Mahila Samman: ಕೇಂದ್ರದ ಈ ಯೋಜನೆಯಲ್ಲಿ ಹಣವನ್ನ ಪಡೆದುಕೊಂಡರೆ ಕಟ್ಟಬೇಕು ತೆರಿಗೆ, ಸ್ಪಷ್ಟನೆ ಕೊಟ್ಟ ಕೇಂದ್ರ.

ಮಹಿಳಾ ಸಮ್ಮಾನ್ ಯೋಜನೆಯಲ್ಲಿ ಹಣವನ್ನ ಪಡೆದುಕೊಂಡರೆ TDS ಪಾವತಿಸಬೇಕು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

Mahila Samman Saving Scheme TDS: ಕೇಂದ್ರ ಸರ್ಕಾರ ಮಹಿಳೆಯರಿಗಾಗಿ ಈಗಾಗಲೇ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದೆ. ಮಹಿಳೆಯರು ಸ್ವಾಲಂಭಿಯಾಗಿ ಜೀವನ ನಡೆಸಲಿ ಎನ್ನುವ ಉದ್ದೇಶದಿಂದ ಸರ್ಕಾರ ಮಹಿಳೆಯರಿಗಾಗಿ ವಿವಿಧ ರೀತಿಯ ಯೋಜನೆಗಳನ್ನು ಜಾರಿಗೊಳಿಸಿದೆ.

ಆದರೆ ಇದೀಗ ಕೇಂದ್ರದ ಮೋದಿ ಸರ್ಕಾರ (Central Government) ಇತ್ತೀಚಿಗೆ ಬಿಡುಗಡೆ ಮಾಡಿದ ಈ ಯೋಜನೆಯಲ್ಲಿ ಮಹತ್ವದ ಬದಲಾವಣೆಯನ್ನು ಜಾರಿಗೊಳಿಸಿದೆ. ಯಾವ ಯೋಜನೆಯ ನಿಯಮ ಬದಲಾಗಿದೆ ಎನ್ನುವ ಬಗ್ಗೆ ತಿಳಿಯೋಣ.

Mahila Samman Saving Scheme TD
Image Source: Sakshi

ಮಹಿಳಾ ಸಮ್ಮಾನ್ ಉಳಿತಾಯ ಯೋಜನೆ (Mahila Samman Saving Scheme) 
ಏಪ್ರಿಲ್ 1 ರಿಂದ ಮಹಿಳೆಯರಿಗಾಗಿ ಕೇಂದ್ರದ ಮೋದಿ ಸರಕಾರ ಮಹಿಳಾ ಸಮ್ಮಾನ್ ಉಳಿತಾಯ ಯೋಜನೆಯನ್ನು ಪ್ರಾರಂಭಿಸಿತ್ತು. ಮಹಿಳೆಯರಿಗೆ ಕಡಿಮೆ ಹೂಡಿಕೆಯಲ್ಲಿ ಹೆಚ್ಚಿನ ಲಾಭ ನೀಡುವ ಯೋಜನೆಯಾಗಿತ್ತು. ಮಹಿಳೆಯರು ಈ ಯೋಜನೆಗೆ ಅರ್ಜಿ ಸಲ್ಲಿಸುವ ಮೂಲಕ ಯೋಜನೆಯ ಲಾಭ ಪಡೆದಿದ್ದರು. ಇನ್ನು ಇದೀಗ ಕೇಂದ್ರ ಸರ್ಕಾರ ಮಹಿಳಾ ಸಮ್ಮಾನ್ ಉಳಿತಾಯ ಯೋಜನೆಯಲ್ಲಿ ಮಹತ್ವದ ಬದಲಾವಣೆಯನ್ನು ಜಾರಿಗೊಳಿಸಿದೆ.

Mahila Samman Saving Scheme TDS
Image Source: Taxcan

ಮಹಿಳಾ ಸಮ್ಮಾನ್ ಯೋಜನೆಯಲ್ಲಿ ಮಹತ್ವದ ಬದಲಾವಣೆ ಘೋಷಿಸಿದ ಕೇಂದ್ರ ಸರ್ಕಾರ
ಮಹಿಳಾ ಸಮ್ಮಾನ್ ಉಳಿತಾಯ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರ ಇತ್ತೀಚಿಗೆ ಮಹತ್ವದ ಘೋಷಣೆ ಹೊರಡಿಸಿದೆ. ಮಹಿಳಾ ಸಮ್ಮಾನ್ ಉಳಿತಾಯ ಯೋಜನೆಯಲ್ಲಿ ಹೂಡಿಕೆ ಮಾಡಿದ ಹಣಕ್ಕೆ ಬರುವ ಬಡ್ಡಿ ಮೊತ್ತಕ್ಕೆ ತೆರಿಗೆ ವಿಧಿಸಲಾಗುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಕೇಂದ್ರದ ಈ ಬದಲಾವಣೆ ಮಹಿಳೆಯರಲ್ಲಿ ನಕಾರಾತ್ಮಕ ಪರಿಣಾಮವನ್ನು ಬೀರಲಿದೆ.

ಆದಾಯ ತೆರಿಗೆ ಕಾಯ್ದೆ ಸೆಕ್ಷನ್ 194ಎ ಪ್ರಕಾರ ಮಾಹಿಳಾ ಸಮ್ಮಾನ್ ಉಳಿತಾಯ ಯೋಜನೆಯಲ್ಲಿ ಗಳಿಸಿದ ಬಡ್ಡಿ ಮೊತ್ತಕ್ಕೆ ಟಿಡಿಎಸ್ ಪಾವತಿಸಬೇಕು ಎಂದು ಕೇಂದ್ರ ಸರ್ಕಾರ ಬಹಿರಂಗಪಡಿಸಿದೆ. ಈ ಸಂಬಂಧ ಸಿಬಿಟಿಡಿ ಅಧಿಸೂಚನೆ ಹೊರಡಿಸಿದೆ. 40 ಸಾವಿರಕ್ಕಿಂತ ಹೆಚ್ಚು ಹಣವನ್ನು ಒಂದು ಆರ್ಥಿಕ ವರ್ಷದಲ್ಲಿ ಕ್ಲೈಮ್ ಮಾಡಿದರೆ ಆದಾಯ ತೆರಿಗೆ ಕಾಯ್ದೆ ಸೆಕ್ಷನ್ 194ಎ ನ ಅಡಿಯಲ್ಲಿ ಟಿಡಿಎಸ್ ಪಾವತಿಸಬೇಕಾಗುತ್ತದೆ.

Join Nadunudi News WhatsApp Group

Mahila Samman Saving Scheme TDS
Image Source: Studay cafe

Join Nadunudi News WhatsApp Group