Sukanya Samriddhi: ಮಾರ್ಚ್ 31 ರೊಳಗೆ ಈ ಕೆಲಸ ಮಾಡದಿದ್ದರೆ ಬಂದ್ ಆಗಲಿದೆ ನಿಮ್ಮ SSY ಖಾತೆ, ಕೇಂದ್ರದ ಆದೇಶ

ಮಾರ್ಚ್ 31 ರೊಳಗೆ ಈ ಕೆಲಸ ಮಾಡದಿದ್ದರೆ ಬಂದ್ ಆಗಲಿದೆ ನಿಮ್ಮ SSY ಖಾತೆ.

Sukanya Samriddhi Minimum Balance: ದೇಶದಲ್ಲಿ ಹೆಣ್ಣು ಮಕ್ಕಳಿಗಾಗಿ ಕೇಂದ್ರ ಸರ್ಕಾರ ವಿಶೇಷವಾಗಿ Sukanya Samriddhi ಯೋಜನೆಯನ್ನು ಪರಿಚಯಿಸಿದೆ. ಈ ಯೋಜನೆಯಡಿ ಈಗಾಗಲೇ ಸಾಕಷ್ಟು ಪೋಷಕರು ತಮ್ಮ ಹೆಣ್ಣು ಮಕ್ಕಳ ಹೆಸರಿನಲ್ಲಿ ಹೂಡಿಕೆಯನ್ನು ಆರಂಭಿಸಿದ್ದಾರೆ. ತಮ್ಮ ಹೆಣ್ಣು ಮಕ್ಕಳು ದೊಡ್ಡವರಾದ ಅವರಿಗೆ ಉತ್ತಮ ಭವಿಷ್ಯವನ್ನು ರೂಪಿಸುವ ಸಲುವಾಗಿ ಪೋಷಕರು SSY ನಲ್ಲಿ ಹೂಡಿಕೆಯನ್ನು ಆರಂಭಿಸುತ್ತಿದ್ದಾರೆ.

Child Investment scheme
Image Credit: Parenting Firstcry

SSY ಹೂಡಿಕೆದಾರರಿಗೆ ಕೇಂದ್ರದಿಂದ ಹೊಸ ರೂಲ್ಸ್
ಇನ್ನು SSY ಹೂಡಿಕೆದಾರರಿಗೆ ಸರ್ಕಾರ ವಿಶೇಷ ಬಡ್ಡಿದರವನ್ನು ನೀಡುತ್ತದೆ. ಈ ಯೋಜನೆಯಲ್ಲಿ ಹೂಡಿಕೆಯನ್ನು ಮಾಡಿದರೆ ಹೆಚ್ಚಿನ ಲಾಭವನ್ನು ಗಳಿಸಬಹುದಾಗಿದೆ. ಇನ್ನುಮುಂದೆ ಹೆಣ್ಣು ಮಕ್ಕಳು ಜನಿಸಿದ್ರೆ ಚಿಂತಿಸುವ ಅಗತ್ಯ ಇರುವುದಿಲ್ಲ. ಹೆಣ್ಣು ಮಕ್ಕಳಿಗಾಗಿಯೇ ಈ Sukanya Samriddhi ಯೋಜನೆನ್ನು ಜಾರಿಗೊಳಿಸಲಾಗಿದೆ. ಸದ್ಯ ಕೇಂದ್ರ ಸರ್ಕಾರ SSY ಹೂಡಿಕೆದಾರರಿಗೆ ಹೊಸ ರೂಲ್ಸ್ ಜಾರಿ ಮಾಡಿದೆ. ಅದೇನು ಎನ್ನುವ ಬಗ್ಗೆ ನಾವೀಗ ಈ ಲೇಖನದಲ್ಲಿ ಮಾಹಿತಿ ತಿಳಿಯೋಣ.

ಮಾರ್ಚ್ 31 ರೊಳಗೆ ಈ ಕೆಲಸ ಮಾಡದಿದ್ದರೆ ಬಂದ್ ಆಗಲಿದೆ ನಿಮ್ಮ SSY ಖಾತೆ
Sukanya Samriddhi Yojana (SSY) ಖಾತೆಯನ್ನು ಸಕ್ರಿಯವಾಗಿಡಲು ಕನಿಷ್ಠ ಬ್ಯಾಲೆನ್ಸ್ ಅನ್ನು ನಿರ್ವಹಿಸುವುದು ಕಡ್ಡಾಯವಾಗಿದೆ. ಈ ನಿಟ್ಟಿನಲ್ಲಿ ಹೊಸ ನಿಯಮವೂ ಜಾರಿಗೆ ಬಂದಿದೆ. ಮಾರ್ಚ್ 31, 2024 ರ ವರೆಗೆ ಈ ಖಾತೆಗಳಲ್ಲಿ ಕನಿಷ್ಠ ಬ್ಯಾಲೆನ್ಸ್ ಅನ್ನು ನಿರ್ವಹಿಸಬೇಕಾಗುತ್ತದೆ. ಖಾತೆದಾರರು ತನ್ನ ಬ್ಯಾಲೆನ್ಸ್ ಅನ್ನು ನಿರ್ವಹಿಸದಿದ್ದರೆ ಅಂತವರ ಖಾತೆಯು ನಿಷ್ಕ್ರಿಯವಾಗಬಹುದು. ನಿಷ್ಕ್ರಿಯ ಖಾತೆಯನ್ನು ಪುನಃ ತೆರೆಯಲು, ಖಾತೆದಾರರು ದಂಡವನ್ನು ಪಾವತಿಸಬೇಕಾಗುತ್ತದೆ.

Sukanya Samriddhi Minimum Balance
Image Credit: Bloomberg

SSY ಖಾತೆಯಲ್ಲಿ ಇಷ್ಟು ಹಣ ಇರುವುದು ಕಡ್ಡಾಯ
ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ Minimum Balance 250 ರೂ. ಆಗಿದೆ. ಅಂದರೆ ಖಾತೆಯನ್ನು ಸಕ್ರಿಯವಾಗಿಡಲು ಆರ್ಥಿಕ ವರ್ಷದಲ್ಲಿ 250 ರೂ. ಗಳನ್ನು ಹೂಡಿಕೆ ಮಾಡುವುದು ಅಗತ್ಯ. ನೀವು ಈ ಯೋಜನೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಹೂಡಿಕೆ ಮಾಡದಿದ್ದರೆ ಖಾತೆಯನ್ನು ಬಂದ್ ಮಾಡಲಾಗುತ್ತದೆ. ಖಾತೆಯನ್ನು ಮತ್ತೆ ಸಕ್ರಿಯಗೊಳಿಸಲು ಖಾತೆದಾರನು ವರ್ಷಕ್ಕೆ 50 ರೂಪಾಯಿ ದಂಡವನ್ನು ಪಾವತಿಸಬೇಕಾಗುತ್ತದೆ. ನೀವು ನಿಮ್ಮ SSY ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಅನ್ನು ಮಾರ್ಚ್ 31 ರೊಳಗೆ ಕಾಯ್ದಿರಿಸುವುದು ಅಗತ್ಯ.

Sukanya Samriddhi Yojana
ಸುಕನ್ಯಾ ಸಮೃದ್ಧಿ ಯೋಜನೆಗೆ ಸರ್ಕಾರವು 8 .2 ಪ್ರತಿಶತದಷ್ಟು ಬಡ್ಡಿಯನ್ನು ನೀಡಲಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ನಿಮ್ಮ ಮಗುವಿನ ವಯಸ್ಸು 10 ವರ್ಷವಾಗಿರಬೇಕು. ಮೋದಿ ಸರ್ಕಾರ ತನ್ನ ಮೊದಲ ಅವಧಿಯಲ್ಲಿ ಈ ಯೋಜನೆಯನ್ನು ಪ್ರಾರಂಭಿಸಿದೆ, ಇದರಲ್ಲಿ ಕನಿಷ್ಠ 250 ರೂ.ಗಳಿಂದ ಗರಿಷ್ಠ 1.50 ಲಕ್ಷ ರೂ.ವರೆಗೆ ಹೂಡಿಕೆ ಮಾಡಬಹುದು. ಈ ಯೋಜನೆಯಲ್ಲಿ ಪ್ರಮುಖವಾದ ವಿಷಯವೆಂದರೆ ನೀವು ಯಾವುದೇ ರೀತಿಯ ತೆರಿಗೆಯನ್ನು ಪಾವತಿಸಬೇಕಾಗಿಲ್ಲ. ಮಗಳ ವಯಸ್ಸು 21 ವರ್ಷವಾದಾಗ, ಮೆಚ್ಯೂರಿಟಿ ಆದ ಮೇಲೆ ಹೂಡಿಕೆಯ ಒಟ್ಟು ಲಾಭವನ್ನು ಪಡೆಯಬಹುದು.

Join Nadunudi News WhatsApp Group

Join Nadunudi News WhatsApp Group