Drought Relief: ಈ ರೈತರ ಖಾತೆಗೆ ಬರಪರಿಹಾರದ 2000 ರೂ ಜಮಾ, ಸಿದ್ದರಾಮಯ್ಯ ಅಧಿಕೃತ ಘೋಷಣೆ

ತಾತ್ಕಾಲಿಕ ಬರ ಪರಿಹಾರ ಬಿಡುಗಡೆ ಮಾಡಿದ ಸಿದ್ದರಾಮಯ್ಯ

Temporary Drought Relief: ಸದ್ಯ ರಾಜ್ಯದಲ್ಲಿ ಅನೇಕ ಯೋಜನೆಗಳು ಅನುಷ್ಠಾನಗೊಳ್ಳುತ್ತಿದೆ ಎನ್ನಬಹುದು. ಕಾಂಗ್ರೆಸ್ ಜಾರಿಗೊಳಿಸುತ್ತಿರುವ ಯೋಜನೆಗಳು ಜನಸಾಮಾನ್ಯರಿಗೆ ಹೆಚ್ಚಿನ ಅನುಕೂಲ ಮಾಡಿಕೊಡುತ್ತಿದೆ. ಸದ್ಯ ರಾಜ್ಯ ಸರ್ಕಾರ ರೈತರ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಿದೆ ಎನ್ನಬಹುದು. ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ನಂತರ ರೈತರು ಬಾರಿ ಪ್ರಮಾಣದಲ್ಲಿ ನಷ್ಟ ಅನುಭವಿಸುವಂತಾಗಿದೆ. ಈ ಕಾರಣಕ್ಕಾಗಿ ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ಬರ ಪರಿಹಾರ ನಿಡುದಾಗಿ ಘೋಷಣೆ ಹೊರಡಿಸಿದೆ.

Congress Government Release Temporary Drought Relief
Image Credit: Telegraphindia

ತಾತ್ಕಾಲಿಕ ಬರ ಪರಿಹಾರ ಬಿಡುಗಡೆ ಮಾಡಿದ ಸಿದ್ದರಾಮಯ್ಯ
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನವದೆಹಲಿಯಲ್ಲಿ ತೆರಿಗೆ ಹಂಚಿಕೆ ಬಗ್ಗೆ ರಾಜ್ಯದ ಪ್ರತಿಭಟನೆಯನ್ನು ಮಾಜಿ ಮುಖ್ಯ ಮಂತ್ರಿ ಯಡಿಯೂರಪ್ಪ ಅವರು ಟೀಕಿಸಿದ್ದಾರೆ. ಹಾಗಾದರೆ ರಾಜ್ಯಕ್ಕೆ ಕೇಂದ್ರದಿಂದ ಆದ ಅನ್ಯಾಯವನ್ನು ವಿರೋದಿಸುದು ತಪ್ಪೇ…? ಮುಖ್ಯಮಂತ್ರಿ ಆಗಿದ್ದಾಗ ಯಡಿಯೂರಪ್ಪ ಅವರು ಕೇಂದ್ರದ ವಿರುದ್ಧ ದನಿ ಎತ್ತಲಿಲ್ಲ. ನಾವು 100 ರೂಪಾಯಿ ಕಟ್ಟಿದರೆ ಕೇವಲ 13 ರೂಪಾಯಿ ರಾಜ್ಯಕ್ಕೆ ವಾಪಸು ಬರುತ್ತಿತ್ತು, ರಾಜ್ಯದಿಂದ 4,30,000 ಕೋಟಿ ಸಂಗ್ರಹವಾದರೆ, ನಮಗೆ 50,257 ಕೋಟಿ ಮಾತ್ರ ಮರಳಿ ಬರುತ್ತಿದೆ. ಕೇಂದ್ರದ ಈ ದೋರಣೆಯನ್ನು ವಿರೋದಿಸಲಾಗುತ್ತಿದೆ ಎಂದಿದ್ದಾರೆ.

Temporary Drought Relief
Image Credit; Scroll

ಇದೀಗ ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು, ಕುಡಿಯುವ ನೀರು, ಮೇವು, ಉದ್ಯೋಗ ನೀಡಲಾಗುತ್ತಿದ್ದು, ಒಟ್ಟು 860 ಕೋಟಿ ರೂಪಾಯಿಯನ್ನು ಜಿಲ್ಲಾಧಿಕಾರಿಗೆ ನೀಡಲಾಗಿದೆ. ಜನರ ಕುಡಿಯುವ ನೀರಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ. ಇದರ ಜೊತೆಗೆ ತಾತ್ಕಾಲಿಕ ಪರಿಹಾರವಾಗಿ ಒಬ್ಬ ರೈತನಿಗೆ ತಲಾ 2000 ದಂತೆ ಸುಮಾರು 34 ಲಕ್ಷ ರೈತರಿಗೆ 650 ಕೋಟಿ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಐದು ಥಿಗಳು ಕಳೆದರು ಕೇಂದ್ರ ಸರ್ಕಾರ ಬರ ಪರಿಹಾರ ನೀಡಿಲ್ಲ ರಾಜ್ಯದ BJP ನಾಯಕರು ಕೇವಲ ಭಾಷಣ ಮಾಡುತ್ತಾರೆ ಹೊರತು ಕೇಂದ್ರದೊಂದಿಗೆ ಸಂವಹನ ನೆಡೆಸಿ ಪರಿಹಾರ ದೊರಕಿಸಿ ಕೊಡುತ್ತಿಲ್ಲ ಎಂದು ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

Join Nadunudi News WhatsApp Group

Join Nadunudi News WhatsApp Group