Sub-Registrar: ಆಸ್ತಿ ನೋಂದಣಿ ನಿಯಮದಲ್ಲಿ ಇನ್ನೊಂದು ಬದಲಾವಣೆ, ರಾಜ್ಯ ಸರ್ಕಾರದ ಮಹತ್ವದ ಘೋಷಣೆ.

ಆಸ್ತಿ ಖರೀದಿ ಮತ್ತು ಮಾರಾಟ ಮಾಡುವವರಿಗೆ ಹೊಸ ನಿಯಮ.

Sub-Registrar Office Timing Extend: ಸದ್ಯ ರಾಜ್ಯದಲ್ಲಿ ಸಾಕಷ್ಟು ಹೊಸ ಹೊಸ ನಿಯಮಗಳು ಜಾರಿಯಾಗಿವೆ. ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಸ್ಥಿರಾಸ್ತಿ ನೋಂದಣಿಗಳ ಮಾರ್ಗಸೂಚಿ ದರವನ್ನು ಪರಿಷ್ಕರಿಸುವ ಬಗ್ಗೆ ಮಾಹಿತಿ ನೀಡಿದೆ. ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಶೇ. 30 ರಷ್ಟು ಹೆಚ್ಚಿಸುವ ಬಗ್ಗೆ ಸರ್ಕಾರ ನಿರ್ಧರಿಸಿದೆ.

ಈ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ ಮಾಹಿತಿ ನೀಡಿದೆ. ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಏರಿಕೆಯಾದರೆ ಆಸ್ತಿ ನೋಂದಣಿ ಜನರಿಗೆ ದುಬಾರಿಯಾಗಲಿದೆ. ಈ ಬಗ್ಗೆ ಚಿಂತಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಮಹತ್ವದ ಮಾಹಿತಿಯನ್ನು ನೀಡಿದೆ.

sub registrar office timing changes
Image Credit: abplive

ಸ್ಥಿರಾಸ್ತಿಗಳ ಮಾರ್ಗಸೂಚಿ ದರ ದಿಡೀರ್ ಏರಿಕೆ
ರಾಜ್ಯ ಸರ್ಕಾರ ಈಗಾಗಲೇ ಆಸ್ತಿ ಖರೀದಿಯ ನಿಯಮವನ್ನು ಜಾರಿಗೊಳಿಸಿದೆ. ಇದೀಗ ಮತ್ತೆ ಆಸ್ತಿ ಖರೀದಿಯ ನಿಯಮದಲ್ಲಿ ಮಹತ್ವದ ಬದಲಾವಣೆ ತರಲಾಗಿದೆ. ರಾಜ್ಯದಲ್ಲಿ ಮುದ್ರಾಣಾಂಕ ಶುಲ್ಕ ಜಾಸ್ತಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಈ ನಿಟ್ಟಿನಲ್ಲಿ ಆಸ್ತಿ ಖರೀದಿ ವೆಚ್ಚವನ್ನು ಇನ್ನಷ್ಟು ಹೆಚ್ಚಿಸಲಿದೆ.

October ನಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಏರಿಕೆ
ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಅಕ್ಟೊಬರ್ ನಲ್ಲಿ ಏರಿಕೆಯಾಗಲಿದೆ. ಮುದ್ರಾಣಾಂಕ ಶುಲ್ಕದ ಹೆಚ್ಚಳವು ಜನಸಾಮಾನ್ಯರ ಆರ್ಥಿಕ ಹೊರೆಯನ್ನು ಇನ್ನಷ್ಟು ಹೆಚ್ಚಿಸುತ್ತಿದೆ. ಈ ವರ್ಷಾಂತ್ಯದಲ್ಲಿ ಆಸ್ತಿ ಖರೀದಿಯ ಬೆಲೆ ಶೇ. 30 ರಿಂದ 40 ರಷ್ಟು ಹೆಚ್ಚಳ ಆಗುವ ಸಾಧ್ಯತೆ ಇದೆ.

ಭೂಮಿ, ನಿವೇಶನ, ಕಟ್ಟಡ ಸೇರಿದಂತೆ ಸ್ಥಿರಾಸ್ತಿಗಳ ದರ ಪರಿಷ್ಕರಣೆಯ ಬಗ್ಗೆ ಸರ್ಕಾರ ನಿರ್ಧರಿಸಿದೆ. ಸದ್ಯ ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಏರಿಕೆ ಮಾಡಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ.

Join Nadunudi News WhatsApp Group

karnataka sub registrar office timing changes
Image Credit: dtnext

ಸಬ್ ರಿಜಿಸ್ಟ್ರಾರ್ ಕಚೇರಿ ಅವಧಿ ವಿಸ್ತರಣೆ
ಇನ್ನು 2023 -24 ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರಾಜಿಸೂಚಿ ದರ ಪರಿಷ್ಕರಣೆ ಮಾಡಲಾಗುತ್ತಿದೆ. ಈ ಕಾರಣಕ್ಕೆ ನೋಂದಣಿ ಮಾಡಿಸುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗಲಿದೆ. ಈ ನಿಟ್ಟಿನಲ್ಲಿ Septembar 30 ರವರೆಗೆ ರಾಜ್ಯದ ಎಲ್ಲ ಸಬ್ ರಿಜಿಸ್ಟ್ರಾರ್ ಕಚೇರಿ ಅವಧಿಯನ್ನು ವಿಸ್ತಿರುಸುವ ಬಗ್ಗೆ ಸರ್ಕಾರ ನಿರ್ಧರಿಸಿದೆ. Sub-Registrar ಕಚೇರಿ ಅವಧಿಯನ್ನು ಬೆಳಿಗ್ಗೆ 8 ರಿಂದ ರಾತ್ರಿ 8 ರವೆಗೆ ವಿಸ್ತರಣೆ ಮಾಡಿದೆ. ಇಂದಿನಿಂದ ರಾಜ್ಯ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ Septembar 30 ರವರೆಗೆ 12 ಗಂಟೆಗಳ ಕಾಲ ಸೇವೆ ಲಭ್ಯವಾಗಲಿದೆ.

Join Nadunudi News WhatsApp Group