Traffic Fine: ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವವರಿಗೆ ಗುಡ್ ನ್ಯೂಸ್, ಹೊಸ ರೂಲ್ಸ್ ಜಾರಿಗೆ ತಂದ ಸರ್ಕಾರ.

ಸಂಚಾರ ನಿಯಮ ಉಲ್ಲಂಘಿಸುವವರಿಗೆ ಶೇ. 50 ರ ರಿಯಾಯಿತಿಯೊಂದಿಗೆ ದಂಡ ಪಾವತಿಸುವ ಅವಕಾಶವನ್ನು ನೀಡಲಾಗುತ್ತಿದೆ.

Traffic Rules and fine: ದೇಶದಲ್ಲಿ ಟ್ರಾಫಿಕ್ (Traffic) ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಂಚಾರ ನಿಯಮ (Traffic Rule) ಉಲ್ಲಂಘನೆ ಮಾಡುವ ಮೂಲಕ ಪ್ರತಿನಿತ್ಯ ಸಾವಿರಾರು ಪ್ರಕರಣಗಳು ದಾಖಲಾಗುತ್ತಿದೆ.

ಈಗಾಗಲೇ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಸಂಚಾರ ನಿಯಮದಲ್ಲಿ ಸಾಕಷ್ಟು ಬದಲಾವಣೆಯನ್ನು ಜಾರಿಗೊಳಿಸಿದ್ದರು. ಇದೀಗ ವಾಹನ ಸವಾರರಿಗೆ ಸಿಹಿ ಸುದ್ದಿ ಲಭಿಸಿದೆ. ಸಂಚಾರ ನಿಯಮ ಉಲ್ಲಂಘನೆಯ ದಂಡದಲ್ಲಿ ಮತ್ತೆ ರಿಯಾಯಿತಿ ಘೋಷಿಸಲಾಗಿದೆ.

ವಾಹನ ಸವಾರರಿಗೆ ಗುಡ್ ನ್ಯೂಸ್
ರಸ್ತೆಗಳಲ್ಲಿ ಟ್ರಾಫಿಕ್ ಸಮಸ್ಯೆಯನ್ನು ನಿವಾರಿಸಲು ವಿವಿಧ ನಿಯಮವನ್ನು ಅಳವಡಿಸಲಾಗುತ್ತದೆ. ಸಂಚಾರ ನಿಯಮವನ್ನು ಉಲ್ಲಂಘಿಸಿದರೆ ವಾಹನ ಸವಾರರಿಗೆ ಹೆಚ್ಚಿನ ದಂಡ ವಿಧಿಸಲಾಗುತ್ತದೆ.

traffic rules and fine updates
Image Credit: Timesnownews

ಇನ್ನು ಕೆಲವು ತಿಂಗಳ ಹಿಂದೆ ಸಂಚಾರ ನಿಯಮ ಉಲ್ಲಂಘಿಸಿದ ಪ್ರಕರಣಗಳಿಗೆ ಶೇ. 50 ರಷ್ಟು ರಿಯಾಯಿಯನ್ನು ಘೋಷಿಸಲಾಯಿತು. ಇದೀಗ ಮತ್ತೆ ಸಂಚಾರ ನಿಯಮ ಉಲ್ಲಂಘನೆಯ ದಂಡವನ್ನು ಶೇ. 50 ರಷ್ಟು ರಿಯಾಯಿತಿ ನೀಡಲಾಗಿದೆ.

ಸಂಚಾರ ನಿಯಮ ಉಲ್ಲಂಘನೆಯ ದಂಡದಲ್ಲಿ ಮತ್ತೆ ಶೇ. 50 ರಷ್ಟು ರಿಯಾಯಿತಿ
ಸಂಚಾರ ನಿಯಮ ಉಲ್ಲಂಘಿಸಿ ದಾಖಲಾಗಿರುವಂತ ದಂಡದ ಪಾವತಿಗಾಗಿ ಸಂಚಾರಿ ಪೊಲೀಸರು ಮತ್ತೆ ಶೇ.50ರಷ್ಟು ದಂಡದಲ್ಲಿ ರಿಯಾಯಿತಿ ಮುಂದುವರೆಸಲು ಮುಂದಾಗಿದ್ದಾರೆ ಎನ್ನುವ ಬಗ್ಗೆ ವರದಿಯಾಗಿದೆ. ಈ ಹಿಂದೆ ಕೂಡ ನಿಯಮ ಉಲ್ಲಂಘನೆ ಮಾಡಿದವರಿಗೆ ರಿಯಾಯಿತಿ ನೀಡಲಾಗಿತ್ತು.

Join Nadunudi News WhatsApp Group

ಇದೀಗ ಮತ್ತೆ ಸಂಚಾರ ನಿಯಮದಲ್ಲಿ 50 % ರಿಯಾಯಿತಿಯನ್ನು ನೀಡಲಾಗುತ್ತಿದೆ. ಸಂಚಾರ ನಿಯಮ ಉಲ್ಲಂಘಿಸುವವರಿಗೆ ಶೇ. 50 ರ ರಿಯಾಯಿತಿಯೊಂದಿಗೆ ದಂಡ ಪಾವತಿಸುವ ಅವಕಾಶವನ್ನು ನೀಡಲಾಗುತ್ತಿದೆ.

traffic rules and fine updates
Image Credit: Thehindu

ಸಂಚಾರ ನಿಯಮ ಉಲ್ಲಂಘಿಸಿದರೆ ಕಟ್ಟಬೇಕು ಹೆಚ್ಚಿನ ದಂಡ
ವಾಹನ ಚಾಲಕರು ಡ್ರೈವಿಂಗ್ ಲೈಸೆನ್ಸ್ ಅನ್ನು ಹೊಂದಿಲ್ಲದಿದ್ದರೆ 5 ಸಾವಿರ ದಂಡ ವಿದಿಸಬೇಕಾಗುತ್ತದೆ. ಇನ್ನು ಆರ್ ಸಿ (ನೋಂದಣಿ ಪ್ರಮಾಣ ಪತ್ರ) ನೋಂದಣಿ ಪ್ರಮಾಣ ಪತ್ರ, ವಾಹನ ವಿಮ ಪ್ರಮಾಣಪತ್ತ್ರ  ಹೊಂದಿಲ್ಲದಿದ್ದರೆ 10,000 ದಂಡ ಹಾಗೂ 6 ತಿಂಗಳು ಜೈಲು ಶಿಕ್ಷೆಯನ್ನು ವಿದಿಸಬೇಕಾಗುತ್ತದೆ. ಪದೇಪದೇ ಈ ತಪ್ಪಾದರೆ ದಂಡದ ಮೊತ್ತವು 15,000 ಹಾಗೂ 2 ವರ್ಷದ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

Join Nadunudi News WhatsApp Group