Scholarship Update: ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ, ವಿದ್ಯಾರ್ಥಿ ವೇತನ ಪಾವತಿಗೆ ಏಕಶಿಷ್ಯ ವೇತನ ನಿರ್ವಹಣೆಗೆ ಸರ್ಕಾರದ ಆದೇಶ.
ವಿದ್ಯಾರ್ಥಿಗಳ ಖಾತೆಗೆ ವಿದ್ಯಾರ್ಥಿ ವೇತನ ಪಾವತಿ ಆಗುವ ಬಗ್ಗೆ ಸರ್ಕಾರದ ಮಹತ್ವ ನಿರ್ಧಾರ.
Student Scholarship Latest Update: ಇಂದಿನ ಕಾಲದಲ್ಲಿ ಶಿಕ್ಷಣ ಎಷ್ಟು ಮುಖ್ಯ ಎನ್ನುವುದು ಎಲ್ಲರಿಗು ತಿಳಿದೇ ಇದೆ. ಹೀಗಾಗಿ ಪೋಷಕರು ತಮ್ಮ ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸವನ್ನು ನೀಡಲು ಮುಂದಾಗುತ್ತಾರೆ. ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಆರ್ಥಿಕ ಕೊರತೆ ಇದ್ದರು ಕೂಡ ಮಕ್ಕಾಲಿಗೆ ಶಿಕ್ಷಣ ಕೊಡಿಸುವ ಆಸೆಯನ್ನು ಹೊಂದಿರುತ್ತಾರೆ.
ವಿದ್ಯಾವಂತ ಮಕ್ಕಳು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಳ್ಳುವ ಶಕ್ತಿಯನ್ನು ಹೊಂದುತ್ತಾರೆ. ಇನ್ನು ದೇಶದಲ್ಲಿ ಬಡತನ ಇಂದಿಗೂ ಕಡಿಮೆ ಆಗಿಲ್ಲ. ಬಡತನದ ಕಾರಣ ಸಾಕಷ್ಟು ಮಕ್ಕಳು ಉತ್ತಮ ವಿದ್ಯಾಭ್ಯಾಸವನ್ನು ಪಡೆಯಲು ಆಗುತ್ತಿಲ್ಲ. ಸದ್ಯ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಹೊಸ ಹೊಸ ನಿರ್ಧಾರವನ್ನು ಕೈಗೊಳ್ಳುತ್ತಿದೆ.
ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ವಿದ್ಯಾರ್ಥಿ ವೇತನ ನೀಡುತ್ತಿರುವ ಸರ್ಕಾರ
ಬಡ ಮತ್ತು ಹಿಂದುಳಿದ ವರ್ಗದ ಮಕ್ಕಳಿಗೆ ಶಿಕ್ಷಣ ನೀಡುವುದು ಬಹಳ ಕಷ್ಟವಾಗುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ವಿದ್ಯಾಭ್ಯಾಸವನ್ನು ಉತ್ತೇಜಿಸುವ ಕಾರಣ ಶಾಲಾ ಕಾಲೇಜುಗಳಿಗೆ ಹೆಚ್ಚಿನ ಸೌಲಭ್ಯವನ್ನು ಒದಗಿಸುತ್ತಿದೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯವನ್ನು ಒದಗಿಸುವುದರ ಜೊತೆಗೆ ವಿದ್ಯಾರ್ಥಿಗಳ ವಿದ್ಯಾಭಾಸಕ್ಕೆ ಸಹಾಯವಾಗಲು ವಿವಿಧ ರೀತಿಯ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.
ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
ದೇಶದಲ್ಲಿ ಸರ್ಕಾರ ನೀಡುತ್ತಿರುವ ವಿದ್ಯಾರ್ಥಿ ವೇತನದ ಮೂಲಕವೇ ತಮ್ಮ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿಕೊಂಡಿರುವ ಸಾಕಷ್ಟು ವಿದ್ಯಾರ್ಥಿಗಳಿದ್ದಾರೆ. ಇದೀಗ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಸದ್ಯ 2023 -24 ಸಾಲಿನ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯರ್ಥಿಗಳಿಗೆ ಹೊಸ ರೀತಿಯ ವಿದ್ಯಾರ್ಥಿ ವೇತನ ಸೌಲಭ್ಯ ನೀಡಲು ಸರ್ಕಾರ ಮುಂದಾಗಿದೆ. ವಿದ್ಯಾರ್ಥಿಗಳ ಖಾತೆಗೆ ವಿದ್ಯಾರ್ಥಿ ವೇತನ ಪಾವತಿ ಆಗುವ ಬಗ್ಗೆ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ವಿದ್ಯಾರ್ಥಿ ವೇತನ ಪಾವತಿಗೆ ಏಕಶಿಷ್ಯ ವೇತನ ನಿರ್ವಹಣೆ
ಸದ್ಯ ಎಲ್ಲ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಒಂದೇ ಕಡೆ ಬಿಡುಗಡೆಗೆ ಸರ್ಕಾರ ಕ್ರಮ ಕೈಗೊಂಡಿದೆ. ರಾಜ್ಯ ಬಜೆಟ್ ನಲ್ಲಿ ಘೋಷಿಸಿದಂತೆ ಉನ್ನತ ಶಿಕ್ಷಣ ಇಲಾಖೆಯ ವಿದ್ಯಾರ್ಥಿಗಳಿಗೆ ನೀಡುವ ಎಲ್ಲಾ ರೀತಿಯ ಶಿಷ್ಯವೇತನ ಕಾರ್ಯಕ್ರಮವನ್ನು ಒಗ್ಗೂಡಿಸಿ ಏಕ ಶಿಷ್ಯವೇತನ ಕಾರ್ಯಕ್ರಮದಡಿ ನಿರ್ವಹಣೆ ಮಾಡಲು ರಾಜ್ಯ ಸರ್ಕಾರ ಆದೇಶಿಸಿದೆ.
2023 -24 ಸಾಲಿನಿಂದ ಉನ್ನತ ಶಿಕ್ಷಣ ಇಲಾಖೆಯ ಬರುವ ದಿನ ಇಲಾಖೆಗಳು ಮತ್ತು ಸಾರ್ವಜನಿಕ ವಿಶ್ವವಿದ್ಯಾಲಯಗಳು, ಸರ್ಕಾರದ ಅನುದಾನಿತ , ಅರೆ ಸರ್ಕಾರೀ, ಸ್ವಂತ ನಿಧಿ, ದತ್ತಿ ನಿಧಿ, SCP , TSP OBC , ಅಲ್ಪಸಂಖ್ಯಾತ ಅನುದಾನದಿಂದ ಒದಗಿಸಲಾದ ಎಲ್ಲ ರೀತಿಯ ವಿದ್ಯಾರ್ಥಿ ವೇತನ ಸಹಾಯಧನ, ನಗದು ಪುರಸ್ಕಾರವನ್ನು ಇ – ಆಡಳಿತ ಇಲಾಖೆ ಅಭಿವೃದ್ಧಿಪಡಿಸಿರುವ ಸ್ಟೇಟಸ್ ಸ್ಕೊಲರ್ ಶಿಪ್ ಪೋರ್ಟಲ್ ಮೂಲಕ ನೇರವಾಗಿ ವಿದ್ಯಾರ್ಥಿಗಳ ಖಾತೆಗೆ ಪಾವತಿಸುವಂತೆ ಆದೇಶ ನೀಡಲಾಗಿದೆ.