ಸರ್ಕಾರ ಶಾಲಾ ಮಕ್ಕಳ ಊಟದ ನಿಯಮದಲ್ಲಿ ಮಹತ್ವದ ಬದಲಾವಣೆಯನ್ನು ಜಾರಿಗೊಳಿಸಿದೆ.

1 ರಿಂದ 10 ನೇ ತರಗತಿ ಮಕ್ಕಳಿಗೆ ಬಂಪರ್ ಗುಡ್ ನ್ಯೂಸ್
ಇದೀಗ 2023 -14 ನೇ ಸಾಲಿನ ಶಾಲಾ ಮಕ್ಕಳಲ್ಲಿರುವ ಅಪೌಷ್ಟಿಕತೆಯನ್ನು ನಿವಾರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮಕ್ಕಳ ಅಪೌಷ್ಟಿಕತೆ ನಿವಾರಣೆಗಾಗಿ ಸರ್ಕಾರ ಮದ್ಯಾಹ್ನದ ಬಿಸಿಯೂಟದ ಜೊತೆಗೆ ಪೌಷ್ಟಿಕ ಆಹಾರವನ್ನು ನೀಡಲು ಮುಂದಾಗಿದೆ. ಇನ್ನು 1 ರಿಂದ 10 ನೇ ತರಗತಿಯ ಮಕ್ಕಳಿಗೆ ವಿಶೇಷ ಸೌಲಭ್ಯ ನೀಡುವುದಾಗಿ ಘೋಷಣೆ ಹೊರಡಿಸಿದೆ.

Student Food New Facility
Image Credit: Other Source

ಇನ್ನುಮುಂದೆ ಬಿಸಿಯೂಟದ ಜೊತೆಗೆ ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ವಿತರಣೆ
ಎಲ್ಲಾ ಸರಕಾರಿ ಹಾಗೂ ಸರ್ಕಾರೀ ಅನುದಾನಿತ ಶಾಲೆಗಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ, ಚಿಕ್ಕಿ, ಬಾಳೆಹಣ್ಣನ್ನು ನೀಡಬೇಕು ಎಂದು ಸರ್ಕಾರ ಘೋಷಿಸಿದೆ. ಸರ್ಕಾರೀ ಹಾಗು ಅನುದಾನಿತ ಶಾಲಾ ಮಕ್ಕಳಿಗೆ ಪೌಷ್ಟಿಕತೆ ಹೆಚ್ಚಿಸುವ ನಿಟ್ಟಿನಲ್ಲಿ ಪೌಷ್ಟಿಕ ಆಹಾರ ನೀಡಲಾಗುತ್ತಿದೆ. ಮಧ್ಯಾಹ್ನದ ಬಿಸಿಯೂಟ ಯೋಜನೆಯ ಅಡಿಯಲ್ಲಿ ಮೊಟ್ಟೆ ನೀಡಲಾಗುತ್ತದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ಅಥವಾ ಚಿಕ್ಕಿಯನ್ನು ವಿತರಿಸಲಾಗುತ್ತದೆ.

Join Nadunudi News WhatsApp Group

Join Nadunudi News WhatsApp Group