Free Two Wheeler: ಗೃಹಲಕ್ಷ್ಮಿ ಜಾರಿ ಬೆನ್ನಲ್ಲೇ ಉಚಿತ ದ್ವಿಚಕ್ರ ವಾಹನ ಯೋಜನೆಗೆ ಜಾರಿಗೆ ತಂದ ಸರ್ಕಾರ, ಇಂದೇ ಅರ್ಜಿ ಸಲ್ಲಿಸಿ.

ಹಲವು ಯೋಜನೆಗಳ ಬನ್ನೆಲ್ಲೆ ಈಗ ರಾಜ್ಯ ಸರ್ಕಾರ ಉಚಿತ ದ್ವಿಚಕ್ರ ವಾಹನ ಕೊಡುವ ಯೋಜನೆಯನ್ನ ಜಾರಿಗೆ ತಂದಿದೆ.

Two Wheeler Distribution For Disabled People: ರಾಜ್ಯ ಸರ್ಕಾರ ಇತ್ತೀಚಿಗೆ ಜನಸಾಮಾನ್ಯರಿಗಾಗಿ ವಿವಿಧ ಯೋಜನೆಯನ್ನು ಬಿಡುಗಡೆ ಮಾಡುತ್ತಿದೆ. ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ 14 ನೇ ಬಾರಿಯ ಬಜೆಟ್ ಮಂಡನೆ ಮಾಡಿದ್ದಾರೆ. ಈ ವೇಳೆ ವಿವಿಧ ಯೋಜನೆಗಳ ಅನುಷ್ಠಾನದ ಕುರಿತು ಚರ್ಚೆ ನಡೆಸಲಾಗಿದೆ.

ಇನ್ನು ರಾಜ್ಯ ಸರ್ಕಾರ ಘೋಷಿಸಿರುವ ಐದು ಯೋಜನೆಗಳನ್ನು ಶೀಘ್ರದಲ್ಲೇ ಜನರಿಗೆ ತಲುಪುವಂತೆ ಮಾಡಲಾಗುತ್ತದೆ ಎಂದಿದ್ದಾರೆ. ಇನ್ನು ಈಗಾಗಲೇ ರಾಜ್ಯದಲ್ಲಿ ಶಕ್ತಿ ಯೋಜನೆ, ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಅನ್ನಭಾಗ್ಯ ಯೋಜನೆಗಳ ಅನುಷ್ಠಾನದ ಬಗ್ಗೆ ಮಾಹಿತಿ ಹೊರಬಿದ್ದಿದೆ. ಇನ್ನೇನು ಕೆಲವೇ ದಿನಗಳಲ್ಲಿ ಜನರು ಈ ನಾಲ್ಕು ಯೋಜನೆಗಳ ಲಾಭವನ್ನು ಪಡೆಯಲಿದ್ದಾರೆ.

Special facility for Disabled People
Image Credit: Indiamart

ರಾಜ್ಯದ ವಿಕಲಚೇತನರಿಗೆ ವಿಶೇಷ ಸೌಲಭ್ಯ
ಇನ್ನು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯ ಅನುಷ್ಠಾನದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗಷ್ಟೇ ಘೋಷಣೆ ಹೊರಡಿಸಿದ್ದಾರೆ.

ಸದ್ಯದಲ್ಲೇ ಯೋಜನೆಯ ಅರ್ಜಿ ಸಲ್ಲಿಕೆ ಆರಂಭವಾಗುವ ಬಗ್ಗೆ ಮಾಹಿತಿ ನೀಡಿದ್ದಾರೆ. ಇನ್ನು ಐದು ಯೋಜನೆಗಳ ಅನುಷ್ಠಾನದ ಜೊತೆಗೆ ಇದೀಗ ರಾಜ್ಯ ಸರ್ಕಾರ ಇನ್ನೊಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಸರ್ಕಾರ ರಾಜ್ಯದ ವಿಕಲಚೇತನರಿಗೆ ವಿಶೇಷ ಸೌಲಭ್ಯ ನೀಡಲು ಮುಂದಾಗಿದೆ. ವಿಕಲಚೇತನರು ಸರ್ಕಾರದ ಈ ವಿಶೇಷ ಸೌಲಭ್ಯದ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.

ಸದ್ಯದಲ್ಲೇ ವಿಕಲಚೇತನರಿಕೆ ದ್ವಿಚಕ್ರ ವಾಹನ ವಿತರಣೆ
ಇದೀಗ ರಾಜ್ಯದಲ್ಲಿರುವ ವಿಕಲಚೇತನರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಎಲ್ಲಾ ವಿಕಲಚೇತನರಿಗೆ ಒಂದೇ ಬಾರಿಗೆ ದ್ವಿಚಕ್ರ ವಾಹನ ನೀಡಲು ನಿರ್ಧರಿಸಲಾಗಿದೆ. ವಿಕಲಚೇತನರಿಕೆ ದ್ವಿಚಕ್ರ ವಾಹನ ವಿತರಿಸುದರ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.

Join Nadunudi News WhatsApp Group

Two Wheeler Distribution For Disabled People
Image Credit: Sidewheelattachmentkit

ಈ ಬಗ್ಗೆ ಮಾತನಾಡಿದ ಅವರು ” ರಾಜ್ಯದಲ್ಲಿರುವ ಎಲ್ಲಾ ವಿಕಲಚೇತನರಿಗೆ ಅವರ ಅಗತ್ಯತೆ ಆದಾರಿಸಿ ಒಂದು ಬಾರಿಗೆ ದ್ವಿಚಕ್ರ ವಾಹನ ನೀಡಲು ತೀರ್ಮಾನಿಸಲಾಗಿದೆ. ಆದ್ದರಿಂದ ಅರ್ಹ ವ್ಯಕ್ತಿಗಳ ಮಾಹಿತಿಯನ್ನು ಸಂಗ್ರಹಿಸಬೇಕು.

ಹೆಸ್ಕಾಂ ನಿರ್ಲಕ್ಷ್ಯದಿಂದ ವಿದ್ಯುತ್ ತಂತಿ ತಗುಲಿ ಮರಣ ಹೊಂದಿರುವವರಿಗೆ ಕೂಡಲೇ ಪರಿಹಾರವನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು” ಎಂದು ಮಾಹಿತಿ ನೀಡಿದ್ದಾರೆ. ಇನ್ನು ಗೃಹ ಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಿ ಯೋಜನೆಯ ಲಾಭವನ್ನು ಪಡೆದುಕೊಳ್ಳಿ ಎಂದಿದ್ದಾರೆ.

Join Nadunudi News WhatsApp Group