Course Fee Hike: ಕಾಲೇಜಿಗೆ ಹೋಗುವ ಮಕ್ಕಳಿಗೆ ಮತ್ತೆ ಬೇಸರದ ಸುದ್ದಿ, ಈ ಕೋರ್ಸುಗಳ ಶುಲ್ಕದಲ್ಲಿ ಹೆಚ್ಚಳ.

ಈ ಕೋರ್ಸುಗಳ ಶುಲ್ಕದಲ್ಲಿ ಹೆಚ್ಚಳ, ಕಾಲೇಜು ಮಕ್ಕಳಿಗೆ ಬೇಸರದ ಸುದ್ದಿ

Technical Education Course Fee Hike: ರಾಜ್ಯ ಸರ್ಕಾರ ಶಿಕ್ಷಣಕ್ಕಾಗಿ ಹೆಚ್ಚು ಒತ್ತು ನೀಡುತ್ತಿದೆ. ವಿದ್ಯಾರ್ಥಿಗಳಿಗಾಗಿ ಹೆಚ್ಚಿನ ಸೌಲಭ್ಯವನ್ನು ನೀಡುತ್ತಿದೆ. ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ಸಹಾಯವಾಗಲು ರಾಜ್ಯ ಸರ್ಕಾರ ವಿವಿಧ ವಿದ್ಯಾರ್ಥಿ ವೇತನವನ್ನು ಕೂಡ ನೀಡುತ್ತಿರುತ್ತದೆ. ಸದ್ಯ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಬೇಸರದ ಸುದ್ದಿಯೊಂದನ್ನು ನೀಡಿದೆ.

ಹೌದು, ತಾಂತ್ರಿಕ ಶಿಕ್ಷಣ ಕೋರ್ಸ್ ಗಳ ಶುಲ್ಕವನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಇನ್ನುಮುಂದೆ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣ ಕೋರ್ಸ್ ಗಳಿಗೆ ಹೆಚ್ಚಿನ ಶುಲ್ಕವನ್ನು ನೀಡಬೇಕಾಗುತ್ತದೆ. ರಾಜ್ಯ ಸರ್ಕಾರ Technical Education Course ನ ಶುಲ್ಕವನ್ನು ಎಷ್ಟು ಹೆಚ್ಚಿಸಲು ನಿರ್ಧರಿಸಿದೆ ಎನ್ನುವ ಬಗ್ಗೆ ಮಾಹಿತಿ ಇಲ್ಲಿದೆ.

Technical Education Course Fee
Indian Express

ಕಾಲೇಜಿಗೆ ಹೋಗುವ ಮಕ್ಕಳಿಗೆ ಮತ್ತೆ ಬೇಸರದ ಸುದ್ದಿ
2024-25ನೇ ಸಾಲಿಗೆ ಎಂಜಿನಿಯರಿಂಗ್ ಮತ್ತು ಆರ್ಕಿಟೆಕ್ಚರ್ ಕಾಲೇಜುಗಳಲ್ಲಿ ಖಾಸಗಿ ಅನುದಾನರಹಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿನ ವೃತ್ತಿಪರ ಕೋರ್ಸ್‌ ಗಳ ಶುಲ್ಕವನ್ನು 10% ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ದೊಡ್ಡ ಶಾಕ್ ನೀಡಲಾಗಿದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಖಾಸಗಿ ಅನುದಾನಿತ ಮತ್ತು ಅನುದಾನ ರಹಿತ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಒಕ್ಕೂಟದ ಪದಾಧಿಕಾರಿಗಳೊಂದಿಗೆ ಈ ನಿರ್ಣಯದ ಕುರಿತು ಒಮ್ಮತದ ಚರ್ಚೆ ನಡೆಸಿದರು.

ಈ ಕೋರ್ಸುಗಳ ಶುಲ್ಕದಲ್ಲಿ ಹೆಚ್ಚಳ
ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟವು ಶೇ.15ರಷ್ಟು ಹೆಚ್ಚಳದ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿತ್ತು. ಸುದೀರ್ಘ ಚರ್ಚೆಯ ಬಳಿಕ ಕೊನೆಗೂ ಕಳೆದ ವರ್ಷದ ಶುಲ್ಕದ ಮೇಲೆ ಶೇ.10ರಷ್ಟು ಶುಲ್ಕ ಹೆಚ್ಚಿಸುವ ನಿರ್ಧಾರಕ್ಕೆ ಒಮ್ಮತ ಮೂಡಿತು. ಈ ಕುರಿತು ಅಧಿಕೃತ ಸರ್ಕಾರಿ ಆದೇಶ ಶೀಘ್ರದಲ್ಲೇ ಹೊರಬೀಳಲಿದೆ.

Technical Education Course Fee Hike
Image Credit: nenow

ಈ ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀಕರ್, ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಜಗದೀಶ್, ಕೆಇಎ, ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನಕುಮಾರ್, ಖಾಸಗಿ ತಾಂತ್ರಿಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರಾಧಾಕೃಷ್ಣ, ಪ್ರಧಾನ ಕಾರ್ಯದರ್ಶಿ ಶ್ಯಾಮ್, ಕರ್ನಾಟಕ ರಾಜ್ಯ ಧಾರ್ಮಿಕ ಅಲ್ಪಸಂಖ್ಯಾತರ ತಾಂತ್ರಿಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಶಫಿ ಅಹಮದ್, ಎಂ.ಎಸ್. .ಎಂ.ಆರ್. ರಾಮಯ್ಯ ತಾಂತ್ರಿಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಜಯರಾಂ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ಎಲ್ಲರು ಚರ್ಚಿಸಿ ಕಳೆದ ವರ್ಷ ನಿಗದಿಪಡಿಸಿದ್ದ ಶುಲ್ಕಕ್ಕೆ ಶೇ. 10 ರಷ್ಟು ಹೆಚ್ಚಳ ಮಾಡುವ ನಿರ್ಧಾರ ಕೈಗೊಂಡಿದ್ದಾರೆ. ಇನ್ನುಮುಂದೆ 2024-25 ನೇ ಸಾಲಿಗೆ ಎಂಜಿನಿಯರಿಂಗ್ ಮತ್ತು ಆರ್ಕಿಟೆಕ್ಚರ್ ಕಾಲೇಜುಗಳಲ್ಲಿ ಖಾಸಗಿ ಅನುದಾನರಹಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿನ ವೃತ್ತಿಪರ ಕೋರ್ಸ್‌ ಗಳ ಶುಲ್ಕ ಹೆಚ್ಚು ನೀಡಬೇಕಾಗುತ್ತದೆ.

Join Nadunudi News WhatsApp Group

college courses online free
Image Credit: India Todayne

Join Nadunudi News WhatsApp Group