Ads By Google

New Traffic Rule: ವಾಹನ ಚಲಾಯಿಸುವವರಿಗೆ ಬಿಗ್ ಅಪ್ಡೇಟ್, ಅಗಸ್ಟ್ 1 ರಿಂದ ದೇಶದಲ್ಲಿ ಹೊಸ ನಿಯಮ ಜಾರಿಗೆ

Traffic Rules New Update

Image Credit: Original Source

Ads By Google

Traffic Rule New Update: ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಅಪಘಾತಗಳು ಸಂಭವಿಸುತ್ತಿದ್ದು ಇದನ್ನು ತಡೆಯಲು ಹೊಸ ಹೊಸ ಸಂಚಾರ ನಿಯಮಗಳು ಜಾರಿ ಆಗುತ್ತಿದೆ. ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಿರುವುದರಿಂದ ಟ್ರಾಫಿಕ್ ಪೊಲೀಸರು ಹೊಸ ಹೊಸ ರೂಲ್ಸ್ ಜಾರಿಗೆ ತರುತ್ತಿದ್ದಾರೆ.

ಸದ್ಯ ಸಂಚಾರಿ ಪೊಲೀಸರು ಒನ್ ವೆ ನಲ್ಲಿ ಬರುವ ವಾಹನಗಳಿಗೆ ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ. ಇದನ್ನು ಜನರು ಪಾಲಿಸದಿದ್ದರೆ ದಂಡದ ಜೊತೆಗೆ ಜೈಲು ಶಿಕ್ಷೆ ಆಗುವುದು ಖಚಿತವಾಗಿದೆ. ನೀವು ಒನ್ ವೇಯಲ್ಲಿ ವಾಹನ ಚಲಾಯಿಸುವ ಮುನ್ನ ಈ ಹೊಸ ನಿಯಮದ ಬಗ್ಗೆ ಮಾಹಿತಿ ತಿಳಿದುಕೊಳ್ಳುವುದು ಉತ್ತಮ.

Image Credit: Informalnewz

ವಾಹನ ಚಲಾಯಿಸುವವರಿಗೆ ಹೊಸ ರೂಲ್ಸ್
ಇತ್ತೀಚೆಗಷ್ಟೇ ಅಪಘಾತಕ್ಕೆ ಕಾರಣವಾಗುವ ಪ್ರಖರವಾದ ಬೆಳಕು ಸೂಸುವ ಮತ್ತು ಕಣ್ಣುಮುಚ್ಚಿಸುವ ಎಲ್‌ಇಡಿ ದೀಪಗಳನ್ನು ಅಳವಡಿಸಿದ ವಾಹನಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಾಗಿತ್ತು. ಅಪಾಯಕಾರಿ ಹೆಡ್ ಲೈಟ್ ಇರುವ ವಾಹನಗಳ ವಿರುದ್ಧ ಕ್ರಮ ಕೂಡ ಕೈಗೊಳ್ಳಲಾಗಿತ್ತು. ಇದೀಗ ಮತ್ತೊಂದು ಕಾರ್ಯಾಚರಣೆಗೆ ಪೊಲೀಸ್ ಇಲಾಖೆ ಸಿದ್ಧವಾಗಿದೆ.

ಏಕಮುಖ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಲಾಯಿಸುವ ಚಾಲಕರು ಮತ್ತು ಫುಟ್‌ ಪಾತ್‌ ನಲ್ಲಿ ದ್ವಿಚಕ್ರ ವಾಹನ ಚಲಾಯಿಸುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಬೇಕು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ) ಅಲೋಕ್ ಕುಮಾರ್ ಸೂಚಿಸಿದ್ದಾರೆ.

Image Credit: Informalnewz

ಆಗಸ್ಟ್ 1ರಿಂದ ವಿಶೇಷ ಕಾರ್ಯಾಚರಣೆ ಜಾರಿ
ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಲಾಯಿಸುವುದರಿಂದ ಪ್ರಯಾಣಿಕರ ಜೀವಕ್ಕೆ ಅಪಾಯ ಉಂಟಾಗುತ್ತಿದೆ. ಹೆದ್ದಾರಿಗಳಲ್ಲಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಲಾಯಿಸುವವರ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್ 281 ಮತ್ತು ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 184 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಸಚಿವರು ಸೂಚನೆ ನೀಡಿದ್ದಾರೆ.

ಬೆಂಗಳೂರು ಮತ್ತು ಇತರ ನಗರಗಳಲ್ಲಿ, ವಿರುದ್ಧ ದಿಕ್ಕಿನಲ್ಲಿ ಪ್ರಯಾಣಿಸುವುದು ಮತ್ತು ಪಾದಚಾರಿ ಮಾರ್ಗದಲ್ಲಿ ದ್ವಿಚಕ್ರ ವಾಹನವನ್ನು ಓಡಿಸುವುದು ಸಾಮಾನ್ಯವಾಗಿದೆ. ಆಗಸ್ಟ್ 1ರಿಂದ ವಿಶೇಷ ಕಾರ್ಯಾಚರಣೆ ನಡೆಸಬೇಕು, ಕಾರ್ಯಾಚರಣೆಗೂ ಮುನ್ನ ಸಾಮಾಜಿಕ ಜಾಲತಾಣ, ಕರಪತ್ರ, ಧ್ವನಿವರ್ಧಕಗಳ ಮೂಲಕ ಈ ಬಗ್ಗೆ ಮಾಹಿತಿ ನೀಡುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

Image Credit: The Hindu
Ads By Google
Nadunudi: nadunudi.in is digital media platform, which Provides Latest News Content in Kannada Language by team of experienced Professionals in the Journalism Field