Electric Vehicles: ಎಲೆಕ್ಟ್ರಿಕ್ ಕಾರ್ ಖರೀದಿಸುವವರಿಗೆ ರಾತ್ರೋರಾತ್ರಿ ಗುಡ್ ನ್ಯೂಸ್ ನೀಡಿದ ಕೇಂದ್ರ, ತೆರಿಗೆ ನಿಯಮ ಬದಲಾವಣೆ

ಎಲೆಕ್ಟ್ರಿಕ್ ವಾಹನ ಬಳಸುವವರಿಗೆ ಶುಭ ಸುದ್ದಿ ನೀಡಿದ ಸರ್ಕಾರ, ಎಲೆಕ್ಟ್ರಿಕ್ ವಾಹನಗಳ ತೆರಿಗೆ ದರದಲ್ಲಿ ವಿನಾಯತಿ

Tax Exemption On Electric Vehicles: ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಎಲೆಕ್ಟ್ರಿಕ್ ವಾಹನಗಳು ಮಾರುಕಟ್ಟೆಯಲ್ಲಿ ಬಹಳ ಬೇಡಿಕೆಯನ್ನು ಹೆಚ್ಚಿಸಿಕೊಳ್ಳುತ್ತಿದೆ. ಈ ಮೂಲಕ ಸರ್ಕಾರ ದುಬಾರಿ ಮೊತ್ತದ ವಿದ್ಯುತ್ ಚಾಲಿತ ವಾಹನ ಖರೀದಿಸುವವರಿಗೆ ಸಿಹಿ ಸುದ್ದಿ ನೀಡಿದೆ.

ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಖರೀದಿ ಉತ್ತೇಜಿಸಲು ಕೇಂದ್ರ ಸರ್ಕಾರ 2016ರಲ್ಲಿ ಎಲ್ಲಾ ರೀತಿಯ ಎಲೆಕ್ಟ್ರಿಕ್ ವಾಹನಗಳಿಗೆ ರಸ್ತೆ ತೆರಿಗೆ ವಿನಾಯಿತಿ ಘೋಷಿಸಿತ್ತು. ರಾಜ್ಯದಲ್ಲಿಯೂ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ತೆರಿಗೆ ವಿನಾಯಿತಿ ನೀಡಲಾಗಿದ್ದು, ಇದರಿಂದಾಗಿ ಹೆಚ್ಚಿನವರು ಎಲೆಕ್ಟ್ರಿಕ್ ವಾಹನ ಖರೀದಿಸತೊಡಗಿದ್ದಾರೆ.

Tax Exemption On Electric Vehicles
Image Credit: Businesstoday

ಎಲೆಕ್ಟ್ರಿಕ್ ವಾಹನಗಳ ಮೇಲೆ ತೆರಿಗೆ ವಿನಾಯಿತಿ

ಕೇಂದ್ರ ಸರ್ಕಾರ ಎಲ್ಲಾ ರೀತಿಯ ಎಲೆಕ್ಟ್ರಿಕ್ ವಾಹನಗಳಿಗೆ ರಸ್ತೆ ತೆರಿಗೆ ವಿನಾಯಿತಿ ಘೋಷಿಸಿದ್ದು, 20 ಲಕ್ಷ ರೂ.ಗಿಂತ ಹೆಚ್ಚು ಮೌಲ್ಯದ ಎಲೆಕ್ಟ್ರಿಕ್ ವಾಹನಗಳ ತೆರಿಗೆ ವಿನಾಯಿತಿ ಮುಂದುವರೆದಿದೆ. ರಾಜ್ಯದಲ್ಲಿ ನೋಂದಣಿಯಾಗುವ 20 ಲಕ್ಷ ರೂ.ಗಿಂತ ಹೆಚ್ಚು ಮೌಲ್ಯದ ಎಲೆಕ್ಟ್ರಿಕ್ ವಾಹನಗಳಿಗೆ ಅಜೀವ ತೆರಿಗೆ ವಿನಾಯಿತಿ ಹಿಂಪಡೆಯುವಂತೆ ರಾಜ್ಯ ರಸ್ತೆ ಪ್ರಾಧಿಕಾರ ಸಲ್ಲಿಸಿದ್ದ ಪ್ರಸ್ತಾಪವನ್ನು ಸರ್ಕಾರ ಒಪ್ಪಿಲ್ಲ. ತೆರಿಗೆ ವಿನಾಯಿತಿ ಮುಂದುವರೆಸಲು ಆದೇಶ ನೀಡಿದೆ.

Electric Vehicle Latest News
Image Credit: Navi

ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರದ ಉತ್ತೇಜನ

Join Nadunudi News WhatsApp Group

ಶೂನ್ಯ ತೆರಿಗೆ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ, ಕಡಿಮೆ ನಿರ್ವಹಣಾ ವೆಚ್ಚ, ಪರಿಸರ ರಕ್ಷಣೆ ದೃಷ್ಟಿಯಿಂದ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿದೆ. ತೆರಿಗೆ ವಿನಾಯಿತಿಯಿಂದ ಆದಾಯ ಖೋತಾ ಆದ ಕಾರಣ ಸಾರಿಗೆ ಪ್ರಾಧಿಕಾರ ಎಲ್ಲ ರೀತಿಯ ಎಲೆಕ್ಟ್ರಿಕ್ ವಾಹನಗಳಿಗೆ ತೆರಿಗೆ ವಿಧಿಸಲು ಅನುಮತಿ ಕೋರಿ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ಈ ಪ್ರಸ್ತಾಪವನ್ನು ಸರ್ಕಾರ ತಿರಸ್ಕರಿಸಿದ್ದು, ನಂತರ 20 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಎಲೆಕ್ಟ್ರಿಕ್ ವಾಹನಗಳಿಗೆ ಶೇಕಡ 18 ರಷ್ಟು ತೆರಿಗೆ ವಿಧಿಸಲು ಸಾರಿಗೆ ಇಲಾಖೆ ಪ್ರಸ್ತಾವನೆ ಸಲ್ಲಿಸಿದ್ದು, ಈ ಪ್ರಸ್ತಾಪವನ್ನು ಕೂಡ ಸರ್ಕಾರ ತಿರಸ್ಕರಿಸಿ ತೆರಿಗೆ ವಿನಾಯಿತಿ ಮುಂದುವರಿಸಲು ಆದೇಶ ನೀಡಿದೆ.

Join Nadunudi News WhatsApp Group