Subsidy Scheme: ಗೃಹ ಲಕ್ಷ್ಮಿ ಹಣದ ಜೊತೆಗೆ ಸಿಗಲಿದೆ 3 ಲಕ್ಷ ರೂ, ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್

ಇಂತಹ ಮಹಿಳೆಯರಿಗೆ ಸಿಗಲಿದೆ 3 ಲಕ್ಷ ಸಹಾಯಧನ

Subsidy Scheme For Gender Minorities: ಪ್ರಸ್ತುತ ರಾಜ್ಯದಲ್ಲಿ ಮಹಿಳೆಯರು ಕಾಂಗ್ರೆಸ್ ಸರ್ಕಾರದ ಉಚಿತ ಯೋಜನೆಗಳ ಲಾಭವನ್ನು ಪಡೆಯುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಪರಿಚಯಿಸಿರುವ ಐದು ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಮಹಿಳೆಯರು ಹೆಚ್ಚಿನ ಯೋಜನೆಗಳ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಅದ್ರಲ್ಲೂ ಶಕ್ತಿ ಯೋಜನೆ ಮತ್ತು ಗೃಹ ಲಕ್ಷ್ಮಿ ಯೋಜನೆಯು ವಿಶೇಷವಾಗಿ ಮಹಿಳೆಯರಿಗಾಗಿಯೇ ಜಾರಿಗೊಳಿಸಲಾಗಿದೆ.

ರಾಜ್ಯದ ಅರ್ಹ ಮಹಿಳೆಯರು ಈ ಎರಡು ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ. ಸದ್ಯ ರಾಜ್ಯ ಸರ್ಕಾರ ಈ ಎರಡು ಯೋಜನೆಗಳ ಲಾಭವನ್ನು ಮಹಿಳೆಯರಿಗೆ ನೀಡುತ್ತಿರುವ ಬೆನ್ನಲ್ಲೇ ಇದೀಗ ಮತ್ತೊಂದು ಹೊಸ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದೆ. ಹೌದು, ಇಂತಹ ಮಹಿಳೆಯರಿಗೆ ರಾಜ್ಯ ಸರ್ಕಾರ ಸಹಾಯಧನವನ್ನು ನೀಡಲು ಮುಂದಾಗಿದೆ. ಯೋಜನೆಯ ಬಗ್ಗೆ ಸಂಪೂರ್ಣ ಮಹಿತಿ ಇಲ್ಲಿದೆ ನೋಡಿ.

Subsidy Scheme For Gender Minorities
Image Credit: Prajavani

ಲಿಂಗತ್ವ ಅಲ್ಪಸಂಖ್ಯಾತರಿಗೆ ಸಿಹಿ ಸುದ್ದಿ
ರಾಜ್ಯ ಸರ್ಕಾರವು ಲಿಂಗತ್ವ ಅಲ್ಪಸಂಖ್ಯಾತರಿಗೆ ಸಿಹಿ ಸುದ್ದಿ ನೀಡಿದೆ. ಶಕ್ತಿ, ಗೃಹ ಲಕ್ಷ್ಮಿ ಯೋಜನೆಯೊಂದಿಗೆ ಪುನರ್ವಸತಿ ಯೋಜನೆಯಡಿ ಆದಾಯ ಉತ್ಪಾದನಾ ಚಟುವಟಿಕೆಗಳನ್ನು ಕೈಗೊಳ್ಳಲು 3 ಲಕ್ಷ ರೂ. ಸಹಾಯಧನ ನೀಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಈ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿ, ಗ್ಯಾರಂಟಿ ಯೋಜನೆಯಡಿ ಅಲ್ಪಸಂಖ್ಯಾತರಿಗೆ ಸರ್ಕಾರಿ ಸಾರಿಗೆ ಬಸ್‌ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಗೃಹ ಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಲಿಂಗ ಅಲ್ಪಸಂಖ್ಯಾತರಿಗೆ ನೀಡಲಾಗುತ್ತಿದೆ

ಇಂತಹ ಮಹಿಳೆಯರಿಗೆ ಸಿಗಲಿದೆ 3 ಲಕ್ಷ ಸಹಾಯಧನ
ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಆದಾಯ ಉತ್ಪಾದನಾ ಚಟುವಟಿಕೆಗಳನ್ನು ಕೈಗೊಳ್ಳಲು 3 ಲಕ್ಷ ರೂ. ಸಹಾಯಧನ ನೀಡಲಾಗುತ್ತಿದೆ ಎಂದರು. ನ್ಯಾಷನಲ್ ಪೋರ್ಟಲ್ ಫಾರ್ ಟ್ರಾನ್ಸ್ ಟೆಂಡರ್ ಸರ್ಟಿಫಿಕೇಟ್ ವತಿಯಿಂದ ಗುರುತಿನ ಚೀಟಿ ಮತ್ತು ಪ್ರಮಾಣ ಪಾತ್ರ ಹೊಂದಿದ ಲಿಂಗತ್ವ ಅಲ್ಪಸಂಖ್ಯಾತರು ಮಾಸಿಕ 2000 ರೂ. ಮತ್ತು ಯೋಜನೆಯಡಿ ಮಾಸಿಕ 1200 ಪಿಂಚಣಿ ನೀಡಲಾಗುತ್ತಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.

Congress Govt New Scheme
Image Credit: Aninews

Join Nadunudi News WhatsApp Group

Join Nadunudi News WhatsApp Group