Muslim Reservation: ಮುಸ್ಲಿಂ ಮೀಸಲಾತಿ ರದ್ದತಿಯ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್, ಪಾವಿತ್ರ್ಯತೆ ಕಾಪಾಡಿ.

ಮುಸ್ಲಿಮರ ಮೀಸಲಾತಿಯ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಘೋಷಣೆಯನ್ನ ಮಾಡಿದೆ.

Supreme Court Statement About Cancellation Of Muslim Reservation: ಇತ್ತೀಚಿನ ದಿನಗಳಲ್ಲಿ ಮುಸ್ಲಿಂ ಮೀಸಲಾತಿಯ (Muslim Reservation) ಬಗ್ಗೆ ಸಾಕಷ್ಟು ಸುದ್ದಿಗಳು ಹರದಾಡುತ್ತಿದೆ. ಕರ್ನಾಟಕದಲ್ಲಿ ಶೇ. 4 ಅಷ್ಟು ಮುಸ್ಲಿಮರಿಗೆ ಮೀಸಲಾತಿ ನೀಡುವಂತೆ ಸುಪ್ರೀಂ ಕೋರ್ಟ್ (Supreme Court ) ಗೆ ಮನವಿ ಮಾಡಲಾಗಿತ್ತು.

ಇದೀಗ ಸುಪ್ರೀಂ ಕೋರ್ಟ್ ಮುಸ್ಲಿಂ ಮೀಸಲಾತಿ ರದ್ದತಿಯ ಬಗ್ಗೆ ಮಹತ್ವದ ಹೇಳಿಕೆ ನೀಡಿದೆ. ಈ ಕುರಿತು ಮಾಹಿತಿ ತಿಳಿಯೋಣ.

Muslim Reservation
Image Source: Hindusthan times

ಮುಸ್ಲಿಂ ಮೀಸಲಾತಿ ರದ್ದತಿಯ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್.
ಕರ್ನಾಟಕದಲ್ಲಿ ಶೇ. 4 ರಷ್ಟು ಮೀಸಲಾತಿ ನೀಡುವಂತೆ ಕೋರ್ಟ್ ಗೆ ಮೊರೆಹೋಗಲಾಗಿತ್ತು. ಇದೀಗ ಸುಪ್ರೀಂ ಕೋರ್ಟ್ ಈ ಮನವಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಕರ್ನಾಟಕದಲ್ಲಿ ಶೇ. 4 ಅಷ್ಟು ಮುಸ್ಲಿಂ ಕೋಟ ವಾಪಸಾತಿಗೆ ಸಂಬಂಧಿಸಿದಂತೆ ಉಪ- ನ್ಯಾಯಾಂಗ ಈ ವಿಷಯದ ಬಗ್ಗೆ ರಾಜಕೀಯ ಹೇಳಿಕೆಗಳನ್ನು ನೀಡುತ್ತಿರುವ ಸಲುವಾಗಿ ಸುಪ್ರೀಂ ಕೋರ್ಟ್ ಮಂಗಳವಾರ ಆಕ್ಷೇಪವನ್ನು ವ್ಯಕ್ತಪಡಿಸಿದೆ.

Muslim Reservation
Image Source: Times Now

ಸುಪ್ರೀಂ ಕೋರ್ಟ್ ಆದೇಶ
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ, ಜೋಸೆಫ್, ಬಿ.ವಿ. ನಾಗರತ್ನ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾಜ್ ಅವರ ನ್ಯಾಯಪೀಠ ಮುಸ್ಲಿಂ ಮೀಸಲಾತಿ ರದ್ದತಿಯ ಬಗ್ಗೆ ಆದೇಶ ನೀಡಿದೆ.

“ಈ ವಿಷಯವು ನ್ಯಾಯಾಲಯದಲ್ಲಿ ಬಾಕಿ ಇರುವಾಗ ಮತ್ತು ಕರ್ನಾಟಕದ ಮುಸ್ಲಿಂ ಕೋಟ ಕುರಿತು ನ್ಯಾಯಾಲಯದ ಆದೇಶವಿದ್ದಾಗ, ಈ ವಿಷಯದ ಬಗ್ಗೆ ಯಾವುದೇ ರಾಜಕೀಯ ಹೇಳಿಕೆಗಳು ಇರಬಾರದು ಇದು ಸೂಕ್ತವಲ್ಲ. ಸ್ವಲ್ಪ ಪಾವಿತ್ರ್ಯವನ್ನು ಕಾಪಾಡಿಕೊಳ್ಳಬೇಕು” ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

Join Nadunudi News WhatsApp Group

Muslim Reservation
Image Source: India Today

Join Nadunudi News WhatsApp Group