SSY Update: ದೇಶದ ಪ್ರತಿ ಹೆಣ್ಣು ಮಗಳಿಗೆ ಕೇಂದ್ರದಿಂದ ಸಿಗಲಿದೆ 64 ಲಕ್ಷ ರೂ, ಇಂದೇ ಖಾತೆ ಓಪನ್ ಮಾಡಿ.
ಹೆಣ್ಣು ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಕೇಂದ್ರ ಸರ್ಕಾರದ ಹೊಸ ಯೋಜನೆ.
Sukanya Samriddhi Yojana: ಕೇಂದ್ರ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಮಹಿಳೆಯರಿಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದೆ. ಮಹಿಳೆಯರಿಗೆ ಆರ್ಥಿಕ ನೆರವು ನೀಡುವುದು ಸರ್ಕಾರದ ಉದ್ದೇಶವಾಗಿದೆ. ಮಹಿಳೆಯರ ಸ್ವಾವಲಂಭಿ ಜೀವನಕ್ಕೆ ಸರ್ಕಾರ ಯೋಜನೆಗಳು ಅಡಿಪಾಯವಾಗುತ್ತದೆ.
ಇನ್ನು ಪೋಷಕರಿಗೆ ತಮ್ಮ ಮಕ್ಕಳ ಭವಿಷ್ಯವನ್ನು ರೂಪಿಸುವ ಹೊಣೆ ಇರುತ್ತದೆ. ಮಕ್ಕಳಿಗೆ ಉತ್ತಮ ಭವಿಷ್ಯವನ್ನು ಕಟ್ಟಿಕೊಡುವುದು ಪೋಷಕರ ಕರ್ತವ್ಯವಾಗಿರುತ್ತದೆ. ಇನ್ನು ಹೆಣ್ಣು ಮಕ್ಕಳನ್ನು ಹೊಂದಿರುವ ಪೋಷಕರಿಗೆ ಜವಾಬ್ದಾರಿಗಳು ಹೆಚ್ಚಿರುತ್ತದೆ. ಹೆಣ್ಣು ಮಗಳ ವಿದ್ಯಾಭ್ಯಾಸ ಮದುವೆ ಇವೆಲ್ಲದರ ಬಗ್ಗೆ ತಂದೆ ತಾಯಿಗೆ ಹೆಚ್ಚಿನ ಚಿಂತೆ ಇರುತ್ತದೆ.
ಕೇಂದ್ರ ಸರ್ಕಾರ ಮಹಿಳೆಯರ ಅನುಕೂಲಕ್ಕಾಗಿ ಈಗಾಗಲೇ ಸಾಕಷ್ಟು ಯೋಜನೆಯನ್ನು ರೂಪಿಸಿದ್ದು ಅದರಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಯು ಹೆಣ್ಣು ಮಕ್ಕಳ ಭವಿಷ್ಯವನ್ನು ರೂಪಿಸಲು ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ.
ಸುಕನ್ಯಾ ಸಮೃದ್ಧಿ ಯೋಜನೆ
ಈ ಸುಕನ್ಯಾ ಸಮೃದ್ಧಿ ಯೋಜನೆ (Sukanya Samriddhi Yojana) ಕೇಂದ್ರ ಮೋದಿ ಸರ್ಕಾರವು ಹೆಣ್ಣು ಮಕ್ಕಳ ಶಿಕ್ಷಣ ಹಾಗೂ ಮದುವೆಗೆ ಅನುಕೂಲ ಮಾಡಿಕೊಡುತ್ತದೆ. ಈ ಯೋಜನೆ ಮೂಲಕ ನೀವು ಕಡಿಮೆ ಹೂಡಿಕೆಯಲ್ಲಿ ನಿಮ್ಮ ಮಗಳ ಶಿಕ್ಷಣ ಅಥವಾ ಮದುವೆಗಾಗಿ 64 ಲಕ್ಷ ಹಣವನ್ನು ಪಡೆಯಬಹುದು. ಈ ಯೋಜನೆಯು ಹೆಚ್ಚಿನ ಸುರಕ್ಷತೆಯನ್ನು ಹೊಂದಿದ್ದು ಬಡ ಕುಟುಂಬಗಳಿಗೆ ಇದು ಉತ್ತಮ ಹೂಡಿಕೆಯ ಯೋಜನೆಯಾಗಿದೆ.
ಇನ್ನು ಸುಕನ್ಯಾ ಸಮೃದ್ಧಿ ಯೋಜನೆಗೆ ಸರ್ಕಾರವು 8 ಪ್ರತಿಶತದಷ್ಟು ಬಡ್ಡಿಯನ್ನು ನೀಡಲಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ನಿಮ್ಮ ಮಗುವಿನ ವಯಸ್ಸು 10 ವರ್ಷವಾಗಿರಬೇಕು. 10 ವರ್ಷದ ದಾಟಿದ ಮಗುವಿನ ಹೆಸರಿನಲ್ಲಿ ಈ ಸುಕನ್ಯಾ ಸಮೃದ್ಧಿ ಯೋಜನೆಯ ಖಾತೆ ತೆರೆಯಲು ಸಾಧ್ಯವಾಗುವುದಿಲ್ಲ. ಹೆಣ್ಣು ಮಗು ಜನಸಿದ ತಕ್ಷಣವೇ ನೀವು ಈ ಯೋಜನೆಯ ಖಾತೆಯನ್ನು ತೆರೆಯಬಹದು.
ಪ್ರತಿ ಹೆಣ್ಣು ಮಗಳಿಗೆ ಕೇಂದ್ರದಿಂದ ಸಿಗಲಿದೆ 64 ಲಕ್ಷ ರೂ
ಮೋದಿ ಸರ್ಕಾರ ತನ್ನ ಮೊದಲ ಅವಧಿಯಲ್ಲಿ ಈ ಯೋಜನೆಯನ್ನು ಪ್ರಾರಂಭಿಸಿದೆ, ಇದರಲ್ಲಿ ಕನಿಷ್ಠ 250 ರೂ.ಗಳಿಂದ ಗರಿಷ್ಠ 1.50 ಲಕ್ಷ ರೂ.ವರೆಗೆ ಹೂಡಿಕೆ ಮಾಡಬಹುದು. ಮೋದಿ ಸರ್ಕಾರ ನಡೆಸುತ್ತಿರುವ ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ನೀವು ಪ್ರತಿ ತಿಂಗಳು 12,500 ರೂಪಾಯಿಗಳನ್ನು ಹೂಡಿಕೆ ಮಾಡಬೇಕಾಗುತ್ತದೆ.
ಇದರಲ್ಲಿ ಈ ಮೊತ್ತವು ಒಂದು ವರ್ಷದಲ್ಲಿ 1.5 ಲಕ್ಷ ಆಗುತ್ತದೆ. ಇದರಲ್ಲಿ ಪ್ರಮುಖವಾದ ವಿಷಯವೆಂದರೆ ನೀವು ಯಾವುದೇ ರೀತಿಯ ತೆರಿಗೆಯನ್ನು ಪಾವತಿಸಬೇಕಾಗಿಲ್ಲ. ಮುಕ್ತಾಯದ ಮೇಲೆ 8% ಬಡ್ಡಿಯ ಲಾಭವನ್ನು ಪಡೆಯುತ್ತೇವೆ. ಮಗಳ ವಯಸ್ಸು 21 ವರ್ಷವಾದಾಗ, ಮೆಚ್ಯೂರಿಟಿ ಆದ ಮೇಲೆ ಒಟ್ಟು 63,79,634 ರೂ. ಲಾಭವನ್ನು ಪಡೆಯಬಹುದು.