Gruha Lakshmi Scheme Taxpayers Name Delete: ಕರ್ನಾಟಕ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಸುಮಾರು 1.28 ಮಹಿಳೆಯರು ಪ್ರತಿ ತಿಂಗಳು 2000 ರೂಪಾಯಿ ಪಡೆದುಕೊಳ್ಳುತ್ತಿದ್ದಾರೆ. ಈ ನಡುವೆ ಕರ್ನಾಟಕ ರಾಜ್ಯದ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಕೆಲವು ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಗೃಹಲಕ್ಷ್ಮಿ ಯೋಜನೆ ಕರ್ನಾಟಕ ರಾಜ್ಯ ಸರ್ಕಾರದ ಮಹತ್ವದ ಯೋಜನೆಯಲ್ಲಿ ಒಂದಾಗಿದೆ, ಆದರೆ ಕೆಲವರು ಈ ಯೋಜನೆಯನ್ನು ದುರುಪಯೋಗ ಮಾಡಿಕೊಳ್ಳುತ್ತಿರುವುದು ಈಗ ಸರ್ಕಾರದ ಗಮನಕ್ಕೆ ಬಂದಿದೆ. ಸುಮಾರು 1.8 ಲಕ್ಷ ಮಹಿಳೆಯರ ಹೆಸರನ್ನು ಈಗ ಗೃಹಲಕ್ಷ್ಮಿ ಯೋಜನೆಯಿಂದ ಡಿಲೀಟ್ ಮಾಡಲಾಗಿದೆ. ಹಾಗಾದರೆ ಯಾವ ಮಹಿಳೆಯರ ಹೆಸರನ್ನು ಗೃಹಲಕ್ಷ್ಮಿ ಯೋಜನೆಯಿಂದ ಡಿಲೀಟ್ ಮಾಡಲಾಗಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
1.8 ಲಕ್ಷ ಮಹಿಳೆಯರ ಹೆಸರು ಗೃಹಲಕ್ಷ್ಮಿ ಯೋಜನೆಯಿಂದ ಡಿಲೀಟ್
ಕರ್ನಾಟಕ ರಾಜ್ಯ ಸರ್ಕಾರ ನೀಡಿರುವ ಮಾಹಿತಿಯ ಪ್ರಕಾರ, ತೆರಿಗೆ ಪಾವತಿ ಮಾಡುತ್ತಿರುವ ಸುಮಾರು 1.8 ಲಕ್ಷ ಮಹಿಳೆಯರ ಹೆಸರನ್ನು ಗೃಹಲಕ್ಷ್ಮಿ ಯೋಜನೆಯಿಂದ ಡಿಲೀಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ಮಾಹಿತಿ ವಿಧಾನ ಪರಿಷತ್‌ನಲ್ಲಿ ಲಿಖಿತ ಉತ್ತರದ ಮೂಲಕ ಬಹಿರಂಗವಾಗಿದೆ. ಗೃಹಲಕ್ಷ್ಮಿ ಯೋಜನೆಯ ನಿಯಮಗಳ ಪ್ರಕಾರ, ತೆರಿಗೆ ಪಾವತಿ ಮಾಡುವ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಹಣ ಪಡೆದುಕೊಳ್ಳಲು ಯಾವುದೇ ಅರ್ಹತೆ ಹೊಂದಿರುವುದಿಲ್ಲ. ಈ ಕಾರಣಗಳಿಂದ ಅಂತಹ ಮಹಿಳೆಯರ ಹೆಸರನ್ನು ಗೃಹಲಕ್ಷ್ಮಿ ಯೋಜನೆಯಿಂದ ಡಿಲೀಟ್ ಮಾಡಲಾಗಿದೆ.
ಡಿಲೀಟ್ ಮಹಿಳೆಯರಿಗೆ ಬರಲ್ಲ ಇನ್ನುಮುಂದೆ 2000 ರೂ
ಯಾವ ಮಹಿಳೆಯರ ಹೆಸರನ್ನು ಗೃಹಲಕ್ಷ್ಮಿ ಯೋಜನೆಯಿಂದ ಡಿಲೀಟ್ ಮಾಡಲಾಗಿದೆಯೋ ಅಂತಹ ಮಹಿಳೆಯರು ಇನ್ನುಮುಂದೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯ ಹಣ ಪಡೆದುಕೊಳ್ಳಲು ಸಾಧ್ಯವಿಲ್ಲ. 2023 ರ ವರ್ಷದಲ್ಲಿ ಯಾರಿಗೆ ಬಂದಿರುವ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಮಹಿಳೆಯರು ಪ್ರತಿ ತಿಂಗಳು 2000 ರೂಪಾಯಿ ಪಡೆದುಕೊಳ್ಳುತ್ತಿದ್ದಾರೆ. ಈಗಾಗಲೇ ಕರ್ನಾಟಕ ರಾಜ್ಯ ಸರ್ಕಾರ 52,416 ಕೋಟಿ ರೂಪಾಯಿಯನ್ನು ಗೃಹಲಕ್ಷ್ಮಿ ಯೋಜನೆಗಾಗಿ ಬಿಡುಗಡೆ ಮಾಡಿದೆ.
ಗೃಹಲಕ್ಷ್ಮಿ ಯೋಜನೆಯ ಅರ್ಹತಾ ನಿಯಮಗಳು
* ಕುಟುಂಬದ ಯಜಮಾನಿ ಮಹಿಳೆ ಮಾತ್ರ ಯೋಜನೆಗೆ ಅರ್ಹತೆ ಪಡೆದುಕೊಂಡಿರುತ್ತಾಳೆ
* ತೆರಿಗೆ ಪಾವತಿ ಮಾಡುವ ಮಹಿಳೆಯರು ಯೋಜನೆಗೆ ಅರ್ಹರಲ್ಲ
* GST ಪಾವತಿ ಮಾಡುವ ಮಹಿಳೆಯರು ಯೋಜನೆಗೆ ಅರ್ಹರಲ್ಲ
* ಕುಟುಂಬದ ಒಬ್ಬ ಮಹಿಳೆ ಮಾತ್ರ ಯೋಜನೆಯ ಲಾಭ ಪಡೆದುಕೊಳ್ಳಬಹುದು
* BPL ಮತ್ತು ಅಂತ್ಯೋದಯ ಕಾರ್ಡ್ ಇದ್ದವರು ಮಾತ್ರ ಲಾಭ ಪಡೆದುಕೊಳ್ಳಬಹುದು
* ಕರ್ನಾಟಕ ಖಾಯಂ ನಿವಾಸಿ ಮಾತ್ರ ಅರ್ಜಿ ಸಲ್ಲಿಸಬಹುದು
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ ಮತ್ತು ಬೇಕಾದ ದಾಖಲೆ
* ಗ್ರಾಮ ಓಮ್, ಕರ್ನಾಟಕ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು
* ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಮತ್ತು ಪಡಿತರ ಚೀಟಿ ಕಡ್ಡಾಯ
* ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಲಿಂಕ್ ಆಗಿರುವುದು ಕಡ್ಡಾಯ
* https://sevasindhugs.karnataka.gov.in/ ವೆಬ್ಸೈಟ್ ನಲ್ಲಿ ಸುಲಭವಾಗಿ ಅರ್ಜಿ ಸಲ್ಲಿಸಿ
Disclaimer: This information is provided for awareness purposes only. For personalised legal advice, consult a qualified professional and refer to official government notifications.

