The Kerala Story: ಎರಡು ವಾರಗಳಲ್ಲಿ ದಾಖಲೆಯ ಕಲೆಕ್ಷನ್ ಮಾಡಿದ ದಿ ಕೇರಳ ಸ್ಟೋರಿ ಸಿನಿಮಾ.

ದಿ ಕೇರಳ ಸ್ಟೋರಿ ಸಿನಿಮಾದ ಎರಡು ವಾರದ ಕಲೆಕ್ಷನ್ ಎಷ್ಟಾಗಿದೆ ಎಂಬ ಮಾಹಿತಿ ಈಗ ತಿಳಿದುಕೊಳ್ಳೋಣ.

The Kerala Story Movie Collection: ದಿ ಕೇರಳ ಸ್ಟೋರಿ (The Kerala Story) ಸಿನಿಮಾ ಈಗಾಗಲೇ ದೇಶಾದ್ಯಂತ ರಿಲೀಸ್ ಆಗಿದೆ. ಹಿಂದಿ, ತಮಿಳು, ಮಲಯಾಳಂ, ಮತ್ತು ತೆಲುಗು ಭಾಷೆಯಲ್ಲಿ ಈ ಸಿನಿಮಾ ಮೂಡಿ ಬಂದಿದ್ದು ಸಾಕಷ್ಟು ಜನರು ಈ ಸಿನಿಮಾ ನೋಡಿ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನು ಈ ಸಿನಿಮಾ ವಿವಾದದ ಮದ್ಯೆ ಸಿಲುಕಿಕೊಂಡಿದ್ದರು ದಾಖಲೆಯ ಕಲೆಕ್ಷನ್ ಮಾಡಿದೆ. ದಿ ಕೇರಳ ಸ್ಟೋರಿ ಸಿನಿಮಾದ ಎರಡು ವಾರದ ಕಲೆಕ್ಷನ್ ಎಷ್ಟಾಗಿದೆ ಎಂಬ ಮಾಹಿತಿ ಈಗ ತಿಳಿದುಕೊಳ್ಳೋಣ.

The Kerala Story Movie Collection
Image Source: Mint

ವಿವಾದಕ್ಕೆ ಒಳಗಾದ ದಿ ಕೇರಳ ಸ್ಟೋರಿ ಸಿನಿಮಾ
ಇನ್ನು ಹಲವು ರಾಜ್ಯದಲ್ಲಿ ದಿ ಕೇರಳ ಸ್ಟೋರಿ ಚಿತ್ರಕ್ಕೆ ನಿಷೇಧದ ಭೀತಿ ಎದುರಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಚಿತ್ರವನ್ನ ನೋಡಿದ ಸಾಕಷ್ಟು ಜನರು ಚಿತ್ರಕ್ಕೆ ಮೆಚ್ಚುಗೆಯನ್ನ ವ್ಯಕ್ತಪಡಿಸಿದ್ದಾರೆ. ಹಲವು ರಾಜ್ಯಗಳು ಈ ಚಿತ್ರಕ್ಕೆ ತೆರಿಗೆ ವಿನಾಯಿತಿಯನ್ನ ಕೂಡ ಘೋಷಣೆ ಮಾಡಿದ್ದು ಇದು ಚಿತ್ರದ ಯಶಸ್ಸಿಗೆ ಕಾರಣವಾಗಿದೆ.

The Kerala Story Movie Collection
Image Source: Jagran

ದಿ ಕೇರಳ ಸ್ಟೋರಿ ಸಿನಿಮಾದ ಎರಡು ವಾರದ ಕಲೆಕ್ಷನ್
ದಿ ಕೇರಳ ಸ್ಟೋರಿ ಸಿನಿಮಾ ರಿಲೀಸ್ ಆಗಿ ಐದು ದಿನದಲ್ಲಿ ಬರೋಬ್ಬರಿ 55 ರಿಂದ 60 ಕೋಟಿ ರೂಪಾಯಿ ಗಳಿಸಿತ್ತು. ಸಾಕಷ್ಟು ವಿವಾದದ ನಡುವೆಯೂ ಈ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿದೆ.

ಇನ್ನು ಈ ಸಿನಿಮಾ ರಿಲೀಸ್ ಆಗಿ ಎರಡು ವಾರಕ್ಕೆ 168 ಕೋಟಿ ರೂಪಾಯಿ ಗಳಿಸಿದೆ ಎಂದು ವರದಿ ಆಗಿದೆ. ಇನ್ನು ಕೆಲವು ದಿನಗಳಲ್ಲಿ 200 ಕೋಟಿ ರೂಪಾಯಿ ಗಳಿಸುತ್ತದೆ ಎಂಬ ನಂಬಿಕೆಯು ಸಹ ಇದೆ. ಇನ್ನು ಸಾಕಷ್ಟು ಮಂದಿ ಈ ಸಿನಿಮಾವನ್ನು ವೀಕ್ಷಿಸುತ್ತಿದ್ದಾರೆ.

Join Nadunudi News WhatsApp Group

The Kerala Story Movie Collection
Image Source: Koimoi

Join Nadunudi News WhatsApp Group